Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ

ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ

ಉಪ ವಿಭಾಗಾಧಿಕಾರಿ ಹುದ್ದೆಗೆ ಬಡ್ತಿ ಪಡೆದ ಸಿದ್ಧರಾಯಗೆ ಸನ್ಮಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ ಯೋಜನೆ ತಲುಪಿಸಿ
(ರಾಜ್ಯ ) ಜಿಲ್ಲೆ

ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ ಯೋಜನೆ ತಲುಪಿಸಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅಧಿಕಾರಿಗಳಿಗೆ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರ ಮನವಿ ಹಾಗೂ ನಿಯಮಾನುಸಾರ ವಿವಿಧ ಯೋಜನೆಗಳಡಿ ಸರ್ಕಾರದ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಕರ್ನಾಟಕ ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯಗಳ ಹಾಗೂ ಕರ್ನಾಟಕ ಪರಿಶಿಷ್ಟ ಪಂಗಡದ ಮೇದಾರ ಅಲೆಮಾರಿ ಸಮುದಾಯಗಳ ಮೂರನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅರ್ಹರಿಗೆ ಯೋಜನೆಯ ಲಾಭ ತಲುಪಿಸಬೇಕು. ಬ್ಯಾಂಕಿನಲ್ಲಿ ಈ ಫಲಾನುಭವಿಗಳಿಗೆ ಸಾಲ ಸೌಲಭ್ಯ ಕಲ್ಪಿಸಲು ವಿಳಂಬ ಮಾಡಬಾರದು ಎಂದು ಬ್ಯಾಂಕಿನ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಮುದಾಯದ ಭಿವೃದ್ಧಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಅನುಷ್ಟಾನಗೊಳಿಸುತ್ತಿದ್ದು, ಅವರಿಗೆ ದೊರಕಬೇಕಾದ ಸೌಲಭ್ಯಗಳನ್ನು ತಲುಪಿಸಬೇಕು ಎಂದರು. ೨೦೨೫ ರಿಂದ ೨೬ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವಿವಿಧ ಯೋಜನೆಯಡಿ ನಿಗದಿಪಡಿಸಿರುವ ಭೌತಿಕ ಮತ್ತು ಆರ್ಥಿಕ ಗುರಿಗಳ ಮಾಹಿತಿ ವಿವರವನ್ನು ಸಭೆಗೆ ಮಂಡಿಸಲಾಯಿತು.
ಜೊತೆಗೆ ಅವರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಕೂಡಲೇ ಒದಗಿಸಬೇಕು. ಮಕ್ಕಳ ಶಿಕ್ಷಣಕ್ಕಾಗಿ ಒತ್ತು ನೀಡುವುದು, ಸಮುದಾಯ ಭವನ ನಿರ್ಮಾಣ, ಬೀದಿ ದೀಪ, ಸ್ಮಶಾನ ಭೂಮಿ, ರೇಷನ್ ಕಾರ್ಡ,ಈ ಸಮುದಾಯ ವಾಸಿಸುವ ಕಾಲೊನಿಯಲ್ಲಿ ಮೂಲಭೂತ ಸೌಕರ್ಯ ಒದಗಿಸಿ ಅಭಿವೃದ್ಧಿ ಪಡಿಸುವಂತೆ ಸಮಿತಿ ಸದಸ್ಯರು ಸಭೆಗೆ ಕೋರಿದರು.
೨೦೨೬-೨೭ನೇ ಸಾಲಿನ ಪರಿಶಿಷ್ಟ ಪಂಗಡದ ಮೇದಾರ ಅಲೆಮಾರಿ ಸಮುದಾಯ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆ ನಡೆಸಲಾಯಿತು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ, ಜಂಟಿ ಕೃಷಿ ನಿರ್ದೇಶಕರಾದ ಶಿವನಗೌಡ ಪಾಟೀಲ, ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾದ ಸಿದ್ರಾಮ ಬರಗೀಮಠ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಹಣಮಂತ ಕಾಲತಿಪ್ಪಿ, ಹೆಸ್ಕಾಂ ಅಧೀಕ್ಷಕ ಅಭಿಯಂತರರಾದ ಸಿದ್ದಪ್ಪ ಬಿಂಜಗೇರಿ ಸೇರಿದಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯದ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸದಸ್ಯರಾದ ಕಾಮಣ್ಣ ದೇವಪ್ಪ ದಶವಂತ, ಬಾಬು ಭೀಮಪ್ಪ ಭಜಂತ್ರಿ, ಲಕ್ಷ್ಮಣ ನಾಗಪ್ಪ ಭಜಂತ್ರಿ, ಭೀಮರಾಯ ಲಕ್ಷ್ಮಣ ಕಟ್ಟಿಮನಿ, ವಾಸುದೇವ ಕಾಳೆ ಹಾಗೂ ಪರಿಶಿಷ್ಟ ಪಂಗಡದ ಮೇದಾರ ಅಲೆಮಾರಿ ಸಮುದಾಯ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸದಸ್ಯರಾದ ವಿಠ್ಠಲ ಎನ್ ಪರಾಂಡೆ, ಶ್ರೀಮತಿ ಮಂದಾಬಾಯಿ ಬಸವರಾಜ ಗೊಳಸಂಗಿ, ಉಮೇಶ ಸದಾಶಿವ ಗೊಳಸಂಗಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ

ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ

ಉಪ ವಿಭಾಗಾಧಿಕಾರಿ ಹುದ್ದೆಗೆ ಬಡ್ತಿ ಪಡೆದ ಸಿದ್ಧರಾಯಗೆ ಸನ್ಮಾನ

ವಿಜಯಪುರ ಜಿಲ್ಲೆ ಅಭಿವೃದ್ಧಿಗೆ ೩೭೧(ಜೆ) ಸೌಲಭ್ಯ ಕಲ್ಪಿಸಲು ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ
    In (ರಾಜ್ಯ ) ಜಿಲ್ಲೆ
  • ಉಪ ವಿಭಾಗಾಧಿಕಾರಿ ಹುದ್ದೆಗೆ ಬಡ್ತಿ ಪಡೆದ ಸಿದ್ಧರಾಯಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಅಭಿವೃದ್ಧಿಗೆ ೩೭೧(ಜೆ) ಸೌಲಭ್ಯ ಕಲ್ಪಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಅಗತ್ಯ ಬಿದ್ದರೆ ಕಬ್ಬು ಬೆಳೆಗಾರರ ಪರ ಹೋರಾಟಕ್ಕೂ ಸಿದ್ಧ
    In (ರಾಜ್ಯ ) ಜಿಲ್ಲೆ
  • ಶಾಸಕರಿಂದ ನನಗೆ ಬಹಿರಂಗವಾಗಿ ಜೀವಬೆದರಿಕೆ :ರಜಪೂತ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಹೆದ್ದಾರಿ ತಡೆ – ಪಟ್ಟು ಬಿಡದ ರೈತ ಸಮೂಹ
    In (ರಾಜ್ಯ ) ಜಿಲ್ಲೆ
  • ಅಲ್ಪಸಂಖ್ಯಾತರ ಸರಳ ವಿವಾಹ ಸಹಾಯಧನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅಂಗನವಾಡಿ ಕಂ-ಕ್ರಷ್ ಕೇಂದ್ರಗಳ ಕಾರ್ಯಕರ್ತೆ-ಸಹಾಯಕಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕಿತ್ತೂರು ಚೆನ್ನಮ್ಮ ವಿಜಯ ಜ್ಯೋತಿ ಯಾತ್ರೆಗೆ ಸ್ವಾಗತ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.