ವಿಶ್ವಕರ್ಮ ಜಯಂತಿಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅಭಿಮತ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜ್ಞಾನದ ಜೊತೆಗೆ ಪ್ರತಿಯೊಬ್ಬರೂ ಕೌಶಲ್ಯವನ್ನು ರೂಢಿಸಿಕೊಂಡಾಗ ಮಾತ್ರ ಯಶಸ್ವಿ ಬದುಕು ರೂಪಿಸಿಕೊಳ್ಳಲು ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭಗವಾನ ವಿಶ್ವಕರ್ಮರು ಸೃಜನಶೀಲತೆ, ಕೌಶಲ್ಯ, ಪರಿಶ್ರಮ ಹಾಗೂ ನಿರ್ಮಾಣ ಕಲೆಯ ಪ್ರತೀಕವಾಗಿದ್ದಾರೆ. ಭಾರತೀಯ ಪರಂಪರೆಯಲ್ಲಿ ವಿಶ್ವಕರ್ಮರಿಗೆ ವಿಶೇಷ ಸ್ಥಾನವಿದ್ದು, ದೇವಶಿಲ್ಪಿಯಾಗಿ ಪೂಜಿಸಲ್ಪಡುತ್ತಾರೆ ಎಂದು ಹೇಳಿದರು.
ಜಿಲ್ಲಾಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಸಂತ ಹೊನಮೋಡೆ ಅವರು ವಿಶ್ವಕರ್ಮ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾಶೀನಥ ಕೋಣೆನವರ ಅವರು ಉಪನ್ಯಾಸ ನೀಡಿದರು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಹೇಶ ಪೋತದಾರ ಅವರು ಮಾತನಾಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ ಸ್ವಾಗತಿಸಿದರು. ಮೋಹನ ಕಟ್ಟಿಮನಿ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಅಂಗವಾಗಿ ಶ್ರೀದೇವಿ ಪತ್ತಾರ ಹಾಗೂ ತಂಡದವರಿಂದ ನಡೆದ ಸಂಗೀತ ಕಾರ್ಯಕ್ರಮವು ಸಭಿಕರ ಮನಸೂರೆಗೊಳಿಸಿತು.
ಕಾರ್ಯಕ್ರಮದಲ್ಲಿ ಮೂರುಜಾವರ ಮಠದ ಮಹೇಂದ್ರ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು.
ಜಿಲ್ಲಾ ಪಂಚಾಯಿತಿಯ ಉಪ ನಿರ್ದೇಶಕರಾದ ನಾಗಭೂಷಣ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಲ್ಲನಗೌಡ ಬಿರಾದಾರ, ವಲಯ ಉಪ ಆಯುಕ್ತ ಮೋಹನ ಜಾಧವ, ಮನೋಹರ ಪತ್ತಾರ ಸೇರಿದಂತೆ ವಿಶ್ವಕರ್ಮ ಸಮಾಜದ ಮುಖಂಡರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.
ವಿಶ್ವಕರ್ಮರ ಭಾವಚಿತ್ರದ ಮೆರವಣಿಗೆ
ವೇದಿಕೆ ಕಾರ್ಯಕ್ರಮಕ್ಕೂ ಮೊದಲು ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಿಂದ ವಿಶ್ವಕರ್ಮರ ಭಾವಚಿತ್ರದ ಮೆರವಣಿಗೆ ಚಾಲನೆ ದೊರೆತು,ನಗರದ ಕಂದಗಲ್ ಶ್ರೀ ಕಂದಗಲ್ ಶ್ರಿ ಹನುಮಂತರಾಯ ರಂಗಮಂದಿರದಲ್ಲಿ ಸಮಾವೇಶಗೊಂಡಿತು.

