Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉದ್ಯಮಿಯಾಗಿ ಹೆಚ್ಚೆಚ್ಚು ಜನರಿಗೆ ಉದ್ಯೋಗಾವಕಾಶ ಒದಗಿಸಿ
(ರಾಜ್ಯ ) ಜಿಲ್ಲೆ

ಉದ್ಯಮಿಯಾಗಿ ಹೆಚ್ಚೆಚ್ಚು ಜನರಿಗೆ ಉದ್ಯೋಗಾವಕಾಶ ಒದಗಿಸಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಅಡಿಗಲ್ಲು ಸಮಾರಂಭದಲ್ಲಿ ಸಚಿವ ಎಚ್.ಕೆ.ಪಾಟೀಲ ಕರೆ

ವಿಜಯಪುರ: ಉದ್ಯಮಿಯಾಗಿ ಹೆಚ್ಚೆಚ್ಚು ಜನರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಮೂಲಕ ಸಮಾಜದ ಅಭಿವೃದ್ಧಿಗೆ ಮುಂದಾಗಬೇಕು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್. ಕೆ. ಪಾಟೀಲ ಕರೆ ನೀಡಿದ್ದಾರೆ.
ವಿಜಯಪುರ ಜಿಲ್ಲೆಯ ಹಿಟ್ಟಿನಹಳ್ಳಿಯಲ್ಲಿ ಶ್ರೀ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಸೇವಾ ಸಮಿತಿ ವತಿಯಿಂದ ನಿರ್ಮಿಸಲಾಗುವ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಅಡಿಗಲ್ಲು ಸಮಾರಂಭ ಮತ್ತು ವಿಜಯಪುರ ನಗರದಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಸಂಸ್ಥೆ ವತಿಯಿಂದ ನಿರ್ಮಿಸಲಾಗುತ್ತಿರುವ ಆಂಗ್ಲ ಮಾಧ್ಯಮ ಶಾಲೆಯ ಕಟ್ಡಡ ಮತ್ತು ವಿದ್ಯಾರ್ಥಿ ವಸತಿ ನಿಲಯದ ಕಟ್ಡಡದ ಅಡಿಗಲ್ಲು ಹಾಗೂ ಸನ್ಮಾನ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ವಿಜಯಪುರ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ರಚನಾತ್ಮಕ ಕಾರ್ಯಕ್ರಮ ಮಾಡುವ ಜನ ಕಡಿಮೆ ಅಭಿವೃದ್ಧಿಗೆ ಪೂರಕವಾಗಿರುವ ಇಂಥ ಕಾರ್ಯಗಳನ್ನು ಮಾಡಲು ಸಾಧ್ಯ. ಆಡಳಿತ ಮಂಡಳಿ ಸಮಾಜದ ಆಸ್ತಿ ನಿರ್ಮಾಣ ಮಾಡುತ್ತಿರುವುದು ಶ್ಲಾಘನೀಯವಾಗಿದೆ. ಇವರ ಕಾಯಕಕ್ಕೆ ಸದಸ್ಯರ ಬೆಂಬಲ ಅಗತ್ಯ. ಎಲ್ಲರೂ ಒಗ್ಗಟ್ಟಾಗಿ ಪರಸ್ಪರ ವಿಶ್ವಾಸ ವ್ಯಕ್ತಪಡಿಸಿದರೆ ಕೆಲಸ ಮಾಡುವವರಿಗೆ ಪ್ರೋತ್ಸಾಹ ಸಿಗುತ್ತದೆ. ಸದಸ್ಯರ ಸಂಪೂರ್ಣ ಸಹಕಾರದಿಂದ ಇಂಥ ಯಶಸ್ವಿ ಅಭಿವೃದ್ಧಿ ಕಾರ್ಯಗಳು ಪೂರ್ಣಗೊಳ್ಳಲು ಕಾರಣವಾಗುತ್ತವೆ ಎಂದು ಅವರು ಹೇಳಿದರು.
ನಮ್ಮಲ್ಲಿ ಬಹಳಷ್ಟು ಜನ ನೌಕರಿಗಾಗಿ ಆಸೆ ಪಡುತ್ತಾರೆ. ಆದರೆ, ಅದರ ಬದಲು ಸ್ವಯಂ ಉದ್ಯೋಗದ ಕಡೆಯೂ ಒಲವು ಬೆಳೆಸಿಕೊಂಡು ನಾವೂ ಸ್ವಾವಲಂಬಿಯಾಗಿ ಉದ್ಯೋಗದಾತರಾಗಬೇಕು. ಹಣಕಾಸು ಸಂಸ್ಥೆಯಿಂದ ಶೇ. 50 ರಷ್ಟು ಜನರಿಗೆ ಸಾಲ ನೀಡಿದರೆ, ಸ್ವಯಂ ಉದ್ಯೋಗ ಕೈಗೊಳ್ಳುವವರಿಗೆ ಹಾಗೂ ಉದ್ಯೋಗ ಸೃಷ್ಠಿಸುವವರಿಗೆ ಶೇ. ಶೇ. 50 ರಷ್ಟು ಸಾಲ ನೀಡಬೇಕು. ಇದರಿಂದ ಸಮಾಜದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಹೇಳಿದ ಅವರು, ಈ ಹಿಂದೆ ಸಂಸದರಾಗಿದ್ದ ರಾಮಪ್ಪ ಬಿದರಿ ಅವರ ಮಾನವೀಯ ಮೌಲ್ಯಗಳುಳ್ಳ ರಾಜಕಾರಣ ಎಲ್ಲರಿಗೂ ಸ್ಪೂರ್ತಿಯಾಗಿದೆ. ಈಗ ಹರಿಹರದ ಶ್ರೀ ವೇಮನಾನಂದ ಸ್ವಾಮೀಜಿಗಳು ನಮಗೆಲ್ಲರಿಗೂ ಸ್ಪೂರ್ತಿ, ಪ್ರೋತ್ಸಾಹ, ಮಾರ್ಗದರ್ಶನದ ಮಾಡುವ ಮೂಲಕ ಸಮುದಾಯಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ. ದರ್ಮ ಜಾಗೃತಿ, ದೇವಸ್ಥಾನ ನಿರ್ಮಾಣ, ಮಲ್ಲಮ್ಮಳ ತತ್ವಗಳನ್ನು ಪ್ರಚಾರ ಮಾಡುತ್ತಿದ್ದಾರೆ ಸಚಿವರು ಎಂದು ತಿಳಿಸಿದರು.
ಇದಕ್ಕೂ ಮುಂಚೆ ಹಿಟ್ಟಿನಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಸಮಾಜದ ಕುಲದೇವತೆಯಾದ ಹೇಮರಡ್ಡಿ ಮಲ್ಲಮ್ಮ ನಮ್ಮ ಬದುಕು ಹೇಗಿರಬೇಕು ಎಂಬುದಕ್ಕೆ ಮಾದರಿಯಾಗಿದ್ದಾರೆ. ಸಮಾಜ ಹೇಗಿರಬೇಕು? ಮನೆತನ ಹೇಗಿರಬೇಕು? ಅಣ್ಣ- ತಮ್ಮಂದಿರು ಹೇಗಿರಬೇಕು ಎಂದು ಮಾರ್ಗದರ್ಶನ ಮಾಡಿದ್ದಾರೆ. ಈಗ ಸ್ವಾರ್ಥ ಭಾವನೆಗಳಿಂದ ಅವಿಭಕ್ತ ಕುಟುಂಬಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಇದರಿಂದ ಸರ್ವಾಂಗೀಣ ಅಭಿವೃದ್ಧಿಗೂ ಹಿನ್ನೆಡೆಯಾಗುತ್ತಿದೆ ನಾವೆಲ್ಲರೂ ಒಗ್ಗಟ್ಟಿನಿಂದ ಮುನ್ನಡೆಯಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಹರಿಹರ ಎರೇಹೊಸಳ್ಳಿ ಶ್ರೀ ಮಹಾಯೋಗಿ ವೇಮನ ಸಂಸ್ಥಾನಠದ ಶ್ರೀ ವೇಮನಾನಂದ ಮಹಾಸ್ವಾಮೀಜಿ, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಸಿ. ಎಸ್. ನಾಡಗೌಡ, ವಿಠ್ಠಲ ಧೋಂಡಿಬಾ ಕಟಕದೊಂಡ, ಬೆಂಗಳೂರಿನ ಕರ್ನಾಟಕ ರಡ್ಡಿ ಜನಸಂಘದ ನಿರ್ದೇಶಕರಾದ ಎನ್. ಶೇಕರರಡ್ಡಿ, ಕೃಷ್ಣಾರಡ್ಡಿ, ಹೇಮರಡ್ಡಿ ಮಲ್ಲಮ್ಮ ಸಂಸ್ಥೆಯ ಮುಖಂಡರಾದ ಸುರೇಶ ಸಿ. ದೇಸಾಯಿ, ಎಚ್. ಆರ್. ಮಾಚಪ್ಪನವರು, ಕೆ. ಬಿ. ಪಾಟೀಲ ಶಿರಬೂರ, ಡಾ. ಎಚ್. ವಿ. ಕರಿಗೌಡರ, ಆರ್. ಪಿ. ಕೊಡಬಾಗಿ, ಬಿ. ಎಸ್. ಬಿರಾದಾರ, ಎಸ್. ಎಲ್. ಜೀರಗಾಳ, ಕೆ. ಬಿ. ಪಾಟೀಲ, ಎಚ್. ಆರ್. ಬಿರಾದಾರ, ಯೋಗೇಶ್ವರಿ ಮಾತಾಜಿ, ಸೋಮನಾಥ ಕಳ್ಳಿಮನಿ, ಪ್ರಭುಗೌಡ ಲಿಂಗದಳ್ಳಿ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS congress public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಮಾದಕ ವಸ್ತುಗಳಿಂದ ಶರೀರದ ಮೇಲೆ ನೇರ ಪರಿಣಾಮ :ಪಿಎಸೈ ಸಚೀನ
    In (ರಾಜ್ಯ ) ಜಿಲ್ಲೆ
  • ಗ್ರಾಮದೇವತಾ ಜಾತ್ರಾಮಹೋತ್ಸವದಲ್ಲಿ ಗೀಗೀ ಪದಗಳ ಸಂಭ್ರಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.