ವಿಜಯಪುರ: ಎಸ್‌ಸಿಪಿ ಟಿಎಸ್‌ಪಿ ಅನುದಾನ ಲ್ಯಾಪ್ಸವಾಗದಂತೆ ನೋಡಿಕೊಂಡು ಸಮರ್ಪಕವಾಗಿ ಬಳಕೆ ಮಾಡುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ೨೦೨೩-೨೪ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯ ಯೋಜನೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಎಸ್‌ಸಿಪಿ ಟಿಎಸ್‌ಪಿ ಅನುದಾನವನ್ನು ಕಾಲಮಿತಿಯೊಳಗೆ ವೆಚ್ಚ ಮಾಡಬೇಕು. ಕೆಬಿಜೆಎನ್‌ಎಲ್ ಇಲಾಖೆಯಿಂದ ೨೦೨೨-೨೩ನೇ ಸಾಲಿನ ಬೊರವೆಲ್ ಫಲಾನುಭವಿಗಳನ್ನು ಆಯ್ಕೆ ಮಾಡಿ ಕೊಳವೆ ಬಾವಿ ಕೊರೆಯಿಸಿ ವಿದ್ಯುತ್ ಸಂಪರ್ಕ ಒದಗಿಸಲು ಕ್ರಮ ವಹಿಸಬೇಕು. ಎಲ್ಲಾ ಇಲಾಖೆಗಳು ಎಸ್‌ಸಿಟಿ ಟಿಎಸ್‌ಪಿ ಯೋಜನೆಯಡಿಯ ನಿಗದಿತ ಗುರಿಯನ್ನು ಕಾಲಮಿತಿಯೊಳಗೆ ಸಾಧಿಸುವಂತೆ ಸೂಚಿಸಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕಾಲೋನಿಗಳಲ್ಲಿ ಕಾರ್ಮಿಕ ಇಲಾಖೆಯಿಂದ ಬಾಲಕಾರ್ಮಿಕ ನಿರ್ಮೂಲನೆಗೆ ಬಾಲಕಾರ್ಮಿಕ ನಿಷೇಧ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ತಿಳುವಳಿಕೆ ಮೂಡಿಸಬೇಕು, ಆಯುಷ್ ಇಲಾಖೆಯಿಂದ ೧೫ ದಿನಗಳಿಗೊಮ್ಮೆ ಆರೋಗ್ಯ ಶಿಬಿರಗಳನ್ನು ಏರ್ಪಡಿಸಿ ಗುರುತಿಸಲ್ಪಟ್ಟ ರೋಗಿಗಳಿಗೆ ಸೂಕ್ತ ಔಷಧೋಪಚಾರ ಒದಗಿಸಬೇಕು. ಗುರುತಿಸಿದ ರೋಗಿಗಳ ಮನೆಗೆ ತೆರಳಿ ಔಷಧಿಗಳನ್ನು ಒದಗಿಸಿ, ರೋಗಾನುಸಾರ ಸೂಕ್ತ ಚಿಕಿತ್ಸೆ ಒದಗಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಬದ್ರೂದ್ದಿನ್ ಸೌದಾಗರ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ವಿಜಯಕುಮಾರ ಮೆಕ್ಕಳಕಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲಿಕ ಮಾನವರ, ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕ ಅಶೋಕ ಘೋಣಸಗಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ರಾಜಶೇಖರ ಧೈವಾಡಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
Related Posts
Add A Comment