ಎಸ್‌ಡಿಎಂಸಿ ಅಧ್ಯಕ್ಷರಾಗಿ ಗುರುಬಾಳ ಮೇತ್ರಿ, ಉಪಾಧ್ಯಕ್ಷರಾಗಿ ಪರವಿನಾ ಅಂಗಡಿ ಆಯ್ಕೆ
ಉದಯರಶ್ಮಿ ದಿನಪತ್ರಿಕೆ
ಚಡಚಣ: ತಾಲೂಕಿನ ಬರಡೋಲ ಗ್ರಾಮದ ಜಂಗಲಗಿ ವಸ್ತಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್‌ಡಿಎಂಸಿ) ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸೋಮವಾರ ನಡೆಯಿತು.
ಸರ್ವಾನುಮತದಿಂದ ಗುರುಬಾಳ ದು. ಮೇತ್ರಿ ಅವರನ್ನು ಎಸ್‌ಡಿಎಂಸಿ ಅಧ್ಯಕ್ಷರಾಗಿ ಹಾಗೂ ಶ್ರೀಮತಿ ಪರವಿನಾ ಅಂಗಡಿ ಅವರನ್ನು ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.
ನೂತನ ಅಧ್ಯಕ್ಷ ಗುರುಬಾಳ ಮೇತ್ರಿ ಮಾತನಾಡಿ, “ಶಾಲೆಯ ಅಭಿವೃದ್ಧಿ ಕಾರ್ಯಗಳನ್ನು ನನ್ನ ಮನೆಯ ಕೆಲಸದಂತೆ ಪರಿಗಣಿಸಿ ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ. ಶಾಲೆಯ ಶೈಕ್ಷಣಿಕ ಪ್ರಗತಿಗೆ ಅಗತ್ಯವಿರುವ ಎಲ್ಲ ರೀತಿಯ ಸಹಕಾರ ನೀಡುತ್ತೇನೆ” ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಿದ್ರಾಮ ಮಾಲಗಾರ, ಶಿವಪ್ಪ ಜಂಗಲಗಿ, ಜಕ್ಕಪ್ಪ ಮೇತ್ರಿ, ಶ್ರೀಶೈಲ ಜಂಗಲಗಿ, ಗಣಪತಿ ನಂದೂರ, ಶ್ರೀಶೈಲ ಬನಸೋಡೆ ಸೇರಿದಂತೆ ಗ್ರಾಮದ ಹಿರಿಯರು ಹಾಗೂ ಶಾಲೆಯ ಹಿತೈಷಿಗಳು ಉಪಸ್ಥಿತರಿದ್ದರು.

