ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ಪಟ್ಟಣದ ಮಲ್ಲಿಕಾರ್ಜುನ ಗಜಾನನ ಮಂಡಳಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯ ವಿಸರ್ಜನೆ ಮಂಗಳವಾರ ಭಕ್ತಿ ಹಾಗೂ ಸಂಭ್ರಮದ ವಾತಾವರಣದಲ್ಲಿ ನೆರವೇರಿತು.
ಗಣೇಶೋತ್ಸವದ ಅಂಗವಾಗಿ ಮಂಡಳಿಯಿಂದ ಪ್ರತಿದಿನ ವಿಶೇಷ ಪೂಜೆ, ಅನ್ನಸಂತರ್ಪಣೆ ಸೇರಿದಂತೆ ಹಲವು ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಹುಬ್ಬಳ್ಳಿ–ವಿಜಯಪುರದ ಘನಲಿಂಗ ಸ್ವಾಮೀಜಿ ಅವರಿಂದ ವಿಶೇಷ ಪ್ರವಚನ ಕಾರ್ಯಕ್ರಮ ನಡೆಯಿತು.
ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಮಂಗಳವಾರ ನಡೆದ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿತು. ಡಿಜೆ ಸಂಗೀತದ ತಾಳಕ್ಕೆ ಮಹಿಳೆಯರು, ಯುವಕರು ಹಾಗೂ ಭಕ್ತರು ಹೆಜ್ಜೆ ಹಾಕಿ ಸಂಭ್ರಮಿಸಿದರು. ಬಳಿಕ ಕೃಷ್ಣಾ ನದಿಯಲ್ಲಿ ಗಣೇಶ ಮೂರ್ತಿಯನ್ನು ಸಂಪ್ರದಾಯಬದ್ಧವಾಗಿ ವಿಸರ್ಜಿಸಲಾಯಿತು.
ಮೆರವಣಿಗೆಯಲ್ಲಿ ಸಿದ್ದಪ್ಪ ಸೊನ್ನದ, ಶೇಕಪ್ಪ ಗಾಣಗೆರ, ಈರಣ್ಣ ಉಗ್ರಾಣ, ಸಂತೋಷ ಹಡ್ರೋಳ್ಳಿ, ಬಸವರಾಜ ಬಾಲಗೊಂಡ, ಆನಂದ ಉಳ್ಳಾಗಡ್ಡಿ, ಸಂಗಪ್ಪ ಬರಗಿ, ಕಲ್ಲಪ್ಪ ದಳವಾಯಿ ಸೇರಿದಂತೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೆ ಭಾಗವಹಿಸಿದ್ದು ವಿಶೇಷವಾಗಿತ್ತು

