ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ೧೪ ಫಲಾನುಭವಿ ಆಧಾರಿತ ಯೋಜನೆಗಳನ್ನು ೨೦೨೬-೨೭ನೇ ಸಾಲಿನಲ್ಲಿ ಸೇವಾಸಿಂಧು, ಗ್ರಾಮಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಸಿಟಿಜೆನ್ಸ್ ಫೋರ್ಟಲ್ ಆನ್‌ಲೈನ್ ತಂತ್ರಾಮಶದಡಿ ಅಳವಡಿಸಲಾಗಿದ್ದು, ಈ ಯೋಜನೆಯಡಿ ಸೌಲಭ್ಯ ಪಡೆಯಲು hಣಣಠಿs://sevಚಿoಟಿe.ಞಚಿಡಿಟಿಚಿಣಚಿಞಚಿ.gov.iಟಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯ ೧೪ ಫಲಾನುಭವಿ ಆಧಾರಿತ ಆನ್‌ಲೈನ್ ವೇದಿಕೆಯಲ್ಲಿ ಅಳವಡಿಸಲಾಗಿರುವ ಪ್ರೊತ್ಸಾಹಧನ ಯೋಜನೆ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ,ಆಧಾರ ಯೋಜನೆ, ಮರಣ ಪರಿಹಾರ ನಿಧಿ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನ ಸಲಕರಣೆಗಳ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ಪ್ರತಿಭೆ ಯೋಜನೆ, ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್ ಕಿಟ್ ಯೋಜನೆ,ಟಾಕಿಂಗ್ ಲ್ಯಾಪ್ಟಾಪ್ ಯೋಜನೆ, ಸೇರಿದಂತೆ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ: ೩೧-೧೦-೨೦೨೬ ಕೊನೆಯ ದಿನಾಂಕವಾಗಿದೆ.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ವಿವಿದ್ದೊದ್ದೇಶ ಪುನರ್ವಸತಿ ಕಾರ್ಯಕರ್ತರುಗಳಾದ ವಿಜಯಪುರ ಜಿಲ್ಲಾ ಸಂಯೋಜಕರಾದ ಪ್ರತಿಭಾ ಮೊ:೯೬೦೬೧೫೧೧೪೯, ವಿಜಯಪುರ ತಾಲೂಕಿನ ರವಿ ರಾಠೋಡ ಮೊ: ೯೦೩೫೫೫೩೩೩೭, ಸಿಂದಗಿ ತಾಲೂಕಿನ ಮುತ್ತುರಾಜ ಸಾತಿಹಾಳ ಮೊ: ೯೯೮೦೦೧೯೬೩೫, ಬಸವನಬಾಗೇವಾಡಿ ತಾಲೂಕಿನ ಶಿವಲೀಲಾ ಬಿರಾದಾರ ಮೊ: ೮೭೨೨೧೩೫೬೬೦, ಇಂಡಿ ತಾಲೂಕಿನ ಪರಶುರಾಮ ಬೋಸಲೆ ಮೊ: ೯೯೭೨೪೪೧೪೬೪ ಹಾಗೂ ಮುದ್ದೇಬಿಹಾಳ ತಾಲೂಕಿನ ಎಸ್.ಕೆ.ಘಾಟಿ ಮೊ: ೯೭೪೦೬೮೨೯೭೯ ಸಂಖ್ಯೆಗೆ ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
