Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪೌರ ಕಾರ್ಮಿಕರ ಆರೋಗ್ಯ-ಮಕ್ಕಳ ಶಿಕ್ಷಣಕ್ಕೆ ಆದ್ಯತೆ

ಹೊಸನಗರ ಹಳ್ಳದ ಸೇತುವೆ ಮೇಲೆ ಸಂಚಾರಕ್ಕೆ ಸಂಚಕಾರ

ಬೇನಾಳ ಗ್ರಾಮಕ್ಕೆ ನುಗ್ಗಿದ ಮೊಸಳೆ ಮರಿ :ಆತಂಕದಲ್ಲಿ ಗ್ರಾಮಸ್ಥರು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸ್ಟಾರ್ಟ್ ಅಪ್ ಗಳಿಂದ ನವ್ಯೋದ್ಯಮಿಗಳಿಗೆ ಪ್ರೋತ್ಸಾಹ :ಸುಜಯ
(ರಾಜ್ಯ ) ಜಿಲ್ಲೆ

ಸ್ಟಾರ್ಟ್ ಅಪ್ ಗಳಿಂದ ನವ್ಯೋದ್ಯಮಿಗಳಿಗೆ ಪ್ರೋತ್ಸಾಹ :ಸುಜಯ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಶ್ರೀ ಬಿ. ಎಂ. ಪಾಟೀಲ ಫೌಂಡೇಶನ್ ಫಾರ್ ಇನ್ನೊವೇಶನ್ ಆಂಡ್ ಇನಕ್ಯೂಬೇಶನ್ ಸೆಂಟರ್ ಜಿಲ್ಲೆಯ ಸ್ಟಾರ್ಟ್ ಅಪ್ ಗಳು, ವಿದ್ಯಾರ್ಥಿ ನವ್ಯೋದ್ಯಮಿಗಳು ಹಾಗೂ ಉದ್ಯಮಿಗಳಿಗೆ ಪ್ರೋತ್ಸಾಹ ನೀಡುತ್ತಿದ್ದು, ಸೆಂಟರ್ ನ ಕೆಲಸ ಕಾರ್ಯಗಳಿಗೆ ಕರ್ನಾಟಕ ಡಿಜಿಟಲ್ ಎಕನಾಮಿಕ್ ಮಿಶನ್ ಬೆಂಬಲವಾಗಿ ನಿಲ್ಲಲಿದೆ ಎಂದು ಮಿಶನ್ ನ ಕಲ್ಯಾಣ ಕರ್ನಾಟಕ ಕ್ಲಸ್ಟರ್ ಹೆಡ್ ಸುಜಯ ಮುದಗಲ ಹೇಳಿದ್ದಾರೆ.
ರವಿವಾರ ನಗರದಲ್ಲಿರುವ ಶ್ರೀ ಬಿ. ಎಂ. ಪಾಟೀಲ ಫೌಂಡೇಶನ್ ಫಾರ್ ಇನ್ನೊವೇಶನ್ ಆಂಡ್ ಇನಕ್ಯೂಬೇಶನ್ ಸೆಂಟರ್ ಗೆ ಭೇಟಿ ನೀಡಿದ ಅವರು ವಿದ್ಯಾರ್ಥಿಗಳು, ನವ್ಯೋದ್ಯಮಿಗಳು ಹಾಗೂ ಉದ್ಯಮಿಗಳೊಂದಿಗೆ ಸಂವಾದ ನಡೆಸಿದರು.
ರಾಜ್ಯದ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ನೀತಿಗಳು, ನಾನಾ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಕುರಿತು ಇದೇ ವೇಳೆ ಚರ್ಚೆ ನಡೆಸಿದ ಅವರು, ಜಿಲ್ಲೆಯಲ್ಲಿ ನವೋದ್ಯಮ ಪರಿಸರವನ್ನು ಮತ್ತಷ್ಟು ಬಲಪಡಿಸಲು ಅಗತ್ಯವಿರುವ ಅಂಶಗಳ ಕುರಿತು ಸ್ಟಾರ್ಟ್‌ಅಪ್‌ಗಳ ಸಂಸ್ಥಾಪಕರು ತಮ್ಮ ಅಭಿಪ್ರಾಯಗಳು ಮತ್ತು ಅಗತ್ಯಗಳನ್ನು ವಿವರಿಸಿದರು. ಮೂಲಸೌಕರ್ಯ, ಮಾರ್ಗದರ್ಶನ, ಹಣಕಾಸು ಮತ್ತು ಅನುದಾನ, ಮಾರುಕಟ್ಟೆ ಸಂಪರ್ಕ ಹಾಗೂ ಕೈಗಾರಿಕಾ ಸಹಭಾಗಿತ್ವ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಯಿತು. ಜಿಲ್ಲೆಯ ಶೈಕ್ಷಣಿಕ ಸಂಸ್ಥೆಗಳು, ಸ್ಟಾರ್ಟ್‌ಅಪ್‌ಗಳು ಹಾಗೂ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ನಡುವೆ ಸಹಭಾಗಿತ್ವವನ್ನು ಹೆಚ್ಚಿಸುವ ಅಗತ್ಯಕ್ಕೂ ಒತ್ತು ನೀಡಲಾಯಿತು. ಇದರ ಮೂಲಕ ವಿದ್ಯಾರ್ಥಿಗಳಲ್ಲಿ ನವೀನ ಆಲೋಚನೆಗಳಿಗೆ ಉತ್ತೇಜನ ನೀಡುವುದರ ಜೊತೆಗೆ, ಸ್ಟಾರ್ಟ್‌ಅಪ್‌ಗಳು ಮತ್ತು ಕೈಗಾರಿಕೆಗಳಿಗೆ ಯುವ ಪ್ರತಿಭೆ, ಹೊಸ ಆಲೋಚನೆಗಳು ಹಾಗೂ ತಂತ್ರಜ್ಞಾನದೊಂದಿಗೆ ಸಂಪರ್ಕ ಕಲ್ಪಿಸಲು ಅವಕಾಶ ದೊರೆಯಲಿದೆ.
ಈ ನಿಟ್ಟಿನಲ್ಲಿ ಪ್ರತಿ ಶನಿವಾರ ಶ್ರೀ ಬಿ. ಎಂ. ಪಾಟೀಲ್ ಫೌಂಡೇಶನ್ ಫಾರ್ ಇನ್ನೋವೇಶನ್ ಆ್ಯಂಡ್
ಇನ್‌ಕ್ಯುಬೇಶನ್‌ ಸೆಂಟರ್ ನಲ್ಲಿ ಸ್ಟಾರ್ಟ್‌ಅಪ್ ಮತ್ತು ನವೋದ್ಯಮ ಸಭೆಗಳನ್ನು ಆಯೋಜಿಸಲಾಗುವುದು. ಈ ಸಭೆಗಳು ಸ್ಟಾರ್ಟ್‌ಅಪ್ ಸಂಸ್ಥಾಪಕರು,ವಿದ್ಯಾರ್ಥಿಗಳು, ನವೋದ್ಯಮಿಗಳು ಹಾಗೂ ಉದ್ಯಮಿಗಳು ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲು, ಸಂಪರ್ಕ ಬೆಳೆಸಲು ಮತ್ತು ಸಹಭಾಗಿತ್ವದ ಅವಕಾಶಗಳನ್ನು ಅನ್ವೇಷಿಸಲು ವೇದಿಕೆಯಾಗಲಿವೆ. ಕೆಡಿಇಎಂ,ಬಿ. ಎಂ. ಪಾಟೀಲ್ ಫೌಂಡೇಶನ್ ಫಾರ್ ಇನ್ನೋವೇಶನ್ ಆ್ಯಂಡ್ ಇನ್‌ಕ್ಯುಬೇಶನ್,
ಶೈಕ್ಷಣಿಕ ಸಂಸ್ಥೆಗಳು, ಸ್ಟಾರ್ಟ್‌ಅಪ್‌ಗಳು ಹಾಗೂ ಕೈಗಾರಿಕೆಗಳ ನಡುವಿನ ನಿರಂತರ ಸಹಭಾಗಿತ್ವದ ಮೂಲಕ ವಿಜಯಪುರದಲ್ಲಿ ಬಲಿಷ್ಠ ನವೋದ್ಯಮ ಪರಿಸರ ನಿರ್ಮಾಣಕ್ಕೆ ಉತ್ತೇಜನ ದೊರೆಯಲಿದೆ. ಇದರ ಮೂಲಕ ಜಿಲ್ಲೆಯ ಯುವ ನವೋದ್ಯಮಿಗಳು ಹಾಗೂ ಉದ್ಯಮಿಗಳಿಗೆ ರಾಜ್ಯದ ನಾನಾ ಯೋಜನೆಗಳು, ಅನುದಾನಗಳು, ಮಾರ್ಗದರ್ಶನ ಮತ್ತು ಮಾರುಕಟ್ಟೆ ಅವಕಾಶಗಳೊಂದಿಗೆ ಸಂಪರ್ಕ ಸಾಧಿಸಲು ಹೆಚ್ಚಿನ ಅವಕಾಶಗಳು ಲಭ್ಯವಾಗಲಿವೆ. ವಿಜಯಪುರವನ್ನು ನವೋದ್ಯಮ ಮತ್ತು ಉದ್ಯಮಶೀಲತೆಯ ಪ್ರಮುಖ ಕೇಂದ್ರವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಈ ಪ್ರಯತ್ನ ಮಹತ್ವದ ಹೆಜ್ಜೆಯಾಗಲಿದೆ.
ಈ ಸಂದರ್ಭದಲ್ಲಿ ಸೆಂಟರ್ ಪ್ರತಿನಿಧಿಗಳಾದ ಆಶೀಶ ಕುಲಕರ್ಣಿ, ಸಹನಾ ಬಿರಾದಾರ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪೌರ ಕಾರ್ಮಿಕರ ಆರೋಗ್ಯ-ಮಕ್ಕಳ ಶಿಕ್ಷಣಕ್ಕೆ ಆದ್ಯತೆ

ಹೊಸನಗರ ಹಳ್ಳದ ಸೇತುವೆ ಮೇಲೆ ಸಂಚಾರಕ್ಕೆ ಸಂಚಕಾರ

ಬೇನಾಳ ಗ್ರಾಮಕ್ಕೆ ನುಗ್ಗಿದ ಮೊಸಳೆ ಮರಿ :ಆತಂಕದಲ್ಲಿ ಗ್ರಾಮಸ್ಥರು

ಶಿವಾನಂದ ತಗಡೂರ ಗೆ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪೌರ ಕಾರ್ಮಿಕರ ಆರೋಗ್ಯ-ಮಕ್ಕಳ ಶಿಕ್ಷಣಕ್ಕೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ಹೊಸನಗರ ಹಳ್ಳದ ಸೇತುವೆ ಮೇಲೆ ಸಂಚಾರಕ್ಕೆ ಸಂಚಕಾರ
    In (ರಾಜ್ಯ ) ಜಿಲ್ಲೆ
  • ಬೇನಾಳ ಗ್ರಾಮಕ್ಕೆ ನುಗ್ಗಿದ ಮೊಸಳೆ ಮರಿ :ಆತಂಕದಲ್ಲಿ ಗ್ರಾಮಸ್ಥರು
    In (ರಾಜ್ಯ ) ಜಿಲ್ಲೆ
  • ಶಿವಾನಂದ ತಗಡೂರ ಗೆ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ಅದ್ದೂರಿಯಾಗಿ ಗಣೇಶ ವಿಸರ್ಜನೆ
    In (ರಾಜ್ಯ ) ಜಿಲ್ಲೆ
  • ಶಾಂತಿ-ಸದ್ಭಾವದ ಸಂದೇಶ ಸಾರಿದ್ದ ಹಜರತ್ ಗೌಸ್ ಪಾಕ್
    In (ರಾಜ್ಯ ) ಜಿಲ್ಲೆ
  • ಆರ್ಥಿಕ ಸದೃಢತೆಗೆ ಸಹಕಾರ ಸಂಘ ಬಲಪಡಿಸಿ :ಅಮರಗೊಂಡ
    In (ರಾಜ್ಯ ) ಜಿಲ್ಲೆ
  • ಸಿಎ ಸೈಟ್‌ಗಳು ಸಾರ್ವನಿಕರ ಬಳಕೆಗೆ ಮೀಸಲಿಡಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಾಲೆಯ ಕೆಲಸ ನನ್ನ ಮನೆಯ ಕೆಲಸದಂತೆ :ಮೇತ್ರಿ
    In (ರಾಜ್ಯ ) ಜಿಲ್ಲೆ
  • ಚಡಚಣ ತಾಲೂಕು ಬರಗಾಲ ಘೋಷಣೆಗಾಗಿ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.