Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜಿಸಂಧಾನದಿಂದ ಹಣ-ಸಮಯ ಉಳಿತಾಯ :ನ್ಯಾ.ಹರೀಶ ಎ.

ಬರ ನಿರ್ವಹಣೆಯಲ್ಲಿ ಸಮನ್ವಯದಿಂದ ಕಾರ್ಯನಿರ್ವಹಿಸಿ

ಬಿಜೆಪಿ ರೈತ ಮೋರ್ಚಾ & ಜೆಡಿಎಸ್ ನೇತೃತ್ವದಲ್ಲಿ ಬೃಹತ್ ಹೋರಾಟ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬರ ನಿರ್ವಹಣೆಯಲ್ಲಿ ಸಮನ್ವಯದಿಂದ ಕಾರ್ಯನಿರ್ವಹಿಸಿ
(ರಾಜ್ಯ ) ಜಿಲ್ಲೆ

ಬರ ನಿರ್ವಹಣೆಯಲ್ಲಿ ಸಮನ್ವಯದಿಂದ ಕಾರ್ಯನಿರ್ವಹಿಸಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಪತ್ತು ನಿರ್ವಹಣಾ ಪ್ರಾದಿಕಾರದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅಧಿಕಾರಿಗಳಿಗೆ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಒಂದು ತಂಡವಾಗಿ ಕಾರ್ಯನಿರ್ವಹಿಸಬೇಕು. ಕುಡಿಯುವ ನೀರು ಸೇರಿದಂತೆ ಬರ ನಿರ್ವಹಣೆಗೆ ಸಂಬಂಧಿಸಿದ ಯಾವುದೇ ಸಮಸ್ಯೆ ಎದುರಾದಾಗ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೇಸ್ವಾನ್ ಸಭಾಂಗಣದಲ್ಲಿ ಸೋಮವಾರ ನಡೆದ ಬರ ಹಾಗೂ ವಿಪತ್ತು ನಿರ್ವಹಣಾ ಪ್ರಾದಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾಲುವೆಗಳ ಮೂಲಕ ನೀರು ಹರಿಸುವ ಸಂದರ್ಭದಲ್ಲಿ ಕುಡಿಯುವ ನೀರು ವ್ಯರ್ಥವಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಈ ಕುರಿತು ತಾಲೂಕು ಮಟ್ಟದಲ್ಲಿ ಕಾರ್ಯಪಡೆ ಸಭೆ ನಡೆಸಿ, ಸಂಬಂಧಿಸಿದ ಅಧಿಕಾರಿಗಳು ನಿರಂತರವಾಗಿ ಪರಿಶೀಲನೆ ನಡೆಸಬೇಕು. ಸ್ಥಳೀಯವಾಗಿ ಸೂಕ್ತ ಗಮನ ಹರಿಸದಿದ್ದರೆ, ಪೂರೈಕೆಯಾದ ನೀರು ಎಷ್ಟು ಪ್ರಮಾಣದಲ್ಲಿ ಹಾಗೂ ಎಲ್ಲಿಯವರೆಗೆ ತಲುಪಿದೆ ಎಂಬುದನ್ನು ತಿಳಿದುಕೊಳ್ಳಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಅಧಿಕಾರಿಗಳು ಈಗಿನಿಂದಲೇ ಸಮರ್ಪಕವಾಗಿ ಗಮನಹರಿಸಬೇಕು ಎಂದು ಹೇಳಿದರು.
ಕುಡಿಯುವ ನೀರು ಪೂರೈಕೆ ಮಾಡಿದ ನಂತರ ಅದು ನಿಗದಿತ ಗ್ರಾಮ, ಪ್ರದೇಶ ಹಾಗೂ ಜನರಿಗೆ ಸಮರ್ಪಕವಾಗಿ ತಲುಪಿದೆಯೇ ಎಂಬುದನ್ನು ಅಧಿಕಾರಿಗಳು ಖುದ್ದಾಗಿ ಪರಿಶೀಲಿಸಬೇಕು ಎಂದರು.
ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಸಮಸ್ಯೆಯ ಮೂಲ ಕಾರಣವನ್ನು ಅರಿತುಕೊಂಡು ತಕ್ಷಣ ಪರಿಹಾರ ಕ್ರಮ ಕೈಗೊಳ್ಳಬೇಕು. ಸಮಸ್ಯೆ ಉಲ್ಬಣಿಸುವವರೆಗೆ ಕಾಯದೆ, ಮುಂಚಿತವಾಗಿಯೇ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ವಸತಿ ನಿಲಯಗಳಲ್ಲಿ ಶುದ್ಧ ಕುಡಿಯುವ ನೀರಿಗೆ ಆದ್ಯತೆ: ಜಿಲ್ಲೆಯಲ್ಲಿರುವ ವಸತಿ ನಿಲಯಗಳಲ್ಲಿ ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರವಹಿಸಿ, ವಸತಿ ನಿಲಯಗಳಲ್ಲಿ ಗುಣಮಟ್ಟದ ಕುಡಿಯುವ ನೀರು ಪೂರೈಕೆಯಾಗುತ್ತಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಬೇಕು ಎಂದು ಅವರು ತಿಳಿಸಿದರು.
ಬರ ಪೀಡಿತ ಪ್ರದೇಶಗಳ ಅಧ್ಯಯನಕ್ಕಾಗಿ ಕೇಂದ್ರ ತಂಡ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಬರ ಪರಿಸ್ಥಿತಿ, ಕುಡಿಯುವ ನೀರು, ಕೃಷಿ, ಜಾನುವಾರು, ಬೆಳೆ ಹಾನಿ ಸೇರಿದಂತೆ ಅಗತ್ಯ ಮಾಹಿತಿಯನ್ನು ಸಂಗ್ರಹಿಸಿ ತಂಡಕ್ಕೆ ಸಮರ್ಪಕವಾಗಿ ಒದಗಿಸಬೇಕು. ಬರ ನಿರ್ವಹಣೆಗೆ ಸಂಬಂಧಿಸಿದ ಕ್ರಮಗಳನ್ನು ಇಲಾಖೆಗಳು ತ್ವರಿತವಾಗಿ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಮಾತನಾಡಿ, ಗ್ರಾಮೀಣ ಭಾಗದ ಎಲ್ಲ ಹಳ್ಳಿಗಳು ಹಾಗೂ ಗ್ರಾಮಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗುವಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ವಿಶೇಷ ಗಮನಹರಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ,ಉಪ ಅರಣ್ಯ ಸಂರಕ್ಷಾಧಿಕಾರಿ ಮಲ್ಲಿನಾಥ ಕುಸನಾಳ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರುದ್ದಿನ್ ಸೌದಾಗರ್, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಗೂ ವಿಡಿಯೋ ಸಂವಾದದ ಮೂಲಕ ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರರು ಹಾಗೂ ಸಂಬಂಧಿಸಿದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಜಿಸಂಧಾನದಿಂದ ಹಣ-ಸಮಯ ಉಳಿತಾಯ :ನ್ಯಾ.ಹರೀಶ ಎ.

ಬಿಜೆಪಿ ರೈತ ಮೋರ್ಚಾ & ಜೆಡಿಎಸ್ ನೇತೃತ್ವದಲ್ಲಿ ಬೃಹತ್ ಹೋರಾಟ

ಅನ್ನದಾತನ ಕೂಗಿಗೆ ಸ್ಥಬ್ದಗೊಂಡ ತಾಳಿಕೋಟೆ

ಇಂದು “ಪುತ್ರಿಯರ ದಿನ–ಸ್ಪಂದನ” ಕಾರ್ಯಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜಿಸಂಧಾನದಿಂದ ಹಣ-ಸಮಯ ಉಳಿತಾಯ :ನ್ಯಾ.ಹರೀಶ ಎ.
    In (ರಾಜ್ಯ ) ಜಿಲ್ಲೆ
  • ಬರ ನಿರ್ವಹಣೆಯಲ್ಲಿ ಸಮನ್ವಯದಿಂದ ಕಾರ್ಯನಿರ್ವಹಿಸಿ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರೈತ ಮೋರ್ಚಾ & ಜೆಡಿಎಸ್ ನೇತೃತ್ವದಲ್ಲಿ ಬೃಹತ್ ಹೋರಾಟ
    In (ರಾಜ್ಯ ) ಜಿಲ್ಲೆ
  • ಅನ್ನದಾತನ ಕೂಗಿಗೆ ಸ್ಥಬ್ದಗೊಂಡ ತಾಳಿಕೋಟೆ
    In (ರಾಜ್ಯ ) ಜಿಲ್ಲೆ
  • ಇಂದು “ಪುತ್ರಿಯರ ದಿನ–ಸ್ಪಂದನ” ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಸತಿ ಪತಿಯನ್ನು ಒಂದಾಗಿಸಿದ ಲೋಕ ಅದಾಲತ್
    In (ರಾಜ್ಯ ) ಜಿಲ್ಲೆ
  • ವಿಜಯಪುರ–ಬಳ್ಳಾರಿ ನಡುವೆ ನೂತನ ನಾನ್ ಎ.ಸಿ. ಸ್ಲೀಪರ್ ಬಸ್ ಸೇವೆ
    In (ರಾಜ್ಯ ) ಜಿಲ್ಲೆ
  • ಸೇನೆಗೆ ಸೇರುವ ಕನಸು ನನಸಾಗಿಸಲು ನಿರಂತರ ಶ್ರಮ, ಶಿಸ್ತು ಅಗತ್ಯ
    In (ರಾಜ್ಯ ) ಜಿಲ್ಲೆ
  • ಸೆ.೨೯ ರಂದು ಕೃಷಿ ಮಹಾವಿದ್ಯಾಲಯದಲ್ಲಿ ತಾತ್ಕಾಲಿಕ ಹುದ್ದೆಗೆ ನೇರ ಸಂದರ್ಶನ
    In (ರಾಜ್ಯ ) ಜಿಲ್ಲೆ
  • ಸಹಕಾರ ಸಂಘಗಳ ನೋಂದಣಿ ರದ್ದತಿ ಕ್ರಮ ಆಕ್ಷೇಪಣೆಗೆ ಅವಕಾಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.