ಬಸವನಬಾಗೇವಾಡಿ: ಪಟ್ಟಣದ ನ್ಯಾಯಾಲಯದ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ, ಹಿರಿಯ ಸಿವ್ಹಿಲ್ ನ್ಯಾಯಾಧೀಶ ಪ್ರಕಾಶ ಅರ್ಜುನ ಬನಸೋಡೆ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಸಂಜೆ ತಾಲೂಕು ಕಾನೂನು ಸೇವೆಗಳ ಸಮಿತಿಯ ದ್ವೈಮಾಸಿಕ ಸಭೆ, ಎಂಎಂಸಿ ಸಮಿತಿ ಸದಸ್ಯರ ಸಭೆ ಹಾಗೂ ಲೋಕ ಅದಾಲತ್ ಕುರಿತು ಪೂರ್ವಭಾವಿ ಸಭೆ ಜರುಗಿತು.
ಹಿರಿಯ ಸಿವ್ಹಿಲ್ ನ್ಯಾಯಾಧೀಶ ಪ್ರಕಾಶ ಅರ್ಜುನ ಬನಸೋಡೆ ಅವರು ನವೆಂಬರ್, ಡಿಸೆಂಬರ್ ತಿಂಗಳಲ್ಲಿ ಹಮ್ಮಿಕೊಳ್ಳುವ ಕಾನೂನು ಅರಿವು-ನೆರವು ಕಾರ್ಯಕ್ರಮಗಳಿಗೆ ಆಯಾ ಇಲಾಖೆಯ ಅಧಿಕಾರಿಗಳು ಕಾನೂನು ಸೇವೆಗಳ ಸಮಿತಿಯೊಂದಿಗೆ ಕೈಜೋಡಿಸಬೇಕು. ಪಟ್ಟಣ ಸೇರಿದಂತೆ ತಾಲೂಕಿನ ಗ್ರಾಮಗಳಲ್ಲಿ ಕಾನೂನಿನ ಬಗ್ಗೆ ಅರಿವು ಮೂಡಿಸುವಲ್ಲಿ ಕಾನೂನು ಅರಿವು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ.
ಡಿ.೯ ರಂದು ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ. ಈ ಅದಾಲತ್‌ದಲ್ಲಿ ಯಾವುದೇ ಒಂದು ಪ್ರಕರಣದ ಉಭಯ ಪಕ್ಷಗಾರರಲ್ಲಿ ರಾಜಿ ಸಂಧಾನ ಏರ್ಪಡಿಸುವ ಮೂಲಕ ಪ್ರಕರಣಗಳನ್ನು ಇತ್ಯರ್ಥಗೊಳಿಸಬಹುದು. ವ್ಯಾಜ್ಯವನ್ನು ಅತ್ಯಂತ ಕಡಿಮೆ ಖರ್ಚಿನಲ್ಲಿ ಶೀಘ್ರವಾಗಿ ಇತ್ಯರ್ಥಪಡಿಸಿಕೊಳ್ಳಬಹುದು.ಯಾವುದೇ ರೀತಿ ನ್ಯಾಯಾಲಯ ಶುಲ್ಕ ಕೊಡಬೇಕಾಗಿಲ್ಲ. ಪಕ್ಷಗಾರರು ನೇರವಾಗಿ ಭಾಗವಹಿಸಬಹುದು. ಸಂಧಾನಕಾರರು ನೇರವಾಗಿ ಭಾಗವಹಿಸಬಹುದು. ವ್ಯಾಜ್ಯ ಪೂರ್ವ ಪ್ರಕರಣಗಳಾದ ಚೆಕ್ ಬೌನ್ಸ್ ಪ್ರಕರಣಗಳು, ಬ್ಯಾಂಕ ಸಾಲ ವಸೂಲಾತಿ ಪ್ರಕರಣಗಳ, ಕಾರ್ಮಿಕ ವಿವಾದಗಳು,ಸಿವ್ಹಿಲ್ ವ್ಯಾಜ್ಯಗಳು, ಈಗಾಗಲೇ ನ್ಯಾಯಾಲಯಗಳಲ್ಲಿ ವಿಚಾರಣೆಗಾಗಿ ಬಾಕಿ ಇರುವ ಪ್ರಕರಣಗಳಾದ ಕ್ರಿಮಿನಲ್ ರಾಜಿಯಾಗಬಹುದಾದ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಬ್ಯಾಂಕ ಸಾಲ ವಸೂಲಾತಿ ಪ್ರಕರಣಗಳು, ಕಾರ್ಮಿಕ ವಿವಾದ ಪ್ರಕರಣಗಳು ಸೇರಿದಂತೆ ವಿವಿಧ ಸಿವ್ಹಿಲ್ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ಅವಕಾಶವಿದೆ. ಈ ನಿಟ್ಟಿನಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ತಮಗೆ ಸಂಬಂಧಿಸಿದ ಪ್ರಕರಣಗಳನ್ನು ರಾಜಿ ಸಂಧಾನ ಮೂಲಕ ಬಗೆಹರಿಸಿಕೊಂಡು ರಾಷ್ಟ್ರೀಯ ಲೋಕ ಅದಾಲತ್‌ದ ಲಾಭ ಪಡೆದುಕೊಳ್ಳಬೇಕೆಂದರು.
ಕಾನೂನು ಸೇವೆಗಳ ಸಮಿತಿ ಕಾರ್ಯದರ್ಶಿ, ಸಿವ್ಹಿಲ್ ನ್ಯಾಯಾಧೀಶೆ ತೇಜಶ್ವಿನಿ ಸೊಗಲದ ಮಾತನಾಡಿದರು.
ಸಭೆಯಲ್ಲಿ ಹೆಚ್ಚುವರಿ ಸಿವ್ಹಿಲ್ ನ್ಯಾಯಾಧೀಶೆ ತಯ್ಯಾಬ ಸುಲ್ತಾನ, ಸರ್ಕಾರಿ ಅಭಿಯೋಜಕರಾದ ಆರ್.ಜೆ.ಶಹಾ, ಆರ್.ಎ.ಸುತಾರ, ಲೋಕೋಪಯೋಗಿ ಇಲಾಖೆಯ ಎಇಇ ಜಿ.ವ್ಹಿ.ಕಿರಸೂರ, ಬಿಇಓ ವಸಂತ ರಾಠೋಡ, ತಾಪಂ ಇಓ ಡಾ.ಯುವರಾಜ ಹನಗಂಡಿ, ಆರೋಗ್ಯ ಇಲಾಖೆಯ ಎಸ್.ಎಸ್.ಮೇಟಿ, ಸಮಾಜ ಕಲ್ಯಾಣ ಇಲಾಖೆಯ ವಿರೇಶ ಗೂಡಲಮನಿ, ಎಸಿಡಿಪಿಓ ಬಸವರಾಜ ನಿಲುಗಲ್, ಎಂಎಂಸಿ ಸಮಿತಿ ಸದಸ್ಯ ವ್ಹಿ.ಬಿ.ಮರ್ತುರ, ವಕೀಲರಾದ ಸದಾನಂದ ಬಶೆಟ್ಟಿ, ಜಿ.ಜಿ.ಬಿಸನಾಳ, ಎಸ್.ಐ.ವಂದಾಲಮಠ, ರಾಜು ಪವಾರ, ವೈ.ಎನ್.ಲೆಂಕನ್ನವರ, ಆರ್.ಎಸ್.ನಂದಿ, ಆರ್.ಎ.ಪರಮಗೊಂಡ, ಬಸವನಬಾಗೇವಾಡಿ, ಕೊಲ್ಹಾರ, ನಿಡಗುಂದಿ, ಮನಗೂಳಿ, ಆಲಮಟ್ಟಿ, ಕೂಡಗಿ ಪೊಲೀಸ್ ಠಾಣೆಯ ಪಿಎಸ್‌ಐಗಳು, ಭೂಸ್ವಾಧೀನ ಇಲಾಖೆಯ ಸಿಬ್ಬಂದಿ, ವಿವಿಧ ಬ್ಯಾಂಕಿನ ಸಿಬ್ಬಂದಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
Related Posts
Add A Comment