ಉದಯರಶ್ಮಿ ದಿನಪತ್ರಿಕೆ
ಕೆಂಭಾವಿ: ಶಹಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಕೆಂಭಾವಿ ಹೋಬಳಿಯ ಗ್ರಾಮಗಳು ಹಾಗೂ ಸುರಪುರ ತಾಲೂಕನ್ನು ಬರಪೀಡಿತ ಪ್ರದೇಶಗಳೆಂದು ಸರ್ಕಾರ ಘೋಷಣೆ ಮಾಡುವಲ್ಲಿ ಯಶಸ್ವಿಯಾದ ಶಾಸಕರು ಹಾಗೂ ಮಾಜಿ ಸಚಿವರಾದ ಶರಣಬಸಪ್ಪಗೌಡ ದರ್ಶನಾಪುರ ಅವರಿಗೆ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಮಹಿಪಾಲ್ ರೆಡ್ಡಿ ಡಿಗ್ಗಾವಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಸರ್ಕಾರದ ಮೊದಲ ಹಂತದ ಬರಪೀಡಿತ ಪಟ್ಟಿಯಲ್ಲಿಯೇ ಸುರಪುರ ತಾಲೂಕು ಹಾಗೂ ಶಹಾಪುರ ವಿಧಾನಸಭಾ ಕ್ಷೇತ್ರದ ಗ್ರಾಮಗಳು ಸೇರ್ಪಡೆಯಾಗಬೇಕಿತ್ತು. ಆದರೆ, ಕೆಲ ತಾಂತ್ರಿಕ ಕಾರಣಗಳಿಂದಾಗಿ ಘೋಷಣೆ ವಿಳಂಬವಾಗಿತ್ತು. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಅವರು ಸರ್ಕಾರದ ಮಟ್ಟದಲ್ಲಿ ನಿರಂತರವಾಗಿ ಬೆನ್ನುಬಿದ್ದು, ತಾಂತ್ರಿಕ ದೋಷಗಳನ್ನು ನಿವಾರಿಸುವ ಮೂಲಕ ಕೆಂಭಾವಿ ಹೋಬಳಿ ಹಾಗೂ ಸುರಪುರ ತಾಲೂಕನ್ನು ಬರಪೀಡಿತ ಎಂದು ಘೋಷಿಸುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ” ಎಂದು ತಿಳಿಸಿದ್ದಾರೆ.
” ಸಂಕಷ್ಟದಲ್ಲಿರುವ ರೈತರ ನೆರವಿಗೆ ಧಾವಿಸಿ, ಕೆಂಭಾವಿ ಹೋಬಳಿಯ ಗ್ರಾಮಗಳನ್ನು ಬರಪೀಡಿತ ಪಟ್ಟಿಗೆ ಸೇರ್ಪಡೆಗೊಳಿಸಲು ಶ್ರಮಿಸಿದ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಅವರ ಜನಪರ ಕಾಳಜಿ ಮತ್ತು ತ್ವರಿತ ಕಾರ್ಯಪ್ರವೃತ್ತಿಗೆ ಈ ಭಾಗದ ರೈತರು ಹಾಗೂ ಸಾರ್ವಜನಿಕರು ವ್ಯಾಪಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದರಿಂದಾಗಿ ರೈತರಿಗೆ ಬರ ಪರಿಹಾರ ಹಾಗೂ ಅಗತ್ಯ ನೆರವು ಸಿಗುವಂತಾಗಿದೆ”.
– ಮಹಿಪಾಲ್ ರೆಡ್ಡಿ ಡಿಗ್ಗಾವಿ
ಯಾದಗಿರಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರು.

