ಮುದ್ದೇಬಿಹಾಳ: ನ.೧ ರಂದು ಸಂಜೆ ೬ಕ್ಕೆ ಪಟ್ಟಣದ ಪುರಸಭೆ ಕಾರ್ಯಾಲಯದ ಎದುರಿಗೆ ಟ್ರಾö್ಯಕ್ಸ್ ನಿಲ್ದಾಣದಲ್ಲಿ ಕಲಾವಿದರ ಬಳಗದಿಂದ ಕನ್ನಡ ರಾಜ್ಯೋತ್ಸವ ಹಾಗೂ ಪುನೀತ ನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕುಂಟೋಜಿ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ದೇವರು ವಹಿಸಲಿದ್ದು, ಕಾಂಗ್ರೇಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಉದ್ಘಾಟಿಸಲಿದ್ದಾರೆ. ಸಮಾಜ ಸೇವಕ ಸಿ.ಬಿ.ಅಸ್ಕಿ, ಪುರಸಭೆ ಸದಸ್ಯ ಮಹೆಬೂಬ ಗೊಳಸಂಗಿ, ಮಾಜಿ ಸಮಸದಸ್ಯ ಕಾಮರಾಜ ಬಿರಾದಾರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು ಪುನೀತ ಅಭಿಮಾನಿಗಳು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಕನ್ನಡಾಭಿಮಾನಿಗಳು, ಕಲಾವಿದರು, ಪುನೀತ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವಂತೆ ಆಯೋಜಕರು ಕೋರಿದ್ದಾರೆ
Related Posts
Add A Comment