ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ತಾಲೂಕಿನ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಯಾವುದೇ ರೀತಿಯ ಚಟುವಟಿಕೆಗಳನ್ನು ನಡೆಸದೆ ಸ್ಥಗಿತಗೊಂಡಿರುವ ಮೂರು ಸಹಕಾರ ಸಂಘಗಳನ್ನು ಸಮಾಪನೆಗೊಳಿಸಿ ಅವುಗಳ ನೋಂದಣಿಯನ್ನು ರದ್ದುಪಡಿಸಲು ಸಹಕಾರ ಇಲಾಖೆ ತೀರ್ಮಾನಿಸಿದ್ದು, ಆಕ್ಷೇಪಣೆಗಳಿದ್ದಲ್ಲಿ ೭ ದಿನಗಳೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಸಹಕಾರ ಸಂಘಗಳ ಸಹಾಯಕ ನಿಬಂಧಕರು ತಿಳಿಸಿದ್ದಾರೆ.
ಈ ಸಂಘಗಳು ತಮ್ಮ ನೋಂದಾಯಿತ ಸ್ಥಳಗಳಲ್ಲಿ ಕಾರ್ಯಾಚರಿಸುತ್ತಿಲ್ಲ. ಅಲ್ಲದೆ, ಹಲವು ವರ್ಷಗಳಿಂದ ಲೆಕ್ಕ ಪರಿಶೋಧನೆಯೂ ನಡೆದಿರುವುದಿಲ್ಲ ಎಂದವರು ತಿಳಿಸಿದ್ದಾರೆ.
ನೋಂದಣಿ ರದ್ದತಿಯಾಗಲಿರುವ ಸಂಘಗಳು: ಕುರಿ ಸಾಕಾಣಿಕೆ ಹಾಗೂ ಉಣ್ಣೆ ಉತ್ಪಾದಕರ ಸಹಕಾರ ಸಂಘ ನಿಯಮಿತ, ಬರಟಗಿ, ವಿಜಯಪುರ ನಗರ ಖಾದಿ ಮತ್ತು ಗ್ರಾಮೀಣೋದ್ಯೋಗ ಸಹಕಾರ ಸಂಘ ನಿಯಮಿತ, ಜೋರಾಪುರ ಪೇಠ ನೇಕಾರ ಸಹಕಾರ ಸಂಘ ನಿಯಮಿತ, ವಿಜಯಪುರ. ಆಕ್ಷೇಪಣೆಗೆ ೭ ದಿನಗಳ ಗಡುವು: ಈ ಮೇಲ್ಕಂಡ ಸಹಕಾರ ಸಂಘಗಳಿಗೆ ಸಂಬಂಧಿಸಿದವರಿಂದ ನಿಗದಿತ ಅವಧಿಯಲ್ಲಿ ಯಾವುದೇ ಆಕ್ಷೇಪಣೆಗಳು ಬಾರದಿದ್ದಲ್ಲಿ, ಸಾರ್ವಜನಿಕರಿಂದ ಯಾವುದೇ ಆಕ್ಷೇಪಣೆ ಇಲ್ಲವೆಂದು ಪರಿಗಣಿಸಿ ಈ ಮೂರೂ ಸಂಘಗಳ ನೋಂದಣಿಯನ್ನು ರದ್ದುಗೊಳಿಸಲು ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು. ತದನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಸಮಾಪನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
