ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯ ಇನ್ನರ್ ವ್ಹಿಲ್ ಕ್ಲಬ್ ಆಯೋಜಿಸಿದ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜಯಪುರದ ಶಾರದಾ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಕುಮಾರಿ ಶ್ರೀನಿಧಿ ಹೂಗಾರ ಇವಳು ಪ್ರೌಢ ಶಾಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾಳೆ.
ಪದಕದ ಜೊತೆ ನಗದು ಬಹುಮಾನವನ್ನು ಪಡೆದಿರುತ್ತಾಳೆ.
ನಗರದ ಹೃದಯ ಭಾಗದಲ್ಲಿರುವ ಗಗನ್ ಮಹಲ್ ನಲ್ಲಿ ಆಯೋಜಿಸಿದ ಚಿತ್ರಕಲಾ ಸ್ಫರ್ಧೆಯಲ್ಲಿ ವಿವಿಧ ಶಾಲೆಗಳಿಂದ ಆಗಮಿಸಿದ ಸುಮಾರು ಒಂದು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅದರಲ್ಲಿ ಶಾರದಾ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿದ್ದರು.
ಇನ್ನರ್ ವ್ಹೀಲ್ ಕ್ಲಬ್ ದ ಮುಖ್ಯಸ್ಥರು ಹಾಗೂ ಸಿಬ್ಬಂದಿ ವರ್ಗದವರು ಮತ್ತು ಪುರಾತತ್ವ ಇಲಾಖೆಯ ಮುಖ್ಯಸ್ಥರು ಬಹುಮಾನವನ್ನು ವಿತರಿಸಿದರು.
ಶಾರದಾ ಪಬ್ಲಿಕ್ ಶಾಲೆಯ ಅಧ್ಯಕ್ಷ ಸಂ.ಗು ಸಜ್ಜನ ಹಾಗೂ ಆಡಳಿತ ಮಂಡಳಿ, ಶಾಲೆಯ ಪ್ರಾಚಾರ್ಯ ಜಿಮ್ಮೇಶ್ ಪೌಲ್ ಹಾಗೂ
ಚಿತ್ರಕಲಾ ಶಿಕ್ಷಕರು, ಸಿಬ್ಬಂದಿ ವರ್ಗದದವರು ಅಭಿನಂದನೆಗಳನ್ನು ಸಲ್ಲಿಸಿ ಹರ್ಷ ವ್ಯಕ್ತಪಡಿಸಿದರು.

