ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಸೆಪ್ಟೆಂಬರ್ 27 ರವಿವಾರದಿಂದ ಸೆಪ್ಟೆಂಬರ್ 30 ಬುಧವಾರ ಮಧ್ಯಾಹ್ನದ ವರೆಗೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಈ ದಿನಗಳಲ್ಲಿ ಸಚಿವರು ಬೆಳಿಗ್ಗೆ 10 ರಿಂದ ಬೆಳಿಗ್ಗೆ 11 ಗಂಟೆಯವರೆಗೆ ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ. ನಂತರ ಸ್ಥಳೀಯ ಕಾರ್ಯಕ್ರಮಗಳಲ್ಲಿ ಪಾಲ್ಗೋಳ್ಳಲಿದ್ದಾರೆ ಎಂದು ಸಚಿವರ ಕಚೇರಿಯ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

