Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ

ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ

ಉಪ ವಿಭಾಗಾಧಿಕಾರಿ ಹುದ್ದೆಗೆ ಬಡ್ತಿ ಪಡೆದ ಸಿದ್ಧರಾಯಗೆ ಸನ್ಮಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತಂತ್ರಜ್ಞಾನ ಸ್ಪರ್ಶದೊಂದಿಗೆ ವಿಶ್ವ ಪ್ರವಾಸೋದ್ಯಮ ದಿನಾಚರಣೆ
(ರಾಜ್ಯ ) ಜಿಲ್ಲೆ

ತಂತ್ರಜ್ಞಾನ ಸ್ಪರ್ಶದೊಂದಿಗೆ ವಿಶ್ವ ಪ್ರವಾಸೋದ್ಯಮ ದಿನಾಚರಣೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಹಾಗೂ ವಿವಿಧ ಇಲಾಖೆ- ಸಂಸ್ಥೆಗಳ ಜಂಟಿ ಸಹಯೋಗದೊಂದಿಗೆ ಆಯೋಜಿಸಲಾಗಿರುವ ವಿಶೇಷ ಕಾರ್ಯಕ್ರಮಗಳ ವಿಷಯ ಸೂಚಿ ಹೊಂದಿರುವ ಕರಪತ್ರವನ್ನು ಜಿಲ್ಲಾಧಿಕಾರಿ ಡಾ. ಆನಂದ.ಕೆ ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಬಿಡುಗಡೆಗೊಳಿಸಿದರು.
ಈ ಬಾರಿಯ ವಿಶ್ವ ಪ್ರವಾಸೋದ್ಯಮ ದಿನವನ್ನು “ಡಿಜಿಟಲ್ ಕಾರ್ಯಸೂಚಿ ಮತ್ತು ಕೃತಕ ಬುದ್ಧಿಮತ್ತೆ ಬಳಸಿ ಪ್ರವಾಸೋದ್ಯಮದ ಮರುಸೃಷ್ಟ ಎಂಬ ಘೋಷ ವಾಕ್ಯದೊಂದಿಗೆ ಆಚರಿಸಲಾಗುತ್ತಿದ್ದು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಉತ್ತೇಜಿಸಲು ಹಲವು ಸ್ಪರ್ಧೆಗಳು ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಈ ಕರಪತ್ರ ಬಿಡುಗಡೆ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ವಿಜಯಪುರ ಉಪ ವಿಭಾಗಾಧಿಕಾರಿ ಜುಫಿಶಾನ್ ಹಕ್ ಸೇರಿದಂತೆ ಪೀಟರ್ ಅಲೆಕ್ಸಾಂಡರ್, ಅಮೀನ ಹುಲ್ಲೂರ, ರಮೇಶ ಚವ್ಹಾಣ,ಪ್ರವಾಸೋದ್ಯಮ ಸಮಾಲೋಚಕರಾದ ಅನಿಲಕುಮಾರ ಬಣಜಿಗೇರ ಉಪಸ್ಥಿತರಿದ್ದರು.
ಈ ಆಚರಣೆಯ ಭಾಗವಾಗಿ ಜಿಲ್ಲೆಯ ಪ್ರವಾಸಿ ತಾಣಗಳು ಹಾಗೂ ಸಾಂಸ್ಕೃತಿಕ ಹಿನ್ನೆಲೆಯನ್ನು ಬಿಂಬಿಸುವ ೨ ನಿಮಿಷಗಳ ಕಿರುಚಿತ್ರ ಸ್ಪರ್ಧೆಯನ್ನು ಸಾರ್ವಜನಿಕರಿಗಾಗಿ ಆಯೋಜಿಸಲಾಗಿದೆ.
ಈಗಾಗಲೇ ಸೆ.೨೦ ರಿಂದ ಆರಂಭವಾಗಿದ್ದು, ಸೆ.೨೫ರ ಸಾಯಂಕಾಲ ೪ ಗಂಟೆಯವರೆಗೆ ನಡೆಯುವ ಈ ಸ್ಪರ್ಧೆಯಲ್ಲಿ ಸಾರ್ವಜನಿಕರು ತಮ್ಮ ವೀಡಿಯೊಗಳನ್ನು ಇಮೇಲ್ ಮೂಲಕ ಸಲ್ಲಿಸಬಹುದಾಗಿದೆ. ಅತ್ಯುತ್ತಮ ವೀಡಿಯೊಗಳಿಗೆ ಆಕರ್ಷಕ ಬಹುಮಾನಗಳನ್ನು ನೀಡಲಾಗುವುದು.
ಇದರ ಜೊತೆಗೆ ಬಿ.ಎಲ್.ಡಿ.ಇ ಅಸೋಶಿಯೇಷನ್ ಫ.ಗು.ಹಳಕಟ್ಟಿ ಇಂಜಿನಿಯರಿಂಗ್ ಹಾಗೂ ತಂತ್ರಜ್ಞಾನ ಕಾಲೇಜಿನ ಸಹಯೋಗದೊಂದಿಗೆ ಆರ್ಕಿಟೆಕ್ಟ್ ವಿದ್ಯಾರ್ಥಿಗಳಿಗಾಗಿ ಸೆ. ೨೧ ರಿಂದ ೨೫ ರ ಮಧ್ಯಾಹ್ನ ೩.ಗಂಟೆಯವರೆಗೆ ಕೃತಕ ಬುದ್ಧಿಮತ್ತೆಯ ಮೂಲಕ ಪ್ರವಾಸಿ ತಾಣಗಳ ಮರುಪರಿಲ್ಪನೆ ವಿಷಯದ ಮೇಲೆ ವಿಶೇಷ ಪೋಸ್ಟರ್ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.
ಐತಿಹಾಸಿಕ ನಗರಿಯ ಸ್ವಚ್ಛತೆ ಮತ್ತು ಪರಂಪರೆಯ ಅರಿವು ಮೂಡಿಸುವ ನಿಟ್ಟಿನಲ್ಲಿ ಸೆ. ೨೫ ರಂದು ಬೆಳಿಗ್ಗೆ ೮ ಗಂಟೆಗೆ ಆನಂದ ಮಹಲ್‌ನಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅದರಂತೆ, ಸೆ. ೨೬ ರಂದು ಬೆಳಿಗ್ಗೆ ೮ ಗಂಟೆಗೆ ಕೆ.ಎಸ್.ಟಿ.ಡಿ.ಸಿ ಹೋಟೆಲ್ ಆವರಣದಿಂದ ಆರಂಭವಾಗಿ ಗಗನ್ ಮಹಲ್, ಆನಂದ ಮಹಲ್, ಸಾತ್ ಮಂಜಿಲ್ ಮತ್ತು ಜೋಡಗುಮ್ಮಟ ಮೂಲಕ ತಾಜಬಾವಡಿಯವರೆಗೆ ‘ಹೆರಿಟೇಜ್ ವಾಕ್’ (ಪರಂಪರೆ ನಡಿಗೆ) ನಡೆಯಲಿದೆ.
ಪ್ರವಾಸೋದ್ಯಮದಲ್ಲಿ ತಂತ್ರಜ್ಞಾನದ ಬಳಕೆಗೆ ಉತ್ತೇಜನ ನೀಡುವ ಭಾಗವಾಗಿ, ಬಿ.ಎಲ್.ಡಿ.ಇ ಸಂಸ್ಥೆಯ ಇಂಜಿನೀಯರಿಂಗ್ ಕಾಲೇಜ್ ವಿಭಾಗದ ಸಹಯೋಗದೊಂದಿಗೆ ವಿಜಯಪುರ ಜಿಲ್ಲೆಯ ಪ್ರವಾಸಿ ತಾಣಗಳ ಸಮಗ್ರ ಮಾಹಿತಿ ನೀಡುವ ‘ಎಐ ಆಧಾರಿತ ಆಪ್ಯ್ ೨೦೨೬ರ ಸೆ.೨೭ ರಂದು ಬೆಳಿಗ್ಗೆ ೧೦.೩೦ ಕ್ಕೆ ಇಬ್ರಾಹಿಂ ರೋಜಾದಲ್ಲಿ ಬಿಡುಗಡೆ ಮಾಡಲಾಗುವುದ.
ಅದೇ ದಿನ ನೂತನ ಫೋಟೋಗ್ರಫಿ ಅಸೋಸಿಯೇಷನ್ ಇವರ ವತಿಯಿಂದ ಛಾಯಾಗ್ರಹಣ ಸ್ಪರ್ಧೆ ಮತ್ತು ಪ್ರದರ್ಶನವೂ ನಡೆಯಲಿದೆ.
ಸೆಪ್ಟೆಂಬರ್.೨೫ ರಂದು ಬೆಳಿಗ್ಗೆ ೧೦.೩೦ ರಿಂದ ಸಂಜೆ ೪ಗಂಟೆಯವರೆಗೆ ಇಬ್ರಾಹಿಂ ರೋಜಾ ಆವರಣದಲ್ಲಿ ಜಿಲ್ಲೆಯ ಕಲಾವಿದರಿಗಾಗಿ ವಿಶೇಷ ಚಿತ್ರಕಲಾ ಶಿಬಿರವನ್ನು ಆಯೋಜಿಸಲಾಗಿದ್ದು, ವಿಜೇತರಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಗುವುದು.
ಈ ಎಲ್ಲ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆಯೂ ಹಾಗೂ ಕಾರ್ಯಕ್ರಮಗಳ ಹೆಚ್ಚಿನ ಮಾಹಿತಿಗಾಗಿ ಮೊ: ೯೮೮೬೩೭೩೦೦೬ ಹಾಗೂ ೯೭೩೧೮೧೩೨೨೭ ಅಥವಾ ೯೪೮೧೯೪೦೧೩೨ ಸಂಪರ್ಕಿಸಿ ಬಹುದಾಗಿದೆ ಎಂದು
ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅರವಿಂದ ಹೂಗಾರ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ

ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ

ಉಪ ವಿಭಾಗಾಧಿಕಾರಿ ಹುದ್ದೆಗೆ ಬಡ್ತಿ ಪಡೆದ ಸಿದ್ಧರಾಯಗೆ ಸನ್ಮಾನ

ವಿಜಯಪುರ ಜಿಲ್ಲೆ ಅಭಿವೃದ್ಧಿಗೆ ೩೭೧(ಜೆ) ಸೌಲಭ್ಯ ಕಲ್ಪಿಸಲು ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ
    In (ರಾಜ್ಯ ) ಜಿಲ್ಲೆ
  • ಉಪ ವಿಭಾಗಾಧಿಕಾರಿ ಹುದ್ದೆಗೆ ಬಡ್ತಿ ಪಡೆದ ಸಿದ್ಧರಾಯಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಅಭಿವೃದ್ಧಿಗೆ ೩೭೧(ಜೆ) ಸೌಲಭ್ಯ ಕಲ್ಪಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಅಗತ್ಯ ಬಿದ್ದರೆ ಕಬ್ಬು ಬೆಳೆಗಾರರ ಪರ ಹೋರಾಟಕ್ಕೂ ಸಿದ್ಧ
    In (ರಾಜ್ಯ ) ಜಿಲ್ಲೆ
  • ಶಾಸಕರಿಂದ ನನಗೆ ಬಹಿರಂಗವಾಗಿ ಜೀವಬೆದರಿಕೆ :ರಜಪೂತ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಹೆದ್ದಾರಿ ತಡೆ – ಪಟ್ಟು ಬಿಡದ ರೈತ ಸಮೂಹ
    In (ರಾಜ್ಯ ) ಜಿಲ್ಲೆ
  • ಅಲ್ಪಸಂಖ್ಯಾತರ ಸರಳ ವಿವಾಹ ಸಹಾಯಧನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅಂಗನವಾಡಿ ಕಂ-ಕ್ರಷ್ ಕೇಂದ್ರಗಳ ಕಾರ್ಯಕರ್ತೆ-ಸಹಾಯಕಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕಿತ್ತೂರು ಚೆನ್ನಮ್ಮ ವಿಜಯ ಜ್ಯೋತಿ ಯಾತ್ರೆಗೆ ಸ್ವಾಗತ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.