Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದ್ಯಮಗಳಿಗೆ ಬೆಂಬಲ ನೀಡಿದಾಗ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ

ನಂಬಿಕೆಯೇ ಸಹಕಾರಿ ಸಂಸ್ಥೆಗಳ ಯಶಸ್ಸಿನ ಮೂಲ :ನಿರಾಣಿ

ಸೆ.೩೦ ರೊಳಗೆ ಇಂಡಿ ತಾಲೂಕು ಬರಪೀಡಿತವೆಂದು ಘೋಷಣೆ ಸಾದ್ಯತೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಂಬಿಕೆಯೇ ಸಹಕಾರಿ ಸಂಸ್ಥೆಗಳ ಯಶಸ್ಸಿನ ಮೂಲ :ನಿರಾಣಿ
(ರಾಜ್ಯ ) ಜಿಲ್ಲೆ

ನಂಬಿಕೆಯೇ ಸಹಕಾರಿ ಸಂಸ್ಥೆಗಳ ಯಶಸ್ಸಿನ ಮೂಲ :ನಿರಾಣಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿಯಲ್ಲಿ ವಿಶಾಲ ಸೌಹಾರ್ದ ಪತ್ತಿನ ಸಹಕಾರಿ ಸಂಘದ ೧೨ನೇ ಶಾಖೆ ಉದ್ಘಾಟನೆ

ಉದಯರಶ್ಮಿ ದಿನಪತ್ರಿಕೆ

ಇಂಡಿ: ಸ್ಥಳೀಯ ಗ್ರಾಮೀಣ ಹಾಗೂ ನಗರ ಪ್ರದೇಶದ ಜನರಿಗೆ ಆರ್ಥಿಕ ಶಕ್ತಿ ತುಂಬುವ ಮತ್ತು ಸಹಕಾರಿ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗುವ ನಿಟ್ಟಿನಲ್ಲಿ, ಇಂಡಿ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶಾಲ ಸೌಹಾರ್ದ ಪತ್ತಿನ ಸಹಕಾರಿ ಸಂಘದ ೧೨ನೇ ಶಾಖೆಯ ಉದ್ಘಾಟನಾ ಸಮಾರಂಭವು ಅತ್ಯಂತ ಯಶಸ್ವಿಯಾಗಿ ಜರುಗಿತು.
ಕಾರ್ಯಕ್ರಮದ ಸಾನಿಧ್ಯವನ್ನು ಶಿರಶ್ಯಾಡ ಹಿರೇಮಠದ ಅಭಿನವ ಮುರುಘೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಿ ಆಶೀರ್ವಚನ ನೀಡಿ, “ಸಹಕಾರ ಮನೋಭಾವನೆ ಮತ್ತು ನಂಬಿಕೆಯೇ ಸಹಕಾರಿ ಸಂಸ್ಥೆಗಳ ಯಶಸ್ಸಿನ ಮೂಲ ಮಂತ್ರ. ಈ ಸಂಸ್ಥೆಯು ಸಾರ್ವಜನಿಕರ ಆರ್ಥಿಕ ಪ್ರಗತಿಗೆ ನಿರಂತರವಾಗಿ ಶ್ರಮಿಸಲಿ” ಎಂದು ಶ್ರೀಗಳು ಆಶೀರ್ವದಿಸಿದರು.
ಸಹಕಾರಿ ಸಂಘದ ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಮುರುಗೇಶ್ ನಿರಾಣಿ, “ಸಹಕಾರಿ ಕ್ಷೇತ್ರವು ಕೇವಲ ಹಣಕಾಸು ವಹಿವಾಟಿಗೆ ಸೀಮಿತವಾಗಿರದೆ, ಸಾಮಾನ್ಯ ಜನರ ಬದುಕಿಗೆ ಆಸರೆಯಾಗಬೇಕು. ವಿಶಾಲ ಸೌಹಾರ್ದ ಸಹಕಾರಿ ಸಂಘವು ಮುಂಬರುವ ದಿನಗಳಲ್ಲಿ ಇಂಡಿ ಭಾಗದ ರೈತರು, ಸಣ್ಣ ವ್ಯಾಪಾರಿಗಳು ಮತ್ತು ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಭದ್ರ ಬುನಾದಿ ಹಾಕಲಿದೆ. ಈ ೧೨ನೇ ಶಾಖೆಯು ಗ್ರಾಹಕರಿಗೆ ಅತ್ಯುತ್ತಮ, ಪಾರದರ್ಶಕ ಹಾಗೂ ಗುಣಮಟ್ಟದ ಬ್ಯಾಂಕಿಂಗ್ ಸೇವೆಗಳನ್ನು ನೀಡುವ ಮೂಲಕ ಈ ಭಾಗದ ಜನರ ವಿಶ್ವಾಸ ಗಳಿಸಲಿದೆ” ಎಂದು ಆಶಯ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಇಂಡಿ ಮತಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಮಾತನಾಡಿ, “ಇಂಡಿ ನಗರಕ್ಕೆ ಇಂತಹ ಪ್ರಮುಖ ಸಹಕಾರಿ ಸಂಸ್ಥೆಗಳ ಅವಶ್ಯಕತೆ ಹೆಚ್ಚಾಗಿದೆ. ಮುರುಗೇಶ್ ನಿರಾಣಿ ಅವರ ನೇತೃತ್ವದಲ್ಲಿ ಸಂಸ್ಥೆಯು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ನಮ್ಮ ಭಾಗದ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ಮುಂಬರುವ ದಿನಗಳಲ್ಲಿ ಈ ಸಂಸ್ಥೆಯ ಬೆಳವಣಿಗೆಗೆ ನಮ್ಮ ಸಂಪೂರ್ಣ ಸಹಕಾರ ಇರಲಿದ್ದು, ಸ್ಥಳೀಯರಿಗೆ ಹೆಚ್ಚು ಉದ್ಯೋಗ ಹಾಗೂ ಆರ್ಥಿಕ ಸೌಲಭ್ಯಗಳು ಸಿಗುವಂತಾಗಲಿ” ಎಂದು ಹಾರೈಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಡಾ. ಸಾರ್ವಭೌಮ ಬಗಲಿ ಅವರು, ಇಂಡಿ ನಗರದಲ್ಲಿ ಈ ಸಂಸ್ಥೆಯು ಆರಂಭವಾಗಿರುವುದು ಸಂತಸ ತಂದಿದೆ. ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಸುಲಭ ಸಾಲ ಸೌಲಭ್ಯ ನೀಡುವ ಮೂಲಕ ಸಂಸ್ಥೆ ಮತ್ತಷ್ಟು ಬೆಳೆಯಲಿ ಎಂದು ಶುಭ ಕೋರಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ ಮಾತನಾಡಿ, ಸಹಕಾರಿ ರಂಗದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ನಿರಾಣಿ ಅವರ ಕೊಡುಗೆ ದೊಡ್ಡದಾಗಿದ್ದು, ಈ ಶಾಖೆಯು ಸ್ಥಳೀಯರ ಆರ್ಥಿಕ ಅಗತ್ಯತೆಗಳನ್ನು ಪೂರೈಸಲಿದೆ ಎಂದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸೌಮ್ಯ ಕಲ್ಲೂರ, ಪ್ರಮುಖರಾದ ಮಂಜುನಾಥ ವಂದಾಲ, ಸಂಸ್ಥೆಯ ನಿರ್ದೇಶಕ ಹಾಗೂ ವಿಧಾನಪರಿಷತ್ ಸದಸ್ಯ ಹಣಮಂತ ನಿರಾಣಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶಂಕರಗೌಡ ಪಾಟೀಲ, ಬಿ.ಡಿ. ಪಾಟೀಲ, ಕಾಸುಗೌಡ ಬಿರಾದಾರ ಮಾತನಾಡಿದರು.
ಅನೀಲ ಏಳಗಿ, ಅನೀಲ ಜಮಾದಾರ, ಸೋಮು ನಿಂಬರಗಿಮಠ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದ್ಯಮಗಳಿಗೆ ಬೆಂಬಲ ನೀಡಿದಾಗ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ

ಸೆ.೩೦ ರೊಳಗೆ ಇಂಡಿ ತಾಲೂಕು ಬರಪೀಡಿತವೆಂದು ಘೋಷಣೆ ಸಾದ್ಯತೆ

ಸಿಂದಗಿ-ಆಲಮೇಲ ತಾಲೂಕುಗಳು ಬರಪೀಡಿತವೆಂದು ಘೋಷಣೆ

ಸ್ವಾಮಿ ರಾಮಾನಂದ ತೀರ್ಥರ ಸ್ಮಾರಕ ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದ್ಯಮಗಳಿಗೆ ಬೆಂಬಲ ನೀಡಿದಾಗ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ
    In (ರಾಜ್ಯ ) ಜಿಲ್ಲೆ
  • ನಂಬಿಕೆಯೇ ಸಹಕಾರಿ ಸಂಸ್ಥೆಗಳ ಯಶಸ್ಸಿನ ಮೂಲ :ನಿರಾಣಿ
    In (ರಾಜ್ಯ ) ಜಿಲ್ಲೆ
  • ಸೆ.೩೦ ರೊಳಗೆ ಇಂಡಿ ತಾಲೂಕು ಬರಪೀಡಿತವೆಂದು ಘೋಷಣೆ ಸಾದ್ಯತೆ
    In (ರಾಜ್ಯ ) ಜಿಲ್ಲೆ
  • ಸಿಂದಗಿ-ಆಲಮೇಲ ತಾಲೂಕುಗಳು ಬರಪೀಡಿತವೆಂದು ಘೋಷಣೆ
    In (ರಾಜ್ಯ ) ಜಿಲ್ಲೆ
  • ಸ್ವಾಮಿ ರಾಮಾನಂದ ತೀರ್ಥರ ಸ್ಮಾರಕ ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಲಿ
    In (ರಾಜ್ಯ ) ಜಿಲ್ಲೆ
  • ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಅನುದಾನ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಜನ್ಮದಿನ ಪ್ರಯುಕ್ತ ಅಭಿಮಾನಿಗಳಿಂದ ಪೂಜೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿಯಲ್ಲಿ ವಿಶ್ವಕರ್ಮ ಜಯಂತ್ಯುತ್ಸವ
    In (ರಾಜ್ಯ ) ಜಿಲ್ಲೆ
  • ಭಕ್ತಿಯ ಪುರ & ಹೃದಯವಂತರ ಬೀಡಾಗಿರುವ ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ಜ್ಞಾನದ ಜೊತೆಗೆ ಕೌಶಲ್ಯ ರೂಢಿಸಿಕೊಂಡಾಗ ಯಶಸ್ವಿ ಬದುಕು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.