ಉದಯರಶ್ಮಿ ದಿನಪತ್ರಿಕೆ
ವಿಜಯಪುರ: 11ನೇ ರಾಷ್ಟ್ರೀಯ ಆಯುರ್ವೇದ ದಿನದ ಅಂಗವಾಗಿ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್. ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಶಾಲಾಕ್ಯ ತಂತ್ರ ವಿಭಾಗದ ವತಿಯಿಂದ ಬಿ.ಎಲ್.ಡಿ.ಇ- ರಘುಕುಲ ಸಮನ್ವಯ ಶಾಲೆಯಲ್ಲಿ ವಿಶೇಷಚೇತನ ಮಕ್ಕಳ ಉಚಿನ ನೇತ್ರ ತಪಾಸಣೆ ಶಿಬಿರ ಸೋಮವಾರ ನಡೆಯಿತು.
ಈ ಶಿಬಿರದಲ್ಲಿ ಶಾಲೆಯ ಸುಮಾರು 35 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕಣ್ಣು, ಕಿವಿ, ಮೂಗು ಹಾಗೂ ಗಂಟಲು ತಪಾಸಣೆ ನಡೆಸಲಾಯಿತು. ಮಕ್ಕಳ ಆರೋಗ್ಯಕ್ಕೆ ಸಂಬಂಧಿಸಿದಂತೆ ಅಗತ್ಯ ತಪಾಸಣೆ ನಡೆಸಿ, ಕಣ್ಣಿನ ಆರೈಕೆ, ಸ್ವಚ್ಛತೆ ಹಾಗೂ ಕಣ್ಣಿನ ಆರೋಗ್ಯದ ಕುರಿತು ಸೂಕ್ತ ಆರೋಗ್ಯ ಶಿಕ್ಷಣ ಮತ್ತು ಮಾರ್ಗದರ್ಶನ ನೀಡಲಾಯಿತು.
ವಿಶೇಷ ಅಗತ್ಯವುಳ್ಳ ಮಕ್ಕಳಲ್ಲಿ ಕಣ್ಣಿನ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಿ, ಅಗತ್ಯವಿದ್ದಲ್ಲಿ ಸೂಕ್ತ ವೈದ್ಯಕೀಯ ಸಲಹೆ ಮತ್ತು ಮುಂದಿನ ಚಿಕಿತ್ಸಾ ಕ್ರಮಗಳನ್ನು ಕೈಗೊಳ್ಳುವ ಉದ್ದೇಶದಿಂದ ಈ ಶಿಬಿರವನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಶಾಲಾಕ್ಯ ತಂತ್ರ ವಿಭಾಗದ ಡಾ. ಗಂಗಾಧರ ತಿಮ್ಮಾಪುರ, ಡಾ. ರಾಜೇಸಾಬ ಕಬಾಡೆ ಹಾಗೂ ಡಾ. ನಂದಿತಾ ಕುಲಕರ್ಣಿ ಅವರು ಭಾಗವಹಿಸಿ ವಿದ್ಯಾರ್ಥಿಗಳ ಕಣ್ಣಿನ ತಪಾಸಣೆ ನಡೆಸಿದರು.
ಈ ಸಂದರ್ಭದಲ್ಲಿ ಡಾ. ಅಮೃತಾ, ಡಾ. ಮಯೂರ ಹಾಗೂ ಡಾ. ವೈಷ್ಣವಿ ಕೂಡ ಉಪಸ್ಥಿತರಿದ್ದರು.

