ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ ಅಂಗವಾಗಿ ಅರ್ಹ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಸಂಬಂಧಿಸಿದಂತೆ ಜಿಲ್ಲೆಯಾದ್ಯಂತ ಸೆಪ್ಟೆಂಬರ್ ೧೯ ಮತ್ತು ೨೦ರಂದು ಎರಡು ದಿನಗಳ ಕಾಲ ವಿಶೇಷ ಆಂದೋಲನ ಹಮ್ಮಿಕೊಳ್ಳಲಾಗಿದೆ. ಈ ಎರಡು ದಿನಗಳಂದು ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್ಒ) ಅವರು ಲಭ್ಯವಿದ್ದು, ಮತದಾರರು ತಮ್ಮ ಮತಗಟ್ಟೆಗಳಿಗೆ ಭೇಟಿ ನೀಡಿ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.
ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆ, ಹೆಸರು ತಿದ್ದುಪಡಿ, ಹಾಗೂ ವಿಳಾಸ ಬದಲಾವಣೆ ಸೇರಿದಂತೆ ಅಗತ್ಯ ಅರ್ಜಿಗಳನ್ನು ನಮೂನೆ-೬, ನಮೂನೆ-೬ಎ, ನಮೂನೆ-೭ ಹಾಗೂ ನಮೂನೆ-೮ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಕರಡು ಮತದಾರರ ಪಟ್ಟಿಯಲ್ಲಿನ ಮತದಾರರ ಹೆಸರು ಗುರುತಿಸಲು ಬಿಎಲ್ಒ ಅವರು ಸಹಕಾರ ನೀಡುವರು. ಅರ್ಹರು ಈ ವಿಶೇಷ ಆಂದೋಲನದ ಸದುಪಯೋಗ ಪಡೆದುಕೊಂಡು ತಮ್ಮ ವ್ಯಾಪ್ತಿಯ ಮತಗಟ್ಟೆಗೆ ಭೇಟಿ ನೀಡಿ, ಮತದಾರರ ಪಟ್ಟಿಗೆ ಸಂಬಂಧಿಸಿದ ಅಗತ್ಯ ಅರ್ಜಿಗಳನ್ನು ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
