ಉದಯರಶ್ಮಿ ದಿನಪತ್ರಿಕೆ
ವಿಜಯಪುರ: 11ನೇ ರಾಷ್ಟ್ರೀಯ ಆಯುರ್ವೇದ ದಿನದ ಅಂಗವಾಗಿ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿ ಜಿಲ್ಲಾ ಆಯುಷ್ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ್ 22 ರಂದು ಮಂಗಳವಾರ ಉಚಿತ ಆರೋಗ್ಯ, ರಕ್ತ ತಪಾಸಣೆ(Hb ಮತ್ತು RBS) ಹಾಗೂ ಔಷಧ ವಿತರಣೆ ಕಾರ್ಯಕ್ರಮ ನಡೆಯಲಿದೆ.
ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಹೈಟೆಕ್ ಆಯುರ್ವೇದ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ ಮತ್ತು ಜಿಲ್ಲಾ ಆಯುಷ್ ಅಧಿಕಾರಿ ಡಾ. ವಿದ್ಯಾವತಿ ಅಥಣಿ ಅವರು ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಆಸ್ಪತ್ರೆಯ ಮೊ. ನಂ. 9513397413 ಸಂಪರ್ಕಿಸಬಹುದಾಗಿದೆ.
