Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ

ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ

ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪೌರ ಕಾರ್ಮಿಕರ ಆರೋಗ್ಯ-ಮಕ್ಕಳ ಶಿಕ್ಷಣಕ್ಕೆ ಆದ್ಯತೆ
(ರಾಜ್ಯ ) ಜಿಲ್ಲೆ

ಪೌರ ಕಾರ್ಮಿಕರ ಆರೋಗ್ಯ-ಮಕ್ಕಳ ಶಿಕ್ಷಣಕ್ಕೆ ಆದ್ಯತೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ನಡೆದ ಪೌರಕಾರ್ಮಿಕರ ದಿನಾಚರಣೆಯಲ್ಲಿ ಮಹಾನಗರ ಪಾಲಿಕೆ ಮೇಯರ್ ಮಡಿವಾಳಪ್ಪ ಕರಡಿ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಸ್ವಚ್ಛತೆ ಹಾಗೂ ನೈರ್ಮಲ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ ಅತ್ಯಂತ ಮಹತ್ವದ್ದಾಗಿದ್ದು, ಪೌರಕಾರ್ಮಿಕರು ನಗರದ ಬೆನ್ನೆಲುಬಾಗಿದ್ದಾರೆ ಎಂದು ಮಹಾನಗರ ಪಾಲಿಕೆ ಮೇಯರ್ ಮಡಿವಾಳಪ್ಪ ಕರಡಿ ಹೇಳಿದರು.
ನಗರಾಭಿವೃದ್ಧಿ ಇಲಾಖೆ, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ಮಂಗಳವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪೌರಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಿ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಮಹಾನಗರ ಪಾಲಿಕೆ ಬದ್ಧವಾಗಿದೆ. ಸಕಾಲದಲ್ಲಿ ವೇತನ ಪಾವತಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದ್ದು, ಸರ್ಕಾರದ ವಿವಿಧ ಇಲಾಖೆಗಳ ಮೂಲಕ ದೊರೆಯುವ ಯೋಜನೆಗಳ ಪ್ರಯೋಜನವನ್ನು ಪೌರಕಾರ್ಮಿಕರು ಪಡೆದುಕೊಳ್ಳಬೇಕು ಎಂದು ಮೇಯರ್ ಕರೆ ನೀಡಿದರು.
ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಮಾತನಾಡಿ, ನಗರದ ಸೌಂದರ್ಯ ಹಾಗೂ ಶುಚಿತ್ವಕ್ಕಾಗಿ ನಾನಾ ಯೋಜನೆಗಳನ್ನು ಪೌರಕಾರ್ಮಿಕರ ನೇತೃತ್ವದಲ್ಲಿ ಯಶಸ್ವಿಗೊಳಿಸಲಾಗಿದೆ. ನಿತ್ಯ ಬೆಳಗ್ಗೆ ೫ ಗಂಟೆಗೆ ಎದ್ದು ಪೌರಕಾರ್ಮಿಕರು ಕೆಲಸದಲ್ಲಿ ತೊಡಗಿಸಿಕೊಳ್ಳುವ ಮೂಲಕ ನಗರದಲ್ಲಿ ಶುಚಿತ್ವ ಕಾಪಾಡುತ್ತಾರೆ. ಇಡೀ ನಗರ ಸ್ವಚ್ಛವಾಗಿರಲು ನಿಮ್ಮೆಲ್ಲರ ಶ್ರಮವೇ ಕಾರಣ ಎಂದ ಅವರು, ಸ್ವಚ್ಛ ಹಾಗೂ ಸುಂದರ ನಗರದ ಹಿಂದೆ ಪೌರಕಾರ್ಮಿಕರ ಶ್ರಮ ಅಪಾರವಾಗಿದೆ ಎಂದು ಪೌರಕಾರ್ಮಿಕರ ಕಾರ್ಯವನ್ನು ಮುಕ್ತ ಕಂಠದಿಂದ ಪ್ರಶಂಸಿಸಿದರು. ಸ್ವಚ್ಛತೆ ಮತ್ತು ಆರೋಗ್ಯ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ, ಇವುಗಳನ್ನು ಕಾಪಾಡುತ್ತಿರುವುದರ ಹಿಂದೆ ಪೌರಕಾರ್ಮಿಕರ ಶ್ರಮವಿದೆ. ನಗರದಲ್ಲಿ ಸ್ವಚ್ಛತೆಯಿಲ್ಲದೇ ಇದ್ದರೆ ಸಾಕಷ್ಟು ರೋಗ ರುಜಿನ ಉಲ್ಬಣಗೊಳ್ಳುತ್ತವೆ. ಆದರೆ ಪೌರ ಕಾರ್ಮಿಕರು ಇಡೀ ನಗರದ ಇಂಚಿಂಚೂ ಜಾಗದಲ್ಲೆಲ್ಲ ಶುಚಿ ಮಾಡಿ, ನಗರದ ಸೌಂದರ್ಯ ಹೆಚ್ಚಳಕ್ಕೆ ಶ್ರಮಿಸುತ್ತಿದ್ದಾರೆ ಎಂದರು.
ನಗರವನ್ನು ಸದಾ ಸ್ವಚ್ಛವಾಗಿಡುವ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಪಾಲಿಕೆ ಹಾಗೂ ಸರ್ಕಾರದಿಂದ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಪೌರ ಕಾರ್ಮಿಕರಿಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ಕಾರ್ಯಕ್ರಮವಿದೆ. ಪ್ರತಿ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು.
ಪಾಲಿಕೆ ಸದಸ್ಯರಾದ ಜವಾಹರ, ಸ್ವಪ್ನಾ ಕಣಮುಚನಾಳ, ರಾಜು ಮಗಿಮಠ, ಪ್ರೇಮಾನದ ಬಿರಾದಾರ ಹಾಗೂ ಸಫಾಯಿ ಕರ್ಮಚಾರಿ ಜಿಲ್ಲಾ ಸಮಿತಿ ಸದಸ್ಯ ಚೆನ್ನು ಕಟ್ಟಿಮನಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಉಪ ಮೇಯರ್ ಸುಮಿತ್ರಾ ಜಾಧವ, ಉಪ ಆಯುಕ್ತ ಮಹಾವೀರ ಬೋರಣ್ಣವರ, ಪಾಲಿಕೆ ಸದಸ್ಯರಾದ ರಾಹುಲ್ ಜಾಧವ, ಶರತ್ ಬಿರಾದಾರ, ಗಡಗಿ, ಅಸ್ಪಾಕ್ ಮನಗೂಳಿ, ಸಫಾಯಿ ಕರ್ಮಚಾರಿ ಸಮಿತಿಯ ಜಿಲ್ಲಾ ಸದಸ್ಯರಾದ ಮಹಾದೇವಿ ಹಾದಿಮನಿ, ದಯಾನಂದ ಸೇರಿದಂತೆ ಭೀಮರಾಯ ಜಿಗಜಿಣಗಿ, ರಾಜೇಶ್ವರಿ, ಮಂಗಳಾ ಶಹಾಪೂರ, ಕಟ್ಟಿಮನಿ, ಗಿರಿಧರ, ಯಲ್ಲಪ್ಪ ಛಲವಾದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು

ಕೃತಿ ಬಿಡುಗಡೆ | ಸನ್ಮಾನ | ಬಹುಮಾನ & ಟ್ಯಾಬ್ ವಿತರಣೆ

ಕಾರ್ಯಕ್ರಮದಲ್ಲಿ ಮಹಾವೀರ ಬೋರಣ್ಣವರ ರಚಿಸಿರುವ ‘ಕರುಳ ಬಳ್ಳಿಯ ಕಂಬನಿಯ ಕಥೆಗಳು’ ಪುಸ್ತಕವನ್ನು ಡಾ. ಸರಸ್ವತಿ ಚಿಮ್ಮಲಗಿ ಬಿಡುಗಡೆಗೊಳಿಸಿದರು. ೨೦೨೬ನೇ ಸಾಲಿನಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೌರಕಾರ್ಮಿಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ವಿವಿಧ ಕ್ರೀಡಾಕೂಟಗಳಲ್ಲಿ ವಿಜೇತರಾದ ಪೌರಕಾರ್ಮಿಕರಿಗೆ ಬಹುಮಾನ ಹಾಗೂ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ ಮಾಡಲಾಯಿತು.

“ಪೌರಕಾರ್ಮಿಕರು ನಗರದ ಸ್ವಚ್ಛತೆಯ ಪ್ರಮುಖ ಆಧಾರಸ್ತಂಭಗಳಾಗಿದ್ದು, ಅವರ ನಿರಂತರ ಸೇವೆಯಿಂದ ನಗರದ ಸ್ವಚ್ಛತೆಯನ್ನು ಉತ್ತಮ ಮಟ್ಟದಲ್ಲಿ ಕಾಪಾಡಲು ಸಾಧ್ಯವಾಗಿದೆ. ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಪಾಲಿಕೆಯ ವತಿಯಿಂದ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ೧೧೬ ಪೌರಕಾರ್ಮಿಕರಿಗೆ ಹಕ್ಕುಪತ್ರ ನೀಡಿ ವಾಸಕ್ಕೆ ಅನುಕೂಲ ಕಲ್ಪಿಸಲಾಗಿದೆ.”

– ವಿಜಯ ಮೆಕ್ಕಳಕಿ
ಮಹಾನಗರ ಪಾಲಿಕೆ ಆಯುಕ್ತರು

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ

ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ

ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ

ಸೆ.೨೪ರಂದು ೧೫ ಗ್ರಾಮಗಳಲ್ಲಿ ಪಿಂಚಣಿ ಅದಾಲತ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ
    In (ರಾಜ್ಯ ) ಜಿಲ್ಲೆ
  • ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೨೪ರಂದು ೧೫ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಮೈಸೂರು ದಸರಾ: ಕನ್ನಡ ಪುಸ್ತಕಗಳ ಮಾರಾಟ ಮೇಳಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಆರೋಗ್ಯ-ಮಕ್ಕಳ ಶಿಕ್ಷಣಕ್ಕೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ಹೊಸನಗರ ಹಳ್ಳದ ಸೇತುವೆ ಮೇಲೆ ಸಂಚಾರಕ್ಕೆ ಸಂಚಕಾರ
    In (ರಾಜ್ಯ ) ಜಿಲ್ಲೆ
  • ಬೇನಾಳ ಗ್ರಾಮಕ್ಕೆ ನುಗ್ಗಿದ ಮೊಸಳೆ ಮರಿ :ಆತಂಕದಲ್ಲಿ ಗ್ರಾಮಸ್ಥರು
    In (ರಾಜ್ಯ ) ಜಿಲ್ಲೆ
  • ಶಿವಾನಂದ ತಗಡೂರ ಗೆ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ಅದ್ದೂರಿಯಾಗಿ ಗಣೇಶ ವಿಸರ್ಜನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.