Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 20,2026

ಶಾಸಕರಿಗೆ ಅಭಿನಂದಿಸಿದ ಮಹಿಪಾಲರಡ್ಡಿ ಡಿಗ್ಗಾವಿ

ವಿಬಿ ರಾಮಜಿ ಯೋಜನೆಯಿಂದಗ್ರಾಮೀಣರ ಜೀವನೋಪಾಯಕ್ಕೆ ಬಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರಜಾಪ್ರಭುತ್ವ ಬಲಪಡಿಸುವುದು ಸರ್ವರ ಕರ್ತವ್ಯ: ಡಾ.ಮನಗೂಳಿ
(ರಾಜ್ಯ ) ಜಿಲ್ಲೆ

ಪ್ರಜಾಪ್ರಭುತ್ವ ಬಲಪಡಿಸುವುದು ಸರ್ವರ ಕರ್ತವ್ಯ: ಡಾ.ಮನಗೂಳಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಇತ್ತೀಚಿನ ದಿನಮಾನಗಳಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲೂ ವ್ಯಾಪಾರೀಕರಣದ ಪ್ರವೃತ್ತಿ ಹೆಚ್ಚುತ್ತಿರುವುದರಿಂದ ಮೌಲ್ಯಗಳು ಕುಸಿಯುತ್ತಿವೆ. ಪ್ರಜಾಪ್ರಭುತ್ವದ ವ್ಯಾಪಾರೀಕರಣ ಮುಂದುವರಿದರೆ ಜಾಗತಿಕ ಮಟ್ಟದಲ್ಲಿ ಗಂಭೀರ ಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ವಿದ್ಯಾರ್ಥಿಗಳು ಸಂವಿಧಾನವನ್ನು ಆಳವಾಗಿ ಅಧ್ಯಯನ ಮಾಡುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಳಿಸಬೇಕು ಎಂದು ನಿವೃತ್ತ ಪ್ರಾಧ್ಯಾಪಕ ಡಾ. ಅರವಿಂದ ಮನಗೂಳಿ ಹೇಳಿದರು.
ಸಿಂದಗಿ ನಗರದ ಡಾ.ಅಂಬೇಡ್ಕರ್ ಭವನದಲ್ಲಿ ತಾಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಯುವ ಸಂಸತ್ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು, ಪ್ರಜಾಪ್ರಭುತ್ವ ಎಂದರೆ ಕೇವಲ ಚುನಾವಣೆ ನಡೆಸುವುದಲ್ಲ. ಡಾ. ಬಿ.ಆರ್. ಅಂಬೇಡ್ಕರ್ ಅವರು ವೈಜ್ಞಾನಿಕ ತಳಹದಿಯ ಮೇಲೆ ಸಂವಿಧಾನವನ್ನು ರೂಪಿಸಿದ್ದು, ಅದರ ಆಶಯಗಳನ್ನು ಅರ್ಥಮಾಡಿಕೊಂಡು ಅನುಷ್ಠಾನಗೊಳಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ನಾಗರಿಕನೂ ಭಾಗಿಯಾಗುವಾಗ ಮಾತ್ರ ಪ್ರಜಾಪ್ರಭುತ್ವಕ್ಕೆ ನಿಜವಾದ ಅರ್ಥ ಬರುತ್ತದೆ. ಎಲ್ಲ ರಂಗಗಳಲ್ಲೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸುವಲ್ಲಿ ಮಾಧ್ಯಮ ಕ್ಷೇತ್ರವೂ ಪ್ರಮುಖ ಪಾತ್ರ ವಹಿಸುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.
ಈ ವೇಳೆ ವಕೀಲರ ಸಂಘದ ಅಧ್ಯಕ್ಷ ಎಸ್.ಬಿ. ಪಾಟೀಲ ಗುಂದಗಿ ಮಾತನಾಡಿ, ವಿಶ್ವದಲ್ಲೇ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಭಾರತ ಗುರುತಿಸಿಕೊಂಡಿದೆ. ಸಂವಿಧಾನದ ಮಹತ್ವವನ್ನು ಪರಿಚಯಿಸುವ ಇಂತಹ ಕಾರ್ಯಕ್ರಮಗಳು ಅತ್ಯಂತ ಅಗತ್ಯವಾಗಿವೆ. ಸಂವಿಧಾನ ರಚನೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆಯನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ಕರೆಪ್ಪ ಬೆಳ್ಳಿ ಮಾತನಾಡಿ, ಯುವ ಸಂಸತ್ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಿಗೆ ಸಂಸತ್ತಿನ ಹಾಗೂ ವಿಧಾನಸಭೆಯ ಕಾರ್ಯಕಲಾಪಗಳ ಬಗ್ಗೆ ಪ್ರಾಯೋಗಿಕ ಅರಿವು ಮೂಡಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯ ವಿವಿಧ ಹಂತಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಗುತ್ತಿದೆ. ವಿದ್ಯಾರ್ಥಿಗಳು ಸಂವಿಧಾನವನ್ನು ಓದಿ, ವಿಧಾನಸಭೆಯಲ್ಲಿ ನಡೆಯುವ ಕಾರ್ಯಕಲಾಪಗಳನ್ನು ತಿಳಿದುಕೊಳ್ಳುವ ಮೂಲಕ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ತಾಪಂ ಎಇಇ ಅನೀಲ ಹಳ್ಳಿ ವೇದಿಕೆಯಲ್ಲಿದ್ದರು.
ಶಿಕ್ಷಣ ಸಂಯೋಜಕ ಬಿ.ಡಿ.ಪಾಟೀಲ ಸ್ವಾಗತಿಸಿದರು. ಗ್ರೇಡ್-೨ ತಹಶೀಲ್ದಾರ ಎಂ.ಜಿ.ಬಿರಾದಾರ ಸಂವಿಧಾನದ ಪೀಠಿಕೆಯನ್ನು ವಾಚಿಸಿದರು. ಬಾಗೇಶ ಗೋಲಗೇರಿ ನಿರೂಪಿಸಿದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಭವಾನಿ ಪಾಟೀಲ ವಂದಿಸಿದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 20,2026

ಶಾಸಕರಿಗೆ ಅಭಿನಂದಿಸಿದ ಮಹಿಪಾಲರಡ್ಡಿ ಡಿಗ್ಗಾವಿ

ವಿಬಿ ರಾಮಜಿ ಯೋಜನೆಯಿಂದಗ್ರಾಮೀಣರ ಜೀವನೋಪಾಯಕ್ಕೆ ಬಲ

ಜನರ ಸಮಸ್ಯೆಗೆ ತಕ್ಷಣ ಸ್ಪಂದಿಸಿ, ಇಲ್ಲವೇ ಕ್ರಮ ಎದುರಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 20,2026
    In ದಿನಪತ್ರಿಕೆ
  • ಶಾಸಕರಿಗೆ ಅಭಿನಂದಿಸಿದ ಮಹಿಪಾಲರಡ್ಡಿ ಡಿಗ್ಗಾವಿ
    In (ರಾಜ್ಯ ) ಜಿಲ್ಲೆ
  • ವಿಬಿ ರಾಮಜಿ ಯೋಜನೆಯಿಂದಗ್ರಾಮೀಣರ ಜೀವನೋಪಾಯಕ್ಕೆ ಬಲ
    In (ರಾಜ್ಯ ) ಜಿಲ್ಲೆ
  • ಜನರ ಸಮಸ್ಯೆಗೆ ತಕ್ಷಣ ಸ್ಪಂದಿಸಿ, ಇಲ್ಲವೇ ಕ್ರಮ ಎದುರಿಸಿ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆ ಅಭಿವೃದ್ಧಿಗೆ ವಿಶೇಷ ಒತ್ತು :ಶಾಸಕ ನಾಡಗೌಡ
    In (ರಾಜ್ಯ ) ಜಿಲ್ಲೆ
  • ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಶಿಕ್ಷಣದೊಂದಿಗೆ ಸಂಸ್ಕಾರವೂ ಇರಲಿ :ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
  • ಎಂ ಎನ್ ವಾಲಿ ಒಬ್ಬ ಅದಮ್ಯ ಚೇತನ :ಡಾ.ಪಡಶೆಟ್ಟಿ
    In (ರಾಜ್ಯ ) ಜಿಲ್ಲೆ
  • ಸೆ.22 ರಿಂದ ಅನಿರ್ಧಿಷ್ಟಾವಧಿ ಮುಷ್ಕರ :ಭೈರಾಮಡಿ
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಯುವ ಮತದಾರರ ಮಿಂಚಿನ ನೋಂದಣಿ ಜಾಗೃತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.