ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಾಸಾಶನ ಪಡೆಯುತ್ತಿರುವ ಸಾಹಿತಿ, ಕಲಾವಿದರು ಸೆಪ್ಟೆಂಬರ್ ತಿಂಗಳೊಳಗಾಗಿ ಜೀವಿತ ಪ್ರಮಾಣ ಪತ್ರ ಸಲ್ಲಿಸಬೇಕೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಇಲಾಖೆಯಿಂದ ಈಗಾಗಲೇ ಮಾಸಾಶನ ಪಡೆಯುತ್ತಿರುವ ಕಷ್ಟ ಪರಿಸ್ಥಿತಿಯಲ್ಲಿರುವ ಸಾಹಿತಿ, ಕಲಾವಿದರಿಗೆ ಹಾಗೂ ಮೃತಪಟ್ಟ ಕಲಾವಿದರ ಪತ್ನಿಯರಿಗೆ ನೀಡುವ ಮಾಸಾಶನಕ್ಕೆ ಸಂಬಂಧಿಸಿದಂತೆ ಪ್ರತಿ ೬ ತಿಂಗಳಿಗೊಮ್ಮೆ ಆರ್ಥಿಕ ವರ್ಷದ ಮಾರ್ಚ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಜೀವಿತ ಪ್ರಮಾಣ ಪತ್ರ ಪಡೆದು ವಿಭಾಗೀಯ ಜಂಟಿ ನಿರ್ದೇಶಕರ ಮೂಲಕ ಕೇಂದ್ರ ಕಚೇರಿಗೆ ವರದಿ ನೀಡಬೇಕಾಗಿರುತ್ತದೆ.
ಹಾಗಾಗಿ ಮಾಸಾಶನ ಪಡೆಯುವವರು ಅಗತ್ಯ ದಾಖಲೆಗಳೊಂದಿಗೆ ಆಧಾರ ಕಾರ್ಡ್ ಪ್ರತಿ, ಪಿಂಚಣಿ ಪುಸ್ತಕ ಪ್ರತಿ, ಬ್ಯಾಂಕ್ ಪಾಸ್ ಬುಕ್ ಪ್ರತಿ ಹಾಗೂ ಐಡೆಂಟಿಟಿ ಅಳತೆಯ ಫೋಟೋ, ಜೀವಿತ ಪ್ರಮಾಣ ಪತ್ರವನ್ನು ಖುದ್ದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೩೫೨-೨೫೧೨೬೧ಗೆ ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
