ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ೨೦೨೬-೨೭ನೇ ಸಾಲಿಗೆ ನಿಗಮದ ವಿವಿಧ ಯೋಜನೆಗಳಡಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಹ ರಿಂದ (ಸೇವಾ ಸಿಂಧು ಪೋರ್ಟಲ್) ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಜಿ ಸಲ್ಲಿಕೆಗೆ ಸೆ. ೩೦ ಕೊನೆಯ ದಿನ. (ಶೈಕ್ಷಣಿಕ ಸಾಲದ ಯೋಜನೆಗಳನ್ನು ಹೊರತುಪಡಿಸಿ) ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸದು ಹಾಗೂ ನವೀಕರಣ), ಗಂಗಾ ಕಲ್ಯಾಣ ಯೋಜನೆ (ಕನಿಷ್ಠ ೨ ಎಕರೆ ಜಮೀನು ಹೊಂದಿರಬೇಕು), ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆ (ವಾರ್ಷಿಕ ವರಮಾನ ರೂ. ೧೫.೦೦ ಲಕ್ಷದೊಳಗಿರಬೇಕು), ಸ್ವಾತಂತ್ರ‍್ಯ ಅಮೃತ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ / ಜಿಗ್ -ಜಾಗ್ ಯೋಜನೆಗಳಿಗೆ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿದೆ.
ಜನರಲ್ ಯೋಜನೆಗಳಿಗೆ ೧೮ ರಿಂದ ೫೫ ವರ್ಷದೊಳಗಿನವರಿರಬೇಕು. ಕುಟುಂಬದ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶಕ್ಕೆ ೯೮,೦೦೦ ರೂ. ಹಾಗೂ ನಗರ ಪ್ರದೇಶಕ್ಕೆ ೧,೨೦,೦೦೦ ರೂ. ಒಳಗಿರಬೇಕು.ಅರ್ಜಿದಾರರ ಮೊಬೈಲ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆ ಸಂಖ್ಯೆ ಆಧಾರ್ ಕಾರ್ಡ್ಗೆ ಜೋಡಣೆಯಾಗಿರಬೇಕು. ಮಹಿಳೆಯರಿಗೆ ಶೇ.೩೩ರಷ್ಟು ವಿಕಲಚೇತನರಿಗೆ ಶೇ.೫ರಷ್ಟು ಹಾಗೂ ತೃತೀಯ ಲಿಂಗಿಗಳಿಗೆ ಶೇ ೧ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. ಆಸಕ್ತರು ಬೆಂಗಳೂರು-ಒನ್, ಕರ್ನಾಟಕ-ಒನ್, ಅಟಲ್-ಜಿ ಜನಸ್ನೇಹಿ ಕೇಂದ್ರ ಅಥವಾ ನಾಗರಿಕ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ (ಸೇವಾ ಸಿಂಧು) ಮೂಲಕ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಿಗಮದ ಅಧಿಕೃತ ವೆಬ್‌ಸೈಟ್ hಣಣಠಿs://ಞvಛಿಜಛಿಟ.ಞಚಿಡಿಟಿಚಿಣಚಿಞಚಿ.gov.iಟಿ ಅಥವಾ ದೂರವಾಣಿ ಸಂಖ್ಯೆ ೦೮೦-೨೨೩೭೪೮೪೮ / ೭೮೯೯೮೯೯೦೩೯ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.
