Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ

ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ

ಉಪ ವಿಭಾಗಾಧಿಕಾರಿ ಹುದ್ದೆಗೆ ಬಡ್ತಿ ಪಡೆದ ಸಿದ್ಧರಾಯಗೆ ಸನ್ಮಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಂಚಾರಿ ನಿಯಮಗಳ ಪಾಲನೆ ಕುರಿತು ಜಾಗೃತಿ ಮೂಡಿಸಿ
(ರಾಜ್ಯ ) ಜಿಲ್ಲೆ

ಸಂಚಾರಿ ನಿಯಮಗಳ ಪಾಲನೆ ಕುರಿತು ಜಾಗೃತಿ ಮೂಡಿಸಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಜಿಲ್ಲಾಧಿಕಾರಿ ಗೆ ಯುವ ಮುಖಂಡ ಸಂತೋಷ ಬಗಲಿ ಮನವಿ ಸಲ್ಲಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸಂಚಾರಿ ನಿಯಮಗಳ ಹೆಸರಿನಲ್ಲಿ ದಂಡ ಸಂಗ್ರಹಿಸುವುದಕ್ಕಿಂತ, ನಿಯಮಗಳ ಪಾಲನೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಲು ಯುವ ಮುಖಂಡ ಸಂತೋಷ ಬಗಲಿ ಆಗ್ರಹಿಸಿದ್ದಾರೆ.
ಈ ಕುರಿತು ಜಿಲ್ಲಾಧಿಕಾರಿಗೆ ಮಂಗಳವಾರ ಮನವಿ ಸಲ್ಲಿಸಿದ ಅವರು, ರಾಜ್ಯದಲ್ಲಿ ರಸ್ತೆ ಸುರಕ್ಷತೆ ಮತ್ತು ಸಂಚಾರಿ ನಿಯಮಗಳ ಪಾಲನೆ ಅತ್ಯಂತ ಮಹತ್ವದ ವಿಚಾರವಾಗಿದೆ. ಪ್ರತಿಯೊಬ್ಬ ವಾಹನ ಸವಾರರು ಸಂಚಾರಿ ನಿಯಮಗಳನ್ನು ಪಾಲಿಸುವುದು ತಮ್ಮ ಹಾಗೂ ಇತರರ ಜೀವದ ಸುರಕ್ಷತೆಗೆ ಅಗತ್ಯವಾಗಿದೆ. ಆದರೆ ಸಂಚಾರಿ ನಿಯಮಗಳ ಅನುಷ್ಠಾನವು ಕೇವಲ ದಂಡ ವಿಧಿಸುವ ಮತ್ತು ದಂಡ ಸಂಗ್ರಹಿಸುವ ಕ್ರಮಕ್ಕೆ ಸೀಮಿತವಾಗಬಾರದು ಎಂಬುದು ಸಾರ್ವಜನಿಕರ ಪರವಾದ ನಮ್ಮ ಮನವಿಯಾಗಿದೆ ಎಂದು ಹೇಳಿದರು.
ಸಂಚಾರಿ ನಿಯಮ ಉಲ್ಲಂಘನೆ ಮಾಡಿದಾಗ ಕಾನೂನುಬದ್ಧ ಕ್ರಮ ಕೈಗೊಳ್ಳುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ನಿಯಮ ಉಲ್ಲಂಘನೆಯ ನಂತರ ದಂಡ ವಿಧಿಸುವುದಕ್ಕಿಂತ, ನಿಯಮ ಉಲ್ಲಂಘನೆ ಆಗದಂತೆ ಮುನ್ನೆಚ್ಚರಿಕೆ ಮತ್ತು ಜಾಗೃತಿ ಮೂಡಿಸುವ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಬೇಕು.
ವಿಶೇಷವಾಗಿ ಗ್ರಾಮೀಣ ಪ್ರದೇಶಗಳು, ಪಟ್ಟಣಗಳು, ಕಾಲೇಜುಗಳು, ಶಾಲೆಗಳು, ಮಾರುಕಟ್ಟೆ ಪ್ರದೇಶಗಳು ಹಾಗೂ ಪ್ರಮುಖ ರಸ್ತೆಗಳಲ್ಲಿ ಸಂಚಾರಿ ನಿಯಮಗಳ ಕುರಿತು ನಿರಂತರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಹೆಲ್ಮೆಟ್ ಧರಿಸುವುದು, ಸೀಟ್ ಬೆಲ್ಟ್ ಬಳಕೆ, ವೇಗದ ಮಿತಿ ಪಾಲನೆ, ಮೊಬೈಲ್ ಬಳಸದಿರುವುದು, ಮದ್ಯಪಾನ ಮಾಡಿ ವಾಹನ ಚಲಾಯಿಸದಿರುವುದು, ವಾಹನದ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳುವುದು ಸೇರಿದಂತೆ ವಿವಿಧ ನಿಯಮಗಳ ಕುರಿತು ಜನರಿಗೆ ಸರಳವಾಗಿ ತಿಳಿಸಬೇಕು. ಅದೇ ರೀತಿ ಅಪಘಾತಗಳಿಗೆ ಕಾರಣವಾಗುವ ಗುಂಡಿ ಬಿದ್ದ ರಸ್ತೆಗಳು, ಅಪಾಯಕಾರಿ ತಿರುವುಗಳು, ಸೂಕ್ತ ರಸ್ತೆ ಸೂಚನಾ ಫಲಕಗಳ ಕೊರತೆ, ಸಮರ್ಪಕ ಬೆಳಕಿನ ಕೊರತೆ ಹಾಗೂ ಅಗತ್ಯವಿರುವ ಕಡೆ ಸ್ಪೀಡ್ ಬ್ರೇಕರ್‌ಗಳ ಕೊರತೆ ಮುಂತಾದ ಮೂಲಸೌಕರ್ಯ ಸಮಸ್ಯೆಗಳನ್ನೂ ಸಂಬಂಧಪಟ್ಟ ಇಲಾಖೆಗಳು ಗುರುತಿಸಿ ಪರಿಹರಿಸಬೇಕು.
ಸಂಚಾರಿ ನಿಯಮಗಳು ಜನರ ಸುರಕ್ಷತೆಗಾಗಿ ಇರುವುದೇ ಹೊರತು ಸರ್ಕಾರಕ್ಕೆ ಆದಾಯ ಸಂಗ್ರಹಿಸುವ ಸಾಧನವಾಗಬಾರದು. ಆದ್ದರಿಂದ “ದಂಡಕ್ಕಿಂತ ಜಾಗೃತಿ – ಆದಾಯಕ್ಕಿಂತ ರಸ್ತೆ ಸುರಕ್ಷತೆ” ಎಂಬ ದೃಷ್ಟಿಕೋನದಲ್ಲಿ ಸಂಚಾರಿ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ರೂಪಿಸುವ ಅಗತ್ಯವಿದೆ.
ಹೀಗಾಗಿ ಮಾನ್ಯ ಗೃಹ ಸಚಿವರು ಈ ಕೆಳಗಿನ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡುತ್ತೇನೆ:
ಸಂಚಾರಿ ನಿಯಮಗಳ ಪಾಲನೆ ಕುರಿತು ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ನಿರಂತರ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳಬೇಕು. ರಸ್ತೆ ಸುರಕ್ಷತಾ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಆದ್ದರಿಂದ ಸಂಚಾರಿ ನಿಯಮಗಳ ಅನುಷ್ಠಾನದಲ್ಲಿ ದಂಡ ಸಂಗ್ರಹಣೆಗೆ ಮಾತ್ರ ಆದ್ಯತೆ ನೀಡದೆ, ಜಾಗೃತಿ, ಮುನ್ನೆಚ್ಚರಿಕೆ ಮತ್ತು ರಸ್ತೆ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸಂಬಂಧಪಟ್ಟ ಇಲಾಖೆಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಸಂತೋಷ ಬಗಲಿ ಜಿಲ್ಲಾಧಿಕಾರಿಗಳ ಮೂಲಕ ಮಾನ್ಯ ಗೃಹ ಸಚಿವರಲ್ಲಿ ಮನವಿ ಮಾಡಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ

ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ

ಉಪ ವಿಭಾಗಾಧಿಕಾರಿ ಹುದ್ದೆಗೆ ಬಡ್ತಿ ಪಡೆದ ಸಿದ್ಧರಾಯಗೆ ಸನ್ಮಾನ

ವಿಜಯಪುರ ಜಿಲ್ಲೆ ಅಭಿವೃದ್ಧಿಗೆ ೩೭೧(ಜೆ) ಸೌಲಭ್ಯ ಕಲ್ಪಿಸಲು ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ
    In (ರಾಜ್ಯ ) ಜಿಲ್ಲೆ
  • ಉಪ ವಿಭಾಗಾಧಿಕಾರಿ ಹುದ್ದೆಗೆ ಬಡ್ತಿ ಪಡೆದ ಸಿದ್ಧರಾಯಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಅಭಿವೃದ್ಧಿಗೆ ೩೭೧(ಜೆ) ಸೌಲಭ್ಯ ಕಲ್ಪಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಅಗತ್ಯ ಬಿದ್ದರೆ ಕಬ್ಬು ಬೆಳೆಗಾರರ ಪರ ಹೋರಾಟಕ್ಕೂ ಸಿದ್ಧ
    In (ರಾಜ್ಯ ) ಜಿಲ್ಲೆ
  • ಶಾಸಕರಿಂದ ನನಗೆ ಬಹಿರಂಗವಾಗಿ ಜೀವಬೆದರಿಕೆ :ರಜಪೂತ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಹೆದ್ದಾರಿ ತಡೆ – ಪಟ್ಟು ಬಿಡದ ರೈತ ಸಮೂಹ
    In (ರಾಜ್ಯ ) ಜಿಲ್ಲೆ
  • ಅಲ್ಪಸಂಖ್ಯಾತರ ಸರಳ ವಿವಾಹ ಸಹಾಯಧನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅಂಗನವಾಡಿ ಕಂ-ಕ್ರಷ್ ಕೇಂದ್ರಗಳ ಕಾರ್ಯಕರ್ತೆ-ಸಹಾಯಕಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕಿತ್ತೂರು ಚೆನ್ನಮ್ಮ ವಿಜಯ ಜ್ಯೋತಿ ಯಾತ್ರೆಗೆ ಸ್ವಾಗತ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.