ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ವಿಭಾಗ ಹಾಗೂ ವಲಯ ಅರಣ್ಯಾಧಿಕಾರಿಗಳ ಕಚೇರಿ ಸಹಯೋಗದಲ್ಲಿ 2026–27ನೇ ಸಾಲಿನ ಎನ್‌ಎಸ್‌ಎಸ್ ದಿನಾಚರಣೆ ಹಾಗೂ ವನಮಹೋತ್ಸವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವಲಯ ಅರಣ್ಯಾಧಿಕಾರಿ ವಿರೇಶ ಅಂದೋಲಿ, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ವಿದ್ಯಾರ್ಥಿಗಳು ಪರಿಸರದ ಮಹತ್ವ ಅರಿತು ಗಿಡಗಳನ್ನು ನೆಟ್ಟು ಬೆಳೆಸುವ ಮೂಲಕ ಹಸಿರು ಪರಿಸರ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ. ಎಸ್.ಎಸ್. ಹಳೇಮನಿ, ಎನ್‌ಎಸ್‌ಎಸ್ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದರು.
ಐಕ್ಯೂಎಸಿ ಸಂಚಾಲಕ ಡಾ. ರಾಜಶೇಖರ ಬೆನಕನಹಳ್ಳಿ ಮಾತನಾಡಿದರು. ಎನ್ ಎಸ್‌ಎಸ್ ಸಂಯೋಜಕ ರಾಜೇಸಾಬ ವನಮಹೋತ್ಸವ ಕುರಿತು ಮಾತನಾಡಿದರು.
ಪ್ರಾಧ್ಯಾಪಕರಾದ ಕೃಷ್ಣಾರೆಡ್ಡಿ ಎಂ, ಸ್ವಾಗತ, ಡಾ. ಶರಣಪ್ಪ ತಳವಾರ ಹಾಗೂ ಡಾ. ಶಶಿಕಾಂತ ಹಾವಳಗಿ ಉಪಸ್ಥಿತರಿದ್ದರು.
ಡಾ. ರೇವಣಸಿದ್ದಪ್ಪ ಅಮ್ಮಣ್ಣಿ ಸ್ವಾಗತಿಸಿದರು. ಡಾ. ಸಿರಾಜ್ ಖಾದ್ರಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪ್ರೊ ಸ್ವಾಗತ ವಂದಿಸಿದರು.
ಕು. ಭಾಗ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.
ವನಮಹೋತ್ಸವದ ಅಂಗವಾಗಿ ಕಾಲೇಜು ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮವೂ ನಡೆಯಿತು.

