ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ದೇವರಹಿಪ್ಪರಗಿ ನಾಗರಿಕರ
ಮನವಿ
ದೇವರಹಿಪ್ಪರಗಿ: ಪಟ್ಟಣದ ನೂತನ ಬಸ್ ನಿಲ್ದಾಣಕ್ಕೆ ಮಡಿವಾಳ ಮಾಚಿದೇವರ ಹೆಸರನ್ನು ನಾಮಕರಣಗೊಳಿಸಿ ಮುಂದೆ ಮಾಚಿದೇವರ ಪ್ರತಿಮೆ ಪ್ರತಿಷ್ಠಾಪಿಸಲು ಕ್ರಮಕೈಗೊಳ್ಳುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮಡಿವಾಳ ಮಾಚಿದೇವ ಜನ್ಮಭೂಮಿ ಪ್ರತಿಷ್ಠಾನ, ಕಲೆ, ಸಾಹಿತ್ಯ, ಸಾಂಸ್ಕೃತಿಕ ವೇದಿಕೆಯಿಂದ ಮನವಿ ಸಲ್ಲಿಸಲಾಯಿತು.
ವಿಜಯಪುರದ ಹೇಮರಡ್ಡಿ ಮಲ್ಲಮ್ಮ ಸಂಸ್ಥೆಯಲ್ಲಿ ಮಂಗಳವಾರ ಜರುಗಿದ ಕಾರ್ಯಕ್ರಮದಲ್ಲಿ ದೇವರಹಿಪ್ಪರಗಿ ಮಡಿವಾಳ ಮಾಚಿದೇವ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಬಿ.ಎಂ.ಪಾಟೀಲ ಹಾಗೂ ಬಿ.ಕೆ.ಪಾಟೀಲ ಅವರ ನೇತೃತ್ವದಲ್ಲಿ ಸಚಿವರನ್ನು ಭೇಟಿ ಮಾಡಿ, ನಾಮಕರಣ ಹಾಗೂ ಪ್ರತಿಮೆ ಸ್ಥಾಪನೆಯ ಕುರಿತಂತೆ ಕಳೆದ ಎರಡು ವರ್ಷಗಳಿಂದ ನಡೆದ ನಿರಂತರ ಪ್ರಯತ್ನಗಳು ಹಾಗೂ ಹಿಂದಿನ ಸರ್ಕಾರದಲ್ಲಿಯ ಸಚಿವರನ್ನು ಕಂಡು ಮನವಿ ಸಲ್ಲಿಸಿದ ಕುರಿತು ಗಮನ ಸೆಳೆಯಲಾಯಿತು. ಮನವಿ ಸ್ವೀಕರಿಸಿದ ಸಚಿವರು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಮಾಚಿದೇವ ಜನ್ಮಭೂಮಿ ಪ್ರತಿಷ್ಠಾನದ ಗೌರವ ಅಧ್ಯಕ್ಷ ಕಾಶೀಪತಿ ದೇವಣಗಾಂವ, ವಿಜಯಪುರ ಹೇಮರಡ್ಡಿ ಮಲ್ಲಮ್ಮ ಸಂಸ್ಥೆಯ ಅಧ್ಯಕ್ಷ ಸುರೇಶ ದೇಸಾಯಿ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಹಣಮಂತ್ರಾಯಗೌಡ ಪಾಟೀಲ(ಪಡಗಾನೂರ), ಸದಾನಂದ ಬಬಲೇಶ್ವರ, ಸಂಗಪ್ಪ ತಡವಲ್, ಶೇಖರ ಮಲ್ಲಾರಿ ಸೇರಿದಂತೆ ಇತರರು ಇದ್ದರು.