ಉದಯರಶ್ಮಿ ದಿನಪತ್ರಿಕೆ
ಆಲಮೇಲ: ಪಟ್ಟಣದ ವಿಶ್ವೇಶ್ವರ ಬಾಲಭಾರತಿ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಹಾಗೂ ಸಿಂದಗಿ ತಾಲ್ಲೂಕಿನ ಅನುದಾನಿತ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀಪುತ್ರ ಕಿರನಳ್ಳಿ ರವರಿಗೆ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ.)ಬೆಂಗಳೂರು ವತಿಯಿಂದ ಕೊಡಮಾಡುವ ರಾಜ್ಯ ಮಟ್ಟದ ಉತ್ತಮ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಸಂಘದ ರಾಜಾಧ್ಯಕ್ಷರು ಶಿವಾನಂದ ಹಿರೇಕುರುಬರ ತಿಳಿಸಿದ್ದಾರೆ.
ಕಿರನಳ್ಳಿ ಅವರ ಶೈಕ್ಷಣಿಕ, ಸಾಮಾಜಿಕ ಹಾಗೂ ಸಂಘಟನಾ ಸೇವೆಯನ್ನು ಪರಿಗಣಿಸಿ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪ್ರಶಸ್ತಿ ಪ್ರಧಾನ ಸಮಿತಿ ಅಧ್ಯಕ್ಷ ಎಸ್.ಪಾಲನೇತ್ರ ತಿಳಿಸಿರುತ್ತಾರೆ.

