ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಅಧ್ಯಕ್ಷತೆಯಲ್ಲಿ ಸಭೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಮನೆ ಬಾಗಿಲಿನಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಉದ್ದೇಶದಿಂದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ಅವರ ಅಧ್ಯಕ್ಷತೆಯಲ್ಲಿ, ದೇವರಹಿಪ್ಪರಗಿ ಹಾಗೂ ಸಿಂದಗಿ ಮತಕ್ಷೇತ್ರದ ಶಾಸಕರ ನೇತೃತ್ವದಲ್ಲಿ ಸೆ.೧೯ರಂದು ದೇವರಹಿಪ್ಪರಗಿ ಮತ್ತು ಸಿಂದಗಿಯಲ್ಲಿ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಸಭೆ ನಡೆಯಲಿದೆ.
ದೇವರಹಿಪ್ಪರಗಿಯಲ್ಲಿ ಬೆಳಿಗ್ಗೆ ೧೦ ಗಂಟೆಗೆ ತಹಶೀಲ್ದಾರ್ ಕಚೇರಿಯ ಪ್ರಜಾಸೌಧದಲ್ಲಿ ಹಾಗೂ ಸಿಂದಗಿಯಲ್ಲಿ ಮಧ್ಯಾಹ್ನ ೨ ಗಂಟೆಗೆ ಮಾಂಗಲ್ಯ ಭವನದಲ್ಲಿ ಸಭೆ ಆಯೋಜಿಸಲಾಗಿದೆ. ಸಾರ್ವಜನಿಕರು ಅಗತ್ಯ ದಾಖಲೆಗಳೊಂದಿಗೆ ಸಭೆಯಲ್ಲಿ ಭಾಗವಹಿಸಿ ತಮ್ಮ ಅಹವಾಲು ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಸವಲತ್ತು ಪಡೆಯಲು ಅರ್ಜಿ ಸಲ್ಲಿಸುವ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

