ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೬-೨೭ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ.೨೪ ಮತ್ತು ೨೫ರಂದು ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಪುರುಷ ಹಾಗೂ ಮಹಿಳೆಯರಿಗಾಗಿ ಆಯೋಜಿಸಲಾಗಿದೆ.
ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಫುಟ್ಬಾಲ್, ಕಬಡ್ಡಿ, ಖೋ-ಖೋ, ಕುಸ್ತಿ, ಬ್ಯಾಡ್ಮಿಂಟನ್, ಹಾಕಿ, ಹ್ಯಾಂಡ್‌ಬಾಲ್, ಟೇಬಲ್ ಟೆನಿಸ್, ಥ್ರೋಬಾಲ್, ಬಾಲ್ ಬ್ಯಾಡ್ಮಿಂಟನ್ ಹಾಗೂ ಯೋಗಾಸನ ಸೇರಿದಂತೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಲಿವೆ.ಪುರುಷ ಹಾಗೂ ಮಹಿಳೆಯರಿಗೆ ಟೆನ್ನಿಸ್, ನೆಟ್‌ಬಾಲ್, ಈಜು, ಟೇಕ್ವಾಂಡೋ, ಜುಡೋ, ಕರಾಟೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನೂ ಆಯೋಜಿಸಲಾಗಿದೆ.
ತಾಲೂಕು ಮಟ್ಟದ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಮತ್ತು ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದ ತಂಡಗಳು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಆಧಾರ್ ಕಾರ್ಡ್ ಹಾಗೂ ಆನ್‌ಲೈನ್ ನೋಂದಣಿ ಮಾಡಿರುವ ಪ್ರತಿಯನ್ನು ಕಡ್ಡಾಯವಾಗಿ ತರಬೇಕು. ಕರ್ನಾಟಕ ರಾಜ್ಯದಲ್ಲಿ ವಾಸಿಸುವ ಕ್ರೀಡಾಪಟುಗಳು ಮಾತ್ರ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ಅರ್ಹ ಕ್ರೀಡಾಪಟುಗಳು ಇಲಾಖೆಯ hಣಣಠಿs://ಜಚಿsಚಿಡಿಚಿಛಿmಛಿuಠಿ.iಟಿ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ೭೦೧೯೦೦೮೪೪೩ ಹಾಗೂ ೯೫೩೫೫೦೧೮೭೨ ಮೊಬೈಲ್ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
