ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೬-೨೭ನೇ ಸಾಲಿಗೆ ಜೈನ್ ಅರ್ಚಕರು, ಬೌದ್ಧ ಧಮ್ಮಾಚಾರಿಗಳು ಹಾಗೂ ಸಿಖ್ ಗ್ರಂಥಿಗಳಿಗೆ ಮಾಸಿಕ ಗೌರವಧನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ಸಮುದಾಯದ ಜೈನ ಬಸದಿಗಳ ಅರ್ಚಕರು, ಬೌದ್ಧ ವಿಹಾರಗಳ ಧಮ್ಮಾಚಾರಿಗಳು ಹಾಗೂ ಸಿಖ್ ಗುರುದ್ವಾರಗಳ ಗ್ರಂಥಿಗಳು ಮಾಸಿಕ ಗೌರವಧನ ಪಡೆಯಲು ಸೇವಾಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅಗತ್ಯ ದಾಖಲಾತಿಗಳನ್ನು ಸಹಿತ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಇವರ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ವಿಜಯಪುರ ಕಚೇರಿಯ ದೂರವಾಣಿ ಸಂಖ್ಯೆ: ೦೮೩೫೨-೨೯೫೫೨೩ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
