ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಶ್ವಪ್ರಸಿದ್ಧ ಮೈಸೂರು ದಸರಾ ಉತ್ಸವ-೨೦೨೬ರ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿಯ ಸಹಯೋಗದಲ್ಲಿ ಅ.೧೧ ರಿಂದ ೨೦ರವರೆಗೆ ಮೈಸೂರು ದಸರಾ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳದಲ್ಲಿ ಭಾಗವಹಿಸಲು ಆಸಕ್ತ ಕನ್ನಡ ಪ್ರಕಾಶಕರು ಹಾಗೂ ಪುಸ್ತಕ ಮಾರಾಟಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಮೈಸೂರಿನ ಹಳೆಯ ಜಿಲ್ಲಾಧಿಕಾರಿ ಕಚೇರಿ ಎದುರಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ನಡೆಯಲಿದೆ. ಪುಸ್ತಕ ಮಳಿಗೆಗಳನ್ನು ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುತ್ತಿದ್ದು, ಪ್ರತಿ ಮಳಿಗೆಗೆ ರೂ.೧,೦೦೦ ಭದ್ರತಾ ಠೇವಣಿಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಇವರ ಹೆಸರಿನಲ್ಲಿ ಡಿ.ಡಿ. ಮೂಲಕ ಸಲ್ಲಿಸಬೇಕು. ನಿಗದಿತ ಅರ್ಜಿ ನಮೂನೆಯನ್ನು ಬೆಂಗಳೂರಿನ ಜೆ.ಸಿ.ರಸ್ತೆಯ ಕನ್ನಡ ಭವನದಲ್ಲಿರುವ ಕನ್ನಡ ಪುಸ್ತಕ ಪ್ರಾಧಿಕಾರದ ಕಚೇರಿ, ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ ಞಠಿಠಿ.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಉಚಿತವಾಗಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳು ಹಾಗೂ ಡಿ.ಡಿ.ಯೊಂದಿಗೆ ಅ.೫ರ ಸಂಜೆ ೫ ಗಂಟೆಯೊಳಗೆ ನೋಂದಾಯಿತ ಅಂಚೆ ಅಥವಾ ಕೋರಿಯರ್ ಮೂಲಕ ಕನ್ನಡ ಪುಸ್ತಕ ಪ್ರಾಧಿಕಾರದ ಬೆಂಗಳೂರು ಕಚೇರಿಗೆ ತಲುಪಿಸಸುವಂತೆಯೂ, ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ,ಜೆ.ಸಿ.ರಸ್ತೆ, ಬೆಂಗಳೂರು-೫೬೦೦೦೨ ಅಥವಾ ದೂರವಾಣಿ ಸಂಖ್ಯೆ ೦೮೦-೨೨೪೮೪೫೧೬ ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
