ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ನಗರದ ಎಚ್.ಜಿ.ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿದ್ದು ತಳಗೆರೆ ಚೆಸ್ ವಿಭಾಗದಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿ ಈ ಸಾಧನೆಗೆ ಹಾಗೂ ಮಾರ್ಗದರ್ಶನ ಮಾಡಿ ತರಬೇತಿ ನೀಡಿದ ದೈಹಿಕ ಉಪನ್ಯಾಸಕ ಸತೀಶ ಬಸರಕೋಡ ಅವರಿಗೆ ಸಂಸ್ಥೆಯ ಅಧ್ಯಕ್ಷ ಹಾಗೂ ಶಾಸಕ ಅಶೋಕ ಮನಗೂಳಿ, ಆಡಳಿತ ಮಂಡಳಿ ಸದಸ್ಯರು, ಕಾಲೇಜಿನ ಪ್ರಾಚಾರ್ಯರು, ಉಪನ್ಯಾಸಕರು ಅಭಿನಂದನೆ ಸಲ್ಲಿಸಿದರು.
ಈ ವೇಳೆ ಉಪನ್ಯಾಸಕರಾದ ಎಸ್.ಎ.ಪಾಟೀಲ, ಎಂ.ಎನ್.ಅಜ್ಜಪ್ಪ, ಡಾ.ಎಸ್.ಎಸ್.ಚವ್ಹಾಣ, ಎಫ್.ಎ.ಹಾಲಪ್ಪನವರ, ಎ.ಆರ್.ಸಿಂದಗಿಕರ, ಸಿದ್ದಲಿಂಗ ಕಿಣಗಿ, ಸತೀಶ ಬಸರಕೋಡ, ಮುಕ್ತಾಯಕ್ಕ ಕತ್ತಿ ಸೇರಿದಂತೆ ಇತರರು ಇದ್ದರು.

