ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ರಾಜ್ಯದ ರೈತರನ್ನು ಭಿಕ್ಷಕರಂತೆ ಪರಿಗಣಿಸಿ ಬರಗಾಲ ಪರಿಹಾರವಾಗಿ ಪ್ರತಿಯೊಬ್ಬ ರೈತನ ಒಂದು ಖಾತೆಗೆ 2500 ರೂಗಳಂತೆ ಪರಿಹಾರ ನೀಡಲು ಮುಂತಾದ ರಾಜ್ಯ ಸರ್ಕಾರದ ವಿರುದ್ಧ ಅಖಂಡ ಕರ್ನಾಟಕ ರೈತ ಸಂಘದ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.
ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಂತರ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಬರೆದ ಪತ್ರವನ್ನು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರ ಮುಖಾಂತರ
ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ, ಅರವಿಂದ ಕುಲಕರ್ಣಿ ಮಾತನಾಡಿ, ಭೀಕರ ಬರಗಾಲ ಆವರಿಸಿ ರೈತರನ್ನು ಕಿತ್ತಿ ತಿನ್ನುತ್ತಿದೆ ವಿವಿಧ ರೈತಪರ ಸಂಘಟನೆಗಳ ಹೋರಾಟದ ಪ್ರತಿಫಲವಾಗಿ ರಾಜ್ಯ ಸರ್ಕಾರ ಬರಗಾಲ ಘೋಷಣೆ ಮಾಡಿದೆ ಆದರೆ ಪರಿಹಾರ ನೀಡಬೇಕೆಂದರೆ ರೈತರನ್ನು ಭಿಕ್ಷುಕರಂತೆ ಪರಿಗಣಿಸಿದೆ. ಪ್ರತಿಯೊಬ್ಬ ರೈತನ ಖಾತೆಗೆ 2500 ರೂಗಳಂತೆ ಪರಿಹಾರ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಆರ್ಥಿಕವಾಗಿ ಸಂಪೂರ್ಣ ಸರಕಾರದ ಸ್ಥಿತಿ ಹದಗಿಟ್ಟಿದೆ ಎಂಬುದು ಸಾಬೀತಾಗಿದೆ. ಸರ್ಕಾರ ರೈತರಿಗೆ ಕನಿಷ್ಠ ಪ್ರತಿ ಎಕರೆಗೆ 25,000 ರೂ.ಗಳಂತೆ ಪರಿಹಾರ ನೀಡಬೇಕು. ಇಲ್ಲದಿದ್ದರೆ ಸರಕಾರದ ವಿರುದ್ಧ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಅರವಿಂದ ಕುಲಕರ್ಣಿ ಎಚ್ಚರಿಕೆ ನೀಡಿದ್ದಾರೆ.
ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾ ಸಂಚಾಲಕ ಪಾಂಡು ಹ್ಯಾಟಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗುರುರಾಜ ಪಡಶೆಟ್ಟಿ, ಗುರುಲಿಂಗಪ್ಪ ಪಡಸಲಗಿ, ಶ್ರೀಶೈಲ್ ಕುರಣದ, ಶಿವಪ್ಪ ಮಾಳಗೊಂಡ, ಅಶೋಕ್ ಉಪ್ಪಲದಿನ್ನಿ ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

