ಉದಯರಶ್ಮಿ ದಿನಪತ್ರಿಕೆ
ಇಂಡಿ: ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವಿಜಯಪುರ ಜಿಲ್ಲಾ ಘಟಕದ ವತಿಯಿಂದ ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಇಂಡಿ ತಾಲೂಕಿನ ಅಂಜುಟಗಿ ಗ್ರಾಮದ ಶ್ರೀ ಮುದ್ದೇಶ ಪ್ರಭು ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ಶಿಕ್ಷಕ ಶ್ರೀಮಂತ ಗಂಗಪ್ಪ ಹಡಪದ ಅವರಿಗೆ “ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ”ಗೆ ಆಯ್ಕೆ ಮಾಡಲಾಗಿದೆ.
ಸೆ. ೨೭ರಂದು ವಿಜಯಪುರ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.

