Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮನೆಗೊಂದು ಗ್ರಂಥಾಲಯ ಅನುಷ್ಠಾನ ಸಮಾರಂಭ

ಅ.೨೭ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ

ತಾಲೂಕಾಧ್ಯಕ್ಷರಾಗಿ ಸುಂಗಠಾಣ ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯಾರ್ಥಿನಿಯರು ಸ್ವಾವಲಂಬಿಗಳಾಗಿ ಉತ್ತಮ ಬದುಕು ಕಟ್ಟಿಕೊಳ್ಳಲಿ
(ರಾಜ್ಯ ) ಜಿಲ್ಲೆ

ವಿದ್ಯಾರ್ಥಿನಿಯರು ಸ್ವಾವಲಂಬಿಗಳಾಗಿ ಉತ್ತಮ ಬದುಕು ಕಟ್ಟಿಕೊಳ್ಳಲಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದಾವಣಗೆರೆ ವಿವಿ ವಿಶ್ರಾಂತ ಕುಲಪತಿ ಪ್ರೊ. ಎಸ್. ಇಂದುಮತಿ ಕರೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಹೆಣ್ಣುಮಕ್ಕಳು ತಮ್ಮ ಭದ್ರತೆಯ ಕುರಿತು ಯಾವುದೇ ಆತಂಕಕ್ಕೆ ಒಳಗಾಗದೆ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಶಿಕ್ಷಣದ ಜತೆಗೆ ವಿವಿಧ ಕೌಶಲ್ಯಗಳನ್ನು ರೂಢಿಸಿಕೊಂಡು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಬೇಕು ಎಂದು ದಾವಣಗೆರೆ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಎಸ್. ಇಂದುಮತಿ ಹೇಳಿದರು.
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಹಾಗೂ ವಿದ್ಯಾರ್ಥಿನಿ ಕ್ಷೇಮಪಾಲನಾ ನಿರ್ದೇಶನಾಲಯದ ಸಹಯೋಗದಲ್ಲಿ ಪ್ರಥಮ ವರ್ಷದ ಯುಜಿ ಹಾಗೂ ಪಿಜಿ ವಿದ್ಯಾರ್ಥಿನಿಯರಿಗಾಗಿ ಸೆ, ೨೩ರಂದು ಹಮ್ಮಿಕೊಂಡಿದ್ದ ‘ಪುತ್ರಿಯರ ದಿನ–ಸ್ಪಂದನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರು ಸಮಾನತೆ ಸಾಧಿಸಲು ಶಿಕ್ಷಣದ ಜತೆಗೆ ವಿವಿಧ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಆರ್ಥಿಕವಾಗಿ ಸಬಲರಾಗುವ ಮೂಲಕ ಸ್ವಾವಲಂಬಿ ಬದುಕು ರೂಪಿಸಿಕೊಳ್ಳಬೇಕು. ಪ್ರತಿಯೊಬ್ಬರಲ್ಲಿರುವ ಪ್ರತಿಭೆಯೇ ಅವರನ್ನು ಮುನ್ನಡೆಸುವ ಪ್ರಮುಖ ಶಕ್ತಿಯಾಗಿದೆ. ತಮ್ಮತನವನ್ನು ಉಳಿಸಿಕೊಂಡು ದೇಶದ ಬಗ್ಗೆ ಪ್ರೀತಿ ಬೆಳೆಸಿಕೊಳ್ಳಬೇಕು ಎಂದರು.
ಪರಿಸರ ಹಾಗೂ ಪ್ರಕೃತಿಯ ಸಂರಕ್ಷಣೆಯ ಜವಾಬ್ದಾರಿಯನ್ನೂ ಅರಿತುಕೊಂಡು ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ಮಾತನಾಡಿ, ಇಂದು ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿಯೂ ತಮ್ಮದೇ ಆದ ಸ್ಥಾನಮಾನವನ್ನು ಗಳಿಸಿಕೊಂಡಿದ್ದಾರೆ. ಕುಟುಂಬದ ಪ್ರೋತ್ಸಾಹ ಹಾಗೂ ಶಿಕ್ಷಕರ ಆಶೀರ್ವಾದದಿಂದ ವಿಶ್ವವಿದ್ಯಾಲಯದ ಹೆಬ್ಬಾಗಿಲಿಗೆ ತಲುಪಿರುವ ವಿದ್ಯಾರ್ಥಿನಿಯರಿಗೆ ತಮ್ಮ ಪ್ರತಿಭೆಯನ್ನು ಅರಳಿಸಿಕೊಳ್ಳಲು ವಿಶ್ವವಿದ್ಯಾಲಯವು ಹಲವು ಅವಕಾಶಗಳನ್ನು ಒದಗಿಸುತ್ತಿದೆ. ವಿದ್ಯಾರ್ಥಿನಿಯರು ಉತ್ತಮ ಶಿಕ್ಷಣ ಪಡೆದು ತಮ್ಮದೇ ಆದ ಉದ್ಯಮಶೀಲತೆಯನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ವಿಶ್ವವಿದ್ಯಾನಿಲಯದ ಕುಲಸಚಿವ ಡಾ. ವಿಜಯಕುಮಾರ ಅಜೂರ್ ಮಾತನಾಡಿ, ಜೀವನದ ಪ್ರತಿಯೊಂದು ಹೆಜ್ಜೆಯಲ್ಲೂ ಉತ್ತಮ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ವಿಶ್ವವಿದ್ಯಾಲಯದಲ್ಲಿ ಲಭ್ಯವಿರುವ ಶೈಕ್ಷಣಿಕ ಹಾಗೂ ಇತರ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಹಿಳಾ ವಿಶ್ವವಿದ್ಯಾನಿಲಯದ ಮೌಲ್ಯಮಾಪನ ಕುಲಸಚಿವ ಪ್ರೊ. ಬಿ. ಎಲ್ ಲಕ್ಕಣ್ಣವರ, ವಿವಿಧ ವಿಭಾಗಗಳ ಪ್ರಾಧ್ಯಾಪಕರು, ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ಪ್ರಥಮ ವರ್ಷದ ಯುಜಿ ಹಾಗೂ ಪಿಜಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕಿ ಪ್ರೊ. ಜ್ಯೋತಿ ಉಪಾಧ್ಯೆ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ವಿಶ್ವವಿದ್ಯಾನಿಲಯದ ಸಂಗೀತ ವಿಭಾಗದ ವಿದ್ಯಾರ್ಥಿನಿಯರು ಮಹಿಳಾ ಗೀತೆ ಹಾಡಿದರು. ಸ್ನಾತಕ ಕೋರ್ಸುಗಳ ವಿಶೇಷ ಅಧಿಕಾರಿ ಪ್ರೊ. ಡಿ. ಎಂ. ಮದರಿ ವಂದಿಸಿದರು. ದಾನೇಶ್ವರಿ ನಿರೂಪಿಸಿದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮನೆಗೊಂದು ಗ್ರಂಥಾಲಯ ಅನುಷ್ಠಾನ ಸಮಾರಂಭ

ಅ.೨೭ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ

ತಾಲೂಕಾಧ್ಯಕ್ಷರಾಗಿ ಸುಂಗಠಾಣ ಆಯ್ಕೆ

ಗುಬ್ಬೇವಾಡದ ಬಾಲಕ ಕಾಣೆ: ಪ್ರಕರಣ ದಾಖಲು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮನೆಗೊಂದು ಗ್ರಂಥಾಲಯ ಅನುಷ್ಠಾನ ಸಮಾರಂಭ
    In (ರಾಜ್ಯ ) ಜಿಲ್ಲೆ
  • ಅ.೨೭ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ತಾಲೂಕಾಧ್ಯಕ್ಷರಾಗಿ ಸುಂಗಠಾಣ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಗುಬ್ಬೇವಾಡದ ಬಾಲಕ ಕಾಣೆ: ಪ್ರಕರಣ ದಾಖಲು
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿನಿಯರು ಸ್ವಾವಲಂಬಿಗಳಾಗಿ ಉತ್ತಮ ಬದುಕು ಕಟ್ಟಿಕೊಳ್ಳಲಿ
    In (ರಾಜ್ಯ ) ಜಿಲ್ಲೆ
  • ಸೆ.೨೫ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಯುರ್ವೇದವು ಗ್ರಾಮಗಳಿಗೂ ತಲುಪಲಿ :ಡಾ.ಸಂಬಣ್ಣಿ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ೨೧ ದಿನಗಳ ರೈತರ ಧರಣಿ ಹಿಂಪಡೆತ
    In (ರಾಜ್ಯ ) ಜಿಲ್ಲೆ
  • ಸೆ.೨೮ ರಂದು ರಾಠೋಡ ಜಾತ್ರಾಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಪಾತ್ರ ಮಹತ್ವದ್ದು :ಕೋಳಶೆಟ್ಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.