Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎ.ವಿ.ಎಸ್.ಆಯುರ್ವೇದ ಕಾಲೇಜಿನಲ್ಲಿಉಚಿತ ಆರೋಗ್ಯ ತಪಾಸಣೆ

ಕಾರ್ಖಾನೆ ಉಳಿವಿಗೆ ಶಕ್ತಿಮೀರಿ ಪ್ರಯತ್ನ :ಶಾಸಕ ಪಾಟೀಲ

ನಿಗದಿತ ಅವಧಿಯಲ್ಲಿ ಗುರಿ ಸಾಧಿಸಿ, ಅನುದಾನ ಲ್ಯಾಪ್ಸ್ ಆಗದಿರಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರಶಾಂತ ಕುಲಕರ್ಣಿ ಶಿಕ್ಷಣ ಸೇವೆಗೆ ರಾಜ್ಯಮಟ್ಟದ ಗೌರವ
(ರಾಜ್ಯ ) ಜಿಲ್ಲೆ

ಪ್ರಶಾಂತ ಕುಲಕರ್ಣಿ ಶಿಕ್ಷಣ ಸೇವೆಗೆ ರಾಜ್ಯಮಟ್ಟದ ಗೌರವ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಶಿಕ್ಷಕರೊಬ್ಬರ ನಿಸ್ವಾರ್ಥ ಸೇವೆ, ವಿದ್ಯಾರ್ಥಿಗಳ ಮೇಲಿನ ಕಾಳಜಿ ಹಾಗೂ ಶಿಕ್ಷಣ ಕ್ಷೇತ್ರದ ಬದ್ಧತೆಗೆ ದೊರೆಯುವ ಗೌರವವು ಕೇವಲ ಒಬ್ಬ ವ್ಯಕ್ತಿಯ ಸಾಧನೆಯಾಗದೆ, ಇಡೀ ಶಿಕ್ಷಣ ಸಮುದಾಯದ ಹೆಮ್ಮೆಯಾಗುತ್ತದೆ. ಅಂತಹ ಹೆಮ್ಮೆಯ ಕ್ಷಣಕ್ಕೆ ಸಿಂದಗಿಯ ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕ ಶ್ರೀ ಪ್ರಶಾಂತ ಚಿದಂಬರ ಕುಲಕರ್ಣಿ ಅವರು ಪಾತ್ರರಾಗಿದ್ದಾರೆ.
ಬೆಂಗಳೂರಿನ ಟೌನ್ ಹಾಲ್‌ನಲ್ಲಿ ಸೆ.20ರಂದು ನಡೆದ ಕರ್ನಾಟಕ ಪ್ರೆಸ್ ಕ್ಲಬ್‌ನ 2026ನೇ ಸಾಲಿನ ರಾಜ್ಯ ಮಟ್ಟದ ‘ಶಿಕ್ಷಣ ಸೇವಾ ರತ್ನ’ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಾಂತ ಚಿದಂಬರ ಕುಲಕರ್ಣಿ ಅವರಿಗೆ ‘ಶಿಕ್ಷಣ ಸೇವಾ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಶಿಕ್ಷಣವೆಂದರೆ ಕೇವಲ ಪಠ್ಯಪುಸ್ತಕದ ಜ್ಞಾನವನ್ನು ನೀಡುವುದಲ್ಲ; ವಿದ್ಯಾರ್ಥಿಯೊಳಗಿನ ಪ್ರತಿಭೆಯನ್ನು ಗುರುತಿಸಿ, ಆತ್ಮವಿಶ್ವಾಸ ತುಂಬಿ, ಬದುಕಿನ ದಾರಿಯನ್ನು ತೋರಿಸುವ ಜವಾಬ್ದಾರಿಯೂ ಹೌದು. ಈ ಆಶಯದೊಂದಿಗೆ ಶಿಕ್ಷಕರಾಗಿ ತಮ್ಮ ವೃತ್ತಿಜೀವನದಲ್ಲಿ ಶೈಕ್ಷಣಿಕ ಚಟುವಟಿಕೆಗಳು, ವಿದ್ಯಾರ್ಥಿಗಳ ಮಾರ್ಗದರ್ಶನ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗೆ ನೆರವಾಗುವಂತಹ ವಿವಿಧ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಪ್ರಶಾಂತ ಕುಲಕರ್ಣಿ ಅವರ ಸೇವೆಯನ್ನು ಗುರುತಿಸಿ ಈ ರಾಜ್ಯಮಟ್ಟದ ಗೌರವ ನೀಡಲಾಗಿದೆ.
ಪ್ರಶಸ್ತಿ ಸ್ವೀಕರಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, “ಈ ಗೌರವ ನನ್ನೊಬ್ಬರ ಸಾಧನೆಯಲ್ಲ; ನನ್ನೊಂದಿಗೆ ಹೆಜ್ಜೆ ಹಾಕಿದ ವಿದ್ಯಾರ್ಥಿಗಳು, ಸಹೋದ್ಯೋಗಿಗಳು, ಸಂಸ್ಥೆಯ ಆಡಳಿತ ಮಂಡಳಿ ಹಾಗೂ ನನ್ನ ಶೈಕ್ಷಣಿಕ ಪಯಣದಲ್ಲಿ ಪ್ರೋತ್ಸಾಹ ನೀಡಿದ ಎಲ್ಲರಿಗೂ ಸಲ್ಲುತ್ತದೆ. ಈ ಪ್ರಶಸ್ತಿ ಮುಂದಿನ ದಿನಗಳಲ್ಲಿ ಇನ್ನಷ್ಟು ಜವಾಬ್ದಾರಿಯಿಂದ ಸೇವೆ ಸಲ್ಲಿಸಲು ಪ್ರೇರಣೆ ನೀಡಿದೆ” ಎಂದು ಸಂತಸ ವ್ಯಕ್ತಪಡಿಸಿದರು.
ಸಿಂದಗಿಯ ಶಿಕ್ಷಕರೊಬ್ಬರಿಗೆ ರಾಜ್ಯಮಟ್ಟದ ‘ಶಿಕ್ಷಣ ಸೇವಾ ರತ್ನ’ ಪ್ರಶಸ್ತಿ ದೊರೆತಿರುವುದು ಸ್ಥಳೀಯ ಶಿಕ್ಷಣ ವಲಯದಲ್ಲಿ ಸಂತಸ ಮೂಡಿಸಿದ್ದು, ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಗಣ್ಯರು ಪ್ರಶಾಂತ ಚಿದಂಬರ ಕುಲಕರ್ಣಿ ಅವರನ್ನು ಅಭಿನಂದಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎ.ವಿ.ಎಸ್.ಆಯುರ್ವೇದ ಕಾಲೇಜಿನಲ್ಲಿಉಚಿತ ಆರೋಗ್ಯ ತಪಾಸಣೆ

ಕಾರ್ಖಾನೆ ಉಳಿವಿಗೆ ಶಕ್ತಿಮೀರಿ ಪ್ರಯತ್ನ :ಶಾಸಕ ಪಾಟೀಲ

ನಿಗದಿತ ಅವಧಿಯಲ್ಲಿ ಗುರಿ ಸಾಧಿಸಿ, ಅನುದಾನ ಲ್ಯಾಪ್ಸ್ ಆಗದಿರಲಿ

ರೈತರ ಜಮೀನುಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎ.ವಿ.ಎಸ್.ಆಯುರ್ವೇದ ಕಾಲೇಜಿನಲ್ಲಿಉಚಿತ ಆರೋಗ್ಯ ತಪಾಸಣೆ
    In (ರಾಜ್ಯ ) ಜಿಲ್ಲೆ
  • ಕಾರ್ಖಾನೆ ಉಳಿವಿಗೆ ಶಕ್ತಿಮೀರಿ ಪ್ರಯತ್ನ :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
  • ನಿಗದಿತ ಅವಧಿಯಲ್ಲಿ ಗುರಿ ಸಾಧಿಸಿ, ಅನುದಾನ ಲ್ಯಾಪ್ಸ್ ಆಗದಿರಲಿ
    In (ರಾಜ್ಯ ) ಜಿಲ್ಲೆ
  • ರೈತರ ಜಮೀನುಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ರೈತರ ಸಾಲ ಮನ್ನಾ, ಜಿಲ್ಲೆಯನ್ನು 371(ಜೆ) ಸೇರ್ಪಡೆಗೊಳಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಬಸ್ ಸೌಲಭ್ಯ, ಬಸ್ ಡಿಪೋ ಸ್ಥಾಪನೆಗೆ ಆಗ್ರಹಿಸಿ ಕರವೇ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ರಾಜಿಸಂಧಾನದಿಂದ ಹಣ-ಸಮಯ ಉಳಿತಾಯ :ನ್ಯಾ.ಹರೀಶ ಎ.
    In (ರಾಜ್ಯ ) ಜಿಲ್ಲೆ
  • ಬರ ನಿರ್ವಹಣೆಯಲ್ಲಿ ಸಮನ್ವಯದಿಂದ ಕಾರ್ಯನಿರ್ವಹಿಸಿ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರೈತ ಮೋರ್ಚಾ & ಜೆಡಿಎಸ್ ನೇತೃತ್ವದಲ್ಲಿ ಬೃಹತ್ ಹೋರಾಟ
    In (ರಾಜ್ಯ ) ಜಿಲ್ಲೆ
  • ಅನ್ನದಾತನ ಕೂಗಿಗೆ ಸ್ಥಬ್ದಗೊಂಡ ತಾಳಿಕೋಟೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.