ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ವಿದ್ಯಾರ್ಥಿಗಳಲ್ಲಿ ಶಿಸ್ತು, ನಾಯಕತ್ವ ಗುಣ, ರಾಷ್ಟ್ರೀಯ ಮನೋಭಾವ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶದಿಂದ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಪ್ರಾರಂಭಿಸಲಾಗಿದೆ. ವಿದ್ಯಾರ್ಥಿಗಳು ಎನ್‌ಎಸ್‌ಎಸ್ ಘಟಕದ ಸ್ವಯಂಸೇವಕರಾಗಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಾಚಾರ್ಯ ಎರ್. ಹೆಗ್ಗನದೊಡ್ಡಿ ಹೇಳಿದರು.
ಸಿಂದಗಿ ಪಟ್ಟಣದ ಎಚ್.ಜಿ. ಪದವಿ ಪೂರ್ವ ಕಾಲೇಜಿನಲ್ಲಿ ಎನ್‌ಎಸ್‌ಎಸ್ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಉಪನ್ಯಾಸಕರಾದ ಎಸ್.ಎ.ಪಾಟೀಲ ಹಾಗೂ ಎಂ.ಎನ್.ಅಜ್ಜಪ್ಪ ರಾಷ್ಟ್ರೀಯ ಸೇವಾ ಯೋಜನೆಯ ಕುರಿತು ಮಾತನಾಡಿದರು. ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ.ಎಸ್.ಎಸ್. ಚವ್ಹಾಣ ಪ್ರತಿಜ್ಞಾವಿಧಿ ಬೋಧಿಸಿದರು. ಉಪನ್ಯಾಸಕರಾದ ಎಫ್.ಎ.ಹಾಲಪ್ಪನವರ, ಎ.ಆರ್. ಸಿಂದಗಿಕರ, ಸತೀಶ ಬಸರಕೋಡ, ಎ.ಬಿ.ಪಾಟೀಲ, ಮುಕ್ತಾಯಕ್ಕ ಕತ್ತಿ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

