Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ

ಸೆ.೨೮ರಿಂದ ೩೦ವರೆಗೆ ಬ್ಯಾಂಕ್ ನೌಕರರ ಮುಷ್ಕರ

ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.೨೮ ರಿಂದ ದೈಹಿಕ ಪರೀಕ್ಷೆಗಳು ಆರಂಭ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಣಂತಿ ಸಾವಿಗೆ ತೀವ್ರ ಆಕ್ರೋಶ
(ರಾಜ್ಯ ) ಜಿಲ್ಲೆ

ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಣಂತಿ ಸಾವಿಗೆ ತೀವ್ರ ಆಕ್ರೋಶ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಜೆಕ್ಷನ್ ಬಳಿಕ ಮಹಿಳೆಗೆ ತೀವ್ರ ನೋವು | ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ನಿರ್ಲಕ್ಷ್ಯ ಎಂದು ಸಂಬಂಧಿಕರ ದೂರು

ಉದಯರಶ್ಮಿ ದಿನಪತ್ರಿಕೆ

ಇಂಡಿ: ತಾಳಿಕೋಟೆ ತಾಲೂಕಿನ ಸಾಸನೂರ ಗ್ರಾಮದ ಸಂಗಮ್ಮ ಶಿವಾನಂದ ವಡಗೇರಿ ಎಂಬ ಬಾಣಂತಿ ಮಹಿಳೆ ಚಿಕಿತ್ಸೆಗಾಗಿ ಇಂಡಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದು, ನಂತರ ವಿಜಯಪುರಕ್ಕೆ ಕರೆದೊಯ್ಯುವ ವೇಳೆ ಅಂಬುಲೆನ್ಸ್ನಲ್ಲೇ ಮೃತಪಟ್ಟಿರುವ ಘಟನೆ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಕುಟುಂಬದವರ ಆರೋಪದ ಪ್ರಕಾರ, ಹೆರಿಗೆ ಪ್ರಕ್ರಿಯೆ ನಡೆಸಲು ಆಸ್ಪತ್ರೆಯ ಸಿಬ್ಬಂದಿ ಇಂಜೆಕ್ಷನ್ ನೀಡಿದ ಬಳಿಕ ಮಹಿಳೆ ತೀವ್ರ ನೋವಿನಿಂದ ನರಳಾಡುತ್ತಿದ್ದಳು. ಸೂಕ್ತ ವೈದ್ಯಕೀಯ ಚಿಕಿತ್ಸೆ ಹಾಗೂ ತುರ್ತು ಆರೈಕೆ ಒದಗಿಸುವಲ್ಲಿ ಆಸ್ಪತ್ರೆಯ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ಸಂಬಂಧಿಕರು ದೂರಿದ್ದಾರೆ.
ಮಹಿಳೆಯ ಆರೋಗ್ಯ ಸ್ಥಿತಿ ಗಂಭೀರವಾಗುತ್ತಿದ್ದಂತೆ ವಿಜಯಪುರದ ಆಸ್ಪತ್ರೆಗೆ ರವಾನಿಸುವ ನಿರ್ಧಾರ ಕೈಗೊಳ್ಳಲಾಯಿತು. ಆದರೆ ವಿಜಯಪುರಕ್ಕೆ ಸಾಗಿಸುವ ಮಾರ್ಗ ಮಧ್ಯದಲ್ಲೇ ಅಂಬುಲೆನ್ಸ್ನಲ್ಲಿ ಮಹಿಳೆ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಮಗು ಕೂಡ ಬದುಕುಳಿಯದೆ ಸಾವನ್ನಪ್ಪಿರುವ ಕುರಿತು ಕುಟುಂಬಸ್ಥರು ಆರೋಪಿಸಿದ್ದಾರೆ.
ಈ ಘಟನೆ ತಿಳಿಯುತ್ತಿದ್ದಂತೆ ಮೃತೆಯ ಸಂಬಂಧಿಕರು ಹಾಗೂ ಗ್ರಾಮಸ್ಥರು ಆಸ್ಪತ್ರೆ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಸರ್ಕಾರಿ ಆಸ್ಪತ್ರೆಯಲ್ಲಿ ಸಮರ್ಪಕ ವೈದ್ಯರು, ಸಿಬ್ಬಂದಿ ಹಾಗೂ ತುರ್ತು ಚಿಕಿತ್ಸಾ ವ್ಯವಸ್ಥೆ ಇದ್ದಿದ್ದರೆ ಅಮೂಲ್ಯ ಜೀವ ಉಳಿಯಬಹುದಾಗಿತ್ತು ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಆಸ್ಪತ್ರೆಯಲ್ಲಿ ನಡೆದ ಚಿಕಿತ್ಸೆ, ಹೆರಿಗೆ ಸಂದರ್ಭದ ವೈದ್ಯಕೀಯ ಕ್ರಮಗಳು ಹಾಗೂ ವಿಜಯಪುರಕ್ಕೆ ರವಾನಿಸುವ ನಿರ್ಧಾರದ ಕುರಿತು ಸಮಗ್ರ ತನಿಖೆ ನಡೆಸಬೇಕು. ಸಂಬಂಧಿಸಿದ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಯ ಪಾತ್ರವನ್ನು ಪರಿಶೀಲಿಸಿ, ನಿರ್ಲಕ್ಷ್ಯ ಸಾಬೀತಾದರೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ತಾಯಿ-ಮಗು ಸಾವಿನ ಘಟನೆ ಆಸ್ಪತ್ರೆಯ ವೈದ್ಯಕೀಯ ಸೇವೆಗಳ ಕುರಿತು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ಆರೋಗ್ಯ ಇಲಾಖೆ ತನಿಖೆಯ ಬಳಿಕವೇ ಘಟನೆಯ ನಿಖರ ಕಾರಣ ಬೆಳಕಿಗೆ ಬರಬೇಕಿದೆ.

ಕುಟುಂಬಸ್ಥರ ಆರೋಪ

“ಆಸ್ಪತ್ರೆಯಲ್ಲಿ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡಲಿಲ್ಲ. ಮಹಿಳೆ ನೋವಿನಿಂದ ಒದ್ದಾಡುತ್ತಿದ್ದರೂ ಸೂಕ್ತ ಗಮನ ಹರಿಸಲಿಲ್ಲ. ವಿಜಯಪುರಕ್ಕೆ ಕರೆದೊಯ್ಯುವ ವೇಳೆಗೆ ತಡವಾಗಿತ್ತು. ಇದರ ಪರಿಣಾಮವಾಗಿ ತಾಯಿ ಮತ್ತು ಮಗು ಇಬ್ಬರನ್ನೂ ಕಳೆದುಕೊಳ್ಳಬೇಕಾಯಿತು”

– ಶಿವಾನಂದ ವಡಗೇರಿ
ಮೃತ ಬಾಣಂತಿಯ ಪತಿ

ತನಿಖೆಗೆ ಒತ್ತಾಯ

ಘಟನೆಯ ಕುರಿತು ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಉನ್ನತ ಮಟ್ಟದ ತನಿಖೆ ನಡೆಸಿ, ಸತ್ಯಾಂಶವನ್ನು ಬಹಿರಂಗಪಡಿಸಬೇಕು. ಬಡ ಜನರು ಅವಲಂಬಿಸಿರುವ ಸರ್ಕಾರಿ ಆಸ್ಪತ್ರೆಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

“ನಮ್ಮಲ್ಲಿ ಸೆ. ೨೨ ರಂದು ೧೧ ಘಂಟೆಗೆ ಮಹಿಳೆ ಬಾಣಂತನಕ್ಕೆ ದಾಖಲಾಗಿದ್ದಾರೆ. ಮಹಿಳಾ ವೈದ್ಯರು ಚೆಕ್ ಮಾಡಿ ಮುಂದಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ರವಾನಿಸಲು ತಿಳಿಸಿದ್ದಾರೆ. ಮದ್ಯಾಹ್ನ ೧ ಗಂಟೆಯ ನಂತರ ಅಂಬುಲೆನ್ಸ ಮುಖಾಂತರ ವಿಜಯಪುರಕ್ಕೆ ಕಳುಹಿಸಲಾಗಿದೆ.”

– ಡಾ. ಆರ್.ಎಸ್.ಇಂಗಳೆ
ಮುಖ್ಯ ವೈದ್ಯಾಧಿಕಾರಿ & ತಾಲೂಕು ವೈದ್ಯಾಧಿಕಾರಿ ಇಂಡಿ

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ

ಸೆ.೨೮ರಿಂದ ೩೦ವರೆಗೆ ಬ್ಯಾಂಕ್ ನೌಕರರ ಮುಷ್ಕರ

ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.೨೮ ರಿಂದ ದೈಹಿಕ ಪರೀಕ್ಷೆಗಳು ಆರಂಭ

ಮಹಿಳಾ ಅಭಿವೃದ್ಧಿ ನಿಗಮದವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಸೆ.೨೮ರಿಂದ ೩೦ವರೆಗೆ ಬ್ಯಾಂಕ್ ನೌಕರರ ಮುಷ್ಕರ
    In (ರಾಜ್ಯ ) ಜಿಲ್ಲೆ
  • ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.೨೮ ರಿಂದ ದೈಹಿಕ ಪರೀಕ್ಷೆಗಳು ಆರಂಭ
    In (ರಾಜ್ಯ ) ಜಿಲ್ಲೆ
  • ಮಹಿಳಾ ಅಭಿವೃದ್ಧಿ ನಿಗಮದವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಇಂಡಿ: ಕೆಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಸಿಕ ಗೌರವಧನ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿಯಲ್ಲಿ ಕಾನೂನು ಅರಿವು ಮತ್ತು ನೆರವು
    In (ರಾಜ್ಯ ) ಜಿಲ್ಲೆ
  • ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಪತ್ರ ಚಳುವಳಿ
    In (ರಾಜ್ಯ ) ಜಿಲ್ಲೆ
  • ರೆಡ್ಡಿ ಸಮಾಜದ ಅಭಿನಂದನಾ ಸಮಾವೇಶ ಯಶಸ್ವಿಗೊಳಿಸಿ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಣಂತಿ ಸಾವಿಗೆ ತೀವ್ರ ಆಕ್ರೋಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.