ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್. ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿ 11ನೇ ರಾಷ್ಟ್ರೀಯ ಆಯುರ್ವೇದ ದಿನದ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರ, ಉಚಿತ ರಕ್ತ ತಪಾಸಣೆ((Hb and RBS) ಹಾಗೂ ಔಷಧ ವಿತರಣೆ ಕಾರ್ಯಕ್ರಮ ಮಂಗಳವಾರ ನಡೆಯಿತು.
ಜಿಲ್ಲಾ ಆಯುಷ್ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಆಯುರ್ವೇದ ಆಸ್ಪತ್ರೆಯಲ್ಲಿ ನಡೆದ ಈ ಶಿಬಿರವನ್ನು ಜಿಲ್ಲಾ ಆಯುಷ್ ಅಧಿಕಾರಿ ಡಾ. ವಿದ್ಯಾವತಿ ಅಥಣಿ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಹಿಂದಿಗಿಂತಲೂ ಇಂದು ಆಯುರ್ವೇದವನ್ನು ಮನೆ ಮನೆಗೆ ತಲುಪಿಸುವ ಅಗತ್ಯತೆ ಹೆಚ್ಚಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಪಥ್ಯ ಆಹಾರ ಪತ್ರಿಕೆಯ ಅನಾವರಣ ನಡೆಯಿತು. ಆಸ್ಪತ್ರೆಯ ರೋಗಿಗಳೆಗೆ ಆಯುರ್ವೇದ ಪಥ್ಯ ಆಹಾರವನ್ನು ಕೊಡಮಾಡುವ ಕಾರ್ಯಕ್ರಮಕ್ಕೆ ಚಾಲನೆ ಕೊಡಲಾಯಿತು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ, ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ, ಕಾಯಚಿಕಿತ್ಸೆ ವಿಭಾಗದ ಮುಖ್ಯಸ್ಥೆ ಡಾ. ಉಮಾ ಪಾಟೀಲ, ಡಿವೈಎಂಎಸ್ ಡಾ. ಜಾವೀದ್ ಬಾಗಾಯತ, ಎಎಓ ಡಾ. ಸಂಜೀವ ಕುಲಕರ್ಣಿ ಉಪಸ್ಥಿತರಿದ್ದರು.
ಸುಮಾರು 100ಕ್ಕೂ ಹೆಚ್ಚು ರೋಗಿಗಳು ಈ ಶಿಬಿರದ ಸದುಪಯೋಗ ಪಡೆದುಕೊಂಡರು.

