ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಜಯಪುರ ನಗರದಲ್ಲಿ ಸೆಪ್ಟೆಂಬರ್ ೧೯ರಂದು ಪ್ರಜಾಸೇವಾ ಅಭಿಯಾನ ತಾಲೂಕ ಮಟ್ಟದ ಕಾರ್ಯಕ್ರಮ ಆಯೋಜಿಸಲಾಗಿದೆ. ವಿಜಯಪುರ ನಗರದ ಎಪಿಎಂಸಿ ಸಮೀಪದ ನೀಲಕಂಠೇಶ್ವರ ಮಂಗಳ ಕಾರ್ಯಾಲಯದಲ್ಲಿ ಬೆಳಿಗ್ಗೆ ೯ ಗಂಟೆಯಿಂದ ಕಾರ್ಯಕ್ರಮ ನಡೆಯಲಿದ್ದು, ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಕ್ರಮದಲ್ಲಿ ಖುದ್ದಾಗಿ ಹಾಜರಿದ್ದು, ಅಭಿಯಾನವನ್ನು ಯಶಸ್ವಿಗೊಳಿಸಲು ಸಕ್ರಿಯವಾಗಿ ಭಾಗವಹಿಸುವಂತೆ ವಿಜಯಪುರ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
