ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿ ಕ್ಷೇಮಪಾಲನ ನಿರ್ದೇಶನಾಲಯದ ವತಿಯಿಂದ 2026-27ನೇ ಶೈಕ್ಷಣಿಕ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಸ್ವಾಗತ ಕೋರುವ ಅಂಗವಾಗಿ “ಪುತ್ರಿಯರ ದಿನ–ಸ್ಪಂದನ ಕಾರ್ಯಕ್ರಮ” ವನ್ನು ಇದೇ ಸೆ, 23ರಂದು ಬೆಳಿಗ್ಗೆ 11 ಗಂಟೆಗೆ ದಶಮಾನೋತ್ಸವ ಕಟ್ಟಡದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದಾವಣಗೆರೆ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಎಸ್. ಇಂದುಮತಿ ಭಾಗವಹಿಸಲಿದ್ದು, ಮಹಿಳಾ ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ. ಬಿ. ಎಲ್. ಲಕ್ಕಣ್ಣವರ್, ಆರ್ಥಿಕ ಅಧಿಕಾರಿ ರಾಮಣ್ಣ ಅಥಣಿ ಉಪಸ್ಥಿತರಿರಲಿದ್ದಾರೆ ಎಂದು ಮಹಿಳಾ ವಿವಿಯ ಕುಲಸಚಿವ ಡಾ. ವಿಜಯಕುಮಾರ್ ಅಜೂರ್ ಹಾಗೂ ವಿದ್ಯಾರ್ಥಿನಿ ಕ್ಷೇಮಪಾಲನ ನಿರ್ದೇಶನಾಲಯದ ನಿರ್ದೇಶಕಿ ಪ್ರೊ. ಜ್ಯೋತಿ ಉಪಾಧ್ಯೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
