ವಿಜಯಪುರ: ಜಿಲ್ಲೆಯ ಚಡಚಣ ಪಟ್ಟಣ ಪಂಚಾಯತಿಯ ೧೬ ವಾರ್ಡಗಳಿಗೆ ಸಂಬಂಧಿಸಿದ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.
ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯ ಅವಧಿ ಮುಕ್ತಾಯವಾಗಿರುವ ನಗರ ಸ್ಥಳೀಯ ಸಂಸ್ಥೆಯಾದ ಚಡಚಣ ಪಟ್ಟಣ ಪಂಚಾಯತಿಯ ಸಾರ್ವತ್ರಿಕ ಚುನಾವಣೆ ನಡೆಸುವ ಸಂಬಂಧ ೧೬ ವಾರ್ಡುಗಳಿಗೆ ಅಂತಿಮ ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಛೇರಿ ವಿಜಯಪುರ, ಚಡಚಣ ತಹಶೀಲದಾರ ಕಛೇರಿ, ಚಡಚಣ ಪಟ್ಟಣ ಪಂಚಾಯತಿ ಕಛೇರಿ ಹಾಗೂ ಸಂಬಧಪಟ್ಟ ಮತಗಟ್ಟೆಗಳಲ್ಲಿ ಸಾರ್ವಜನಿಕರ ಹಾಗೂ ಮತದಾರರ ವೀಕ್ಷಣೆಗೆ ಅಂತಿಮ ಪ್ರತಿಯನ್ನು ಇರಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Related Posts
Add A Comment