Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಸಪ್ರಶ್ನೆ: ಶ್ರೀ ಬಿ.ಎಂ.ಪಾಟೀಲ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಸಮಾಜವನ್ನು ಒಗ್ಗೂಡಿಸುವ ಶಕ್ತಿ ಧರ್ಮಕ್ಕಿದೆ :ರಂಭಾಪುರಿಶ್ರೀ

ಮಕ್ಕಳ ಆನಲೈನ್ ಹಾಜರಾತಿ ದಾಖಲಿಸುವಲ್ಲಿ ನಿರ್ಲಕ್ಷ್ಯ ಬೇಡ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಿ.೧೩ಕ್ಕೆ ‘ವೃಕ್ಷಥಾನ್ ಹೆರಿಟೇಜ್ ರನ್’: ೩೦ ಸಾವಿರ ನೋಂದಣಿ ಗುರಿ
(ರಾಜ್ಯ ) ಜಿಲ್ಲೆ

ಡಿ.೧೩ಕ್ಕೆ ‘ವೃಕ್ಷಥಾನ್ ಹೆರಿಟೇಜ್ ರನ್’: ೩೦ ಸಾವಿರ ನೋಂದಣಿ ಗುರಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ನೋಂದಣಿಗೆ ಅ. ೧೧ ಕೊನೆಯ ದಿನ | ಪರಿಸರ ಸಂರಕ್ಷಣೆ, ಹಸರೀಕರಣ, ಪಾರಂಪರಿಕ ಸ್ಮಾರಕಗಳ ಸಂರಕ್ಷಣೆಗೆ ಜಾಗೃತಿ | ಸಿಇಒ ರಿಷಿ ಆನಂದ್ ಕರೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪರಿಸರ ಸಂರಕ್ಷಣೆ, ಹಸರೀಕರಣ ಹಾಗೂ ಪಾರಂಪರಿಕ ಸ್ಮಾರಕಗಳ ರಕ್ಷಣೆಯ ಮಹತ್ವವನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಡಿ. ೧೩ರಂದು ‘ವೃಕ್ಷಥಾನ್ ಹೆರಿಟೇಜ್ ರನ್-೨೦೨೬’ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲ ಇಲಾಖೆಯವರು ನೋಂದಣಿ ಮಾಡಿಕೊಂಡು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ್ ಕರೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ವೃಕ್ಷಥಾನ್ ಹೆರಿಟೇಜ್ ರನ್-೨೦೨೬ರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಬಾರಿ ೩೦ ಸಾವಿರ ಓಟಗಾರರನ್ನು ನೋಂದಾಯಿಸುವ ಗುರಿ ಹೊಂದಲಾಗಿದೆ. ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.
ಕಳೆದ ಬಾರಿ ಸುಮಾರು ೨೩ ಸಾವಿರ ಓಟಗಾರರು ಪಾಲ್ಗೊಂಡಿದ್ದು, ಈ ಬಾರಿ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಓಟಗಾರರು ಭಾಗವಹಿಸುವಂತೆ ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ತಿಳಿಸಿದರು.
ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಅಥ್ಲೀಟ್‌ಗಳನ್ನು ಗುರುತಿಸಿ ಓಟದಲ್ಲಿ ಪಾಲ್ಗೊಳ್ಳುವಂತೆ ಕ್ರೀಡಾ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಅವರ ನಿರಂತರ ಪ್ರಯತ್ನದಿಂದ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಯಶಸ್ವಿಯಾಗಿ ಅನುಷ್ಠಾನಗೊಂಡಿದ್ದು, ಅರಣ್ಯೀಕರಣ ಪ್ರಮಾಣ ಹೆಚ್ಚಾಗಿದೆ. ವಿಜಯಪುರದ ವೃಕ್ಷಥಾನ್ ಮತ್ತು ಹಸರೀಕರಣದ ಸಾಧನೆ ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ. ವಿವಿಧ ರಾಜ್ಯಗಳಿಂದ ಆಗಮಿಸುವ ಓಟಗಾರರು ಪಾಲ್ಗೊಳ್ಳುವ ಈ ಕಾರ್ಯಕ್ರಮ ಜಿಲ್ಲೆಯ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದರು.
ವೃಕ್ಷಥಾನ್‌ನ ಉದ್ದೇಶ ಪರಿಸರ ಕಾಳಜಿಯೊಂದಿಗೆ ಜಿಲ್ಲೆಯ ಸ್ವಚ್ಛತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಹಸಿರೀಕರಣದ ಅಗತ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದೂ ಇದರ ಆಶಯವಾಗಿದೆ. ಆದ್ದರಿಂದ ಎಲ್ಲರೂ ಉತ್ಸಾಹದಿಂದ ಭಾಗವಹಿಸಬೇಕು ಎಂದು ಹೇಳಿದರು.
ಅ.೧೧ ನೋಂದಣಿಗೆ ಕೊನೆ ದಿನವಾಗಿದೆ. ಕ್ರೀಡಾಸಕ್ತಿ ಹೊಂದಿರುವ ವಿದ್ಯಾರ್ಥಿಗಳನ್ನು ಓಟದಲ್ಲಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಬೇಕು ಎಂದು ಸಿಇಒ ಹೇಳಿದರು.
ಸಭೆಯಲ್ಲಿ ಡಿವೈಎಸ್ಪಿ ಉಪಾಸೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಮಲ್ಲಿನಾಥ ಕುಸನಾಳ, ಕೋಟಿ ವೃಕ್ಷ ಅಭಿಯಾನದ ಸಂಚಾಲಕ ಡಾ. ಮುರುಗೇಶ ಪಟ್ಟಣಶೆಟ್ಟಿ, ವಿನಯ ಕಂಚ್ಯಾಣಿ, ವೀರೇಂದ್ರ ಗುಚ್ಚಟ್ಟಿ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಸಪ್ರಶ್ನೆ: ಶ್ರೀ ಬಿ.ಎಂ.ಪಾಟೀಲ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಸಮಾಜವನ್ನು ಒಗ್ಗೂಡಿಸುವ ಶಕ್ತಿ ಧರ್ಮಕ್ಕಿದೆ :ರಂಭಾಪುರಿಶ್ರೀ

ಮಕ್ಕಳ ಆನಲೈನ್ ಹಾಜರಾತಿ ದಾಖಲಿಸುವಲ್ಲಿ ನಿರ್ಲಕ್ಷ್ಯ ಬೇಡ

ಅಪ್ಪ ಕುಟುಂಬಕ್ಕೆ ಆಲದ ಮರವಿದ್ದಂತೆ: ನಟ ಅಶೋಕ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಸಪ್ರಶ್ನೆ: ಶ್ರೀ ಬಿ.ಎಂ.ಪಾಟೀಲ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಸಮಾಜವನ್ನು ಒಗ್ಗೂಡಿಸುವ ಶಕ್ತಿ ಧರ್ಮಕ್ಕಿದೆ :ರಂಭಾಪುರಿಶ್ರೀ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಆನಲೈನ್ ಹಾಜರಾತಿ ದಾಖಲಿಸುವಲ್ಲಿ ನಿರ್ಲಕ್ಷ್ಯ ಬೇಡ
    In (ರಾಜ್ಯ ) ಜಿಲ್ಲೆ
  • ಅಪ್ಪ ಕುಟುಂಬಕ್ಕೆ ಆಲದ ಮರವಿದ್ದಂತೆ: ನಟ ಅಶೋಕ
    In (ರಾಜ್ಯ ) ಜಿಲ್ಲೆ
  • ಅರ್ಹ ಮತದಾರರಿಗೆ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಡಿ.೧೩ಕ್ಕೆ ‘ವೃಕ್ಷಥಾನ್ ಹೆರಿಟೇಜ್ ರನ್’: ೩೦ ಸಾವಿರ ನೋಂದಣಿ ಗುರಿ
    In (ರಾಜ್ಯ ) ಜಿಲ್ಲೆ
  • ನಿನ್ನೆ ಡಾಂಬರ್, ಇಂದು ಗುಂಡಿ: ಕಲ್ಯಾಣ ಪಥ್‌ಗೆ ಒಂದೇ ದಿನದ ‘ಕಲ್ಯಾಣ’!
    In (ರಾಜ್ಯ ) ಜಿಲ್ಲೆ
  • ಎ.ವಿ.ಎಸ್.ಆಯುರ್ವೇದ ಕಾಲೇಜಿನಲ್ಲಿಉಚಿತ ಆರೋಗ್ಯ ತಪಾಸಣೆ
    In (ರಾಜ್ಯ ) ಜಿಲ್ಲೆ
  • ಕಾರ್ಖಾನೆ ಉಳಿವಿಗೆ ಶಕ್ತಿಮೀರಿ ಪ್ರಯತ್ನ :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
  • ನಿಗದಿತ ಅವಧಿಯಲ್ಲಿ ಗುರಿ ಸಾಧಿಸಿ, ಅನುದಾನ ಲ್ಯಾಪ್ಸ್ ಆಗದಿರಲಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.