ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ೨೦೨೬-೨೭ನೇ ಸಾಲಿಗೆ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದ್ದಾರೆ.
ಅರ್ಹರು ಸೇವಾ ಸಿಂಧು ಪೋರ್ಟಲ್ ಅಥವಾ ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಅ.೩೧ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಜಯಪುರ ಕಚೇರಿಗೆ ಖುದ್ದಾಗಿ ಭೇಟಿ ನೀಡಿ, ಅಥವಾ ದೂರವಾಣಿ ೦೮೩೫೨-೨೯೫೩೫೩. ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.
