Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಿನ್ನ ಹಣೆಬರಹದ ಶಿಲ್ಪಿ ನೀನೇ!

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 23,2026

ರಸಪ್ರಶ್ನೆ: ಶ್ರೀ ಬಿ.ಎಂ.ಪಾಟೀಲ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಜಿಸಂಧಾನದಿಂದ ಹಣ-ಸಮಯ ಉಳಿತಾಯ :ನ್ಯಾ.ಹರೀಶ ಎ.
(ರಾಜ್ಯ ) ಜಿಲ್ಲೆ

ರಾಜಿಸಂಧಾನದಿಂದ ಹಣ-ಸಮಯ ಉಳಿತಾಯ :ನ್ಯಾ.ಹರೀಶ ಎ.

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ೧೦,೯೨೫ ಪ್ರಕರಣಗಳ ಯಶಸ್ವಿ ಇತ್ಯರ್ಥ | ವಿರಸ ಮರೆತು ಒಂದಾದ ೭ ಜೋಡಿಗಳು | ೩೧.೪೧ ಕೋಟಿ ರೂ. ಅಧಿಕ ಪರಿಹಾರ ರಾಜಿ ಸಂಧಾನ

ಉದಯರಶ್ಮಿ ದಿನಪತ್ರಿಕೆ

​ವಿಜಯಪುರ: ಜಿಲ್ಲಾದ್ಯಂತ ನಡೆದ ರಾಷ್ಟ್ರೀಯ ಲೋಕ್ ಅದಾಲತ್‌ಗೆ ಕಕ್ಷಿದಾರರಿಂದ ಅಭೂತಪೂರ್ವ ಸ್ಪಂದನೆ ದೊರೆತಿದ್ದು, ಒಟ್ಟು ೧೦,೯೨೫ ಪ್ರಕರಣಗಳು ರಾಜಿ ಸಂಧಾನದ ಮೂಲಕ ಯಶಸ್ವಿಯಾಗಿ ಇತ್ಯರ್ಥಗೊಂಡವು.
​ಆಸ್ತಿ ವಿಭಾಗ, ಚೆಕ್ ಬೌನ್ಸ್, ಮೋಟಾರು ವಾಹನ ಅಪಘಾತ ಪರಿಹಾರ, ಜೀವನಾಂಶ ಕೋರಿದ ಪ್ರಕರಣಗಳು, ರಾಜಿ ಮಾಡಿಕೊಳ್ಳಬಹುದಾದ ಕ್ರಿಮಿನಲ್ ಪ್ರಕರಣಗಳು ಹಾಗೂ ಅಮಲ್ದಾರಿ ಪ್ರಕರಣಗಳು ಲೋಕ್ ಅದಾಲತ್‌ನಲ್ಲಿ ಯಶಸ್ವಿಯಾಗಿ ಇತ್ಯರ್ಥಗೊಂಡವು.
​ ಒಂದಾದ ೭ ಜೋಡಿಗಳು: ವಿಜಯಪುರ ಜಿಲ್ಲೆ ಮತ್ತು ತಾಲೂಕುಗಳನ್ನು ಒಳಗೊಂಡು ಒಟ್ಟು ೭ ದಂಪತಿಗಳು ಮನಸ್ತಾಪ ಮರೆತು, ಜನತಾ ನ್ಯಾಯಾಲಯದ ಮೂಲಕ ಒಂದಾಗಿ ವೈವಾಹಿಕ ಜೀವನ ಮುಂದುವರಿಯಲು ಇದೇ ವೇಳೆ ಒಪ್ಪಿಕೊಂಡರು.
​ಭೂ ಸ್ವಾಧೀನ ಪರಿಹಾರ: ೯೬ ಭೂ ಸ್ವಾಧೀನ ಪ್ರಕರಣಗಳು ಮತ್ತು ೩೧೨ ಭೂ ಸ್ವಾಧೀನ ದರಖಾಸ್ತು ಪ್ರಕರಣಗಳು ಇತ್ಯರ್ಥಗೊಂಡು, ಒಟ್ಟು ೩೧,೪೧,೫೬,೮೦೨ ರೂ. ಹಣವನ್ನು ರಾಜಿಸಂಧಾನದ ಮೂಲಕ ಬಗೆಹರಿಸಲಾಗಿದೆ.
ಬಳಿಕ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಹರೀಶ ಎ. ಅವರು ಮಾತನಾಡಿ, ಕಕ್ಷಿದಾರರು ವರ್ಷಗಟ್ಟಲೆ ಕೋರ್ಟ್ ಅಲೆಯುವ ಬದಲು ಜನತಾ ನ್ಯಾಯಾಲಯದ ರಾಜಿಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ ಉಳಿತಾಯವಾಗುತ್ತದೆ. ಹಾಗಾಗಿ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
​ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಸಾಯಬಣ್ಣ ಹಾಗರಗಿ ಅವರು ಮಾತನಾಡಿ, ಸಾರ್ವಜನಿಕರು ಶೀಘ್ರ ನ್ಯಾಯ ಪಡೆದುಕೊಂಡು ಸೌಹಾರ್ದತೆಯಿಂದ ಸಮಾಜದಲ್ಲಿ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು.
​ಲೋಕ್ ಅದಾಲತ್‌ನ ಯಶಸ್ಸಿಗೆ ಶ್ರಮಿಸಿದ ಎಲ್ಲಾ ನ್ಯಾಯಾಂಗ ಅಧಿಕಾರಿಗಳು, ವಕೀಲರು, ಪೊಲೀಸ್ ಸಿಬ್ಬಂದಿ, ಕಕ್ಷಿದಾರರು ಹಾಗೂ ಪ್ರಾಧಿಕಾರದ ಸಿಬ್ಬಂದಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮೆಚ್ಚುಗೆ ವ್ಯಕ್ತಪಡಿಸಿತು.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಿನ್ನ ಹಣೆಬರಹದ ಶಿಲ್ಪಿ ನೀನೇ!

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 23,2026

ರಸಪ್ರಶ್ನೆ: ಶ್ರೀ ಬಿ.ಎಂ.ಪಾಟೀಲ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಸಮಾಜವನ್ನು ಒಗ್ಗೂಡಿಸುವ ಶಕ್ತಿ ಧರ್ಮಕ್ಕಿದೆ :ರಂಭಾಪುರಿಶ್ರೀ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಿನ್ನ ಹಣೆಬರಹದ ಶಿಲ್ಪಿ ನೀನೇ!
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 23,2026
    In ದಿನಪತ್ರಿಕೆ
  • ರಸಪ್ರಶ್ನೆ: ಶ್ರೀ ಬಿ.ಎಂ.ಪಾಟೀಲ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಸಮಾಜವನ್ನು ಒಗ್ಗೂಡಿಸುವ ಶಕ್ತಿ ಧರ್ಮಕ್ಕಿದೆ :ರಂಭಾಪುರಿಶ್ರೀ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಆನಲೈನ್ ಹಾಜರಾತಿ ದಾಖಲಿಸುವಲ್ಲಿ ನಿರ್ಲಕ್ಷ್ಯ ಬೇಡ
    In (ರಾಜ್ಯ ) ಜಿಲ್ಲೆ
  • ಅಪ್ಪ ಕುಟುಂಬಕ್ಕೆ ಆಲದ ಮರವಿದ್ದಂತೆ: ನಟ ಅಶೋಕ
    In (ರಾಜ್ಯ ) ಜಿಲ್ಲೆ
  • ಅರ್ಹ ಮತದಾರರಿಗೆ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಡಿ.೧೩ಕ್ಕೆ ‘ವೃಕ್ಷಥಾನ್ ಹೆರಿಟೇಜ್ ರನ್’: ೩೦ ಸಾವಿರ ನೋಂದಣಿ ಗುರಿ
    In (ರಾಜ್ಯ ) ಜಿಲ್ಲೆ
  • ನಿನ್ನೆ ಡಾಂಬರ್, ಇಂದು ಗುಂಡಿ: ಕಲ್ಯಾಣ ಪಥ್‌ಗೆ ಒಂದೇ ದಿನದ ‘ಕಲ್ಯಾಣ’!
    In (ರಾಜ್ಯ ) ಜಿಲ್ಲೆ
  • ಎ.ವಿ.ಎಸ್.ಆಯುರ್ವೇದ ಕಾಲೇಜಿನಲ್ಲಿಉಚಿತ ಆರೋಗ್ಯ ತಪಾಸಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.