Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ

ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ

ಉಪ ವಿಭಾಗಾಧಿಕಾರಿ ಹುದ್ದೆಗೆ ಬಡ್ತಿ ಪಡೆದ ಸಿದ್ಧರಾಯಗೆ ಸನ್ಮಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯುಕೆಪಿ ಯೋಜನೆ ಪೂರ್ಣಗೊಳಿಸಲು ಆದ್ಯತೆ ನೀಡಿ
(ರಾಜ್ಯ ) ಜಿಲ್ಲೆ

ಯುಕೆಪಿ ಯೋಜನೆ ಪೂರ್ಣಗೊಳಿಸಲು ಆದ್ಯತೆ ನೀಡಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಸರ್ಕಾರಕ್ಕೆ ಆಗ್ರಹ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಆಲಮಟ್ಟಿ ಆಣೆಕಟ್ಟು ಎತ್ತರ ಹೆಚ್ಚಳದಿಂದ ಎಲ್ಲ ನೀರಾವರಿ ಯೋಜನೆಗಳು ಪೂರ್ಣಗೊಂಡರೆ ಹತ್ತು ಬರ ಬಂದರೂ ಯಾವ ಹಾನಿಯಾಗುವುದಿಲ್ಲ, ಹೀಗಾಗಿ ಬರವನ್ನು ಶಾಶ್ವತವಾಗಿ ದೂರ ಮಾಡುವ ನಿಟ್ಟಿನಲ್ಲಿ ಯುಕೆಪಿ ಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆ ನೀಡಿದರೆ ಉತ್ತರ ಕರ್ನಾಟಕ ಬರ ಮುಕ್ತವಾಗಲಿದೆ, ಹೀಗಾಗಿ ವಿಜಯಪುರ ಜಿಲ್ಲೆಯಲ್ಲಿ ಸಚಿವ ಸಂಪುಟದಲ್ಲಿ ಸಭೆ ನಡೆಸಿ ಈ ಮಹತ್ವದ ನಿರ್ಣಯ ಕೈಗೊಳ್ಳಿ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಒತ್ತಾಯಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಭಾಗದಲ್ಲಿ ಸಚಿವ ಸಂಪುಟ ಸಭೆ ನಡೆಸಿ ೩೮ ಸಾವಿರ ಕೋಟಿ ರೂ. ವಿಶೇಷ ಪ್ಯಾಕೇಜ್ ನೀಡುವ ಮೂಲಕ ಹೊಸ ಹೆಜ್ಜೆ ಸರ್ಕಾರ ಇರಿಸಿದೆ, ಅದೇ ತೆರನಾಗಿ ನಮ್ಮ ಭಾಗದಲ್ಲಿ ಸಚಿವ ಸಂಪುಟ ಸಭೆ ನಡೆಸಿ ಯುಕೆಪಿ ಯೋಜನೆಗಳಿಗೆ ಆದ್ಯತೆ ಹಾಗೂ ಜಿಲ್ಲೆಯ ವಿವಿಧ ಸಮಸ್ಯೆಗಳ ನಿವಾರಣೆಗೆ ಆದ್ಯತೆ ನೀಡಿ, ಕಲಬುರ್ಗಿ, ಮಂಗಳೂರು ಮೊದಲಾಧ ಕಡೆಗಳಲ್ಲಿ ಸಚಿವ ಸಂಪುಟ ಸಭೆ ನಡೆದಿದೆ, ನಮ್ಮಲ್ಲಿಯೂ ಸಚಿವ ಸಂಪುಟ ಸಭೆ ನಡೆಸಬೇಕು ಎಂದು ಒತ್ತಾಯಿಸಿದರು.
ಅತೀ ಹೆಚ್ಚು ಬರ ಎದುರಿಸಿದ ಜಿಲ್ಲೆ ವಿಜಯಪುರ, ಜಿಲ್ಲೆಯ ಇಂಡಿ, ಸಿಂದಗಿ, ಚಡಚಣ ಈ ತಾಲೂಕುಗಳು ಅತ್ಯಂತ ಭೀಕರ ಬರ ಪರಿಸ್ಥಿತಿ ಎದುರಿಸುವ ತಾಲೂಕುಗಳು, ಮತ್ತೊಂದು ಪಟ್ಟಿಯಲ್ಲಿಯೂ ಇಂಡಿ, ಚಡಚಣ ತಾಲೂಕುಗಳು ಹೆಸರು ಇರದೇ ಇರುವುದು ನನ್ನ ಮನಸ್ಸಿಗೆ ಬೇಜಾರಾಯಿತು. ಈ ಕಾರಣಕ್ಕೆ ರಾಜಿನಾಮೆ ನೀಡುವ ನಿರ್ಧಾರ ಪ್ರಕಟಿಸಿದ್ದೆ, ಆಗ ಸಂಜೆ ಪುನ: ೨೯ ತಾಲೂಕುಗಳು ಘೋಷಣೆ ಮಾಡಲಾಗಿ ಅಲ್ಲಿ ಇಂಡಿ, ಚಡಚಣ ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಲಾಯಿತು. ನಮ್ಮ ತಾಲೂಕುಗಳ ಪಟ್ಟಿಯಲ್ಲಿ ಇಂಡಿ ಹಾಗೂ ಚಡಚಣ ಘೋಷಣೆಯಾಗದಿರುವುದು ನನ್ನ ಮನಸ್ಸಿಗೆ ಸಮಾಧಾನವಾಗಿ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದೆ ಎಂದರು.
ಬರ ನಿರ್ವಹಣೆ ಹಾಗೂ ಮೇಲುಸ್ತುವಾರಿಗಾಗಿ ಸರ್ಕಾರ ಸಚಿವ ಸಂಪುಟ ಉಪ ಸಮಿತಿ ಸಹ ರಚಿಸಿದ್ದು, ಈ ಸಮಿತಿ ಕಾಲ ಕಾಲಕ್ಕೆ ಸಭೆ ನಡೆಸುತ್ತಿದೆ, ಬರಗಾಲದ ಮುನ್ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಪ್ರಿಲ್ ತಿಂಗಳಲ್ಲಿಯೇ ಬರ ಪರಿಸ್ಥಿತಿ ಎದುರಿಸುವ ನಿಟ್ಟಿನಲ್ಲಿ ಸಿದ್ಧತೆ ನಡೆಸಿತ್ತು. ಕೇಂದ್ರ ಸರ್ಕಾರ ರೂಪಿಸುವ ಬರ ನಿರ್ವಹಣೆ ಮಾರ್ಗಸೂಚಿ ಅನ್ವಯ ನಿಭಾಯಿಸಲಾಗುತ್ತಿದೆ, ಭೂಕಂಪ, ಅತಿವೃಷ್ಟಿ, ಅನಾವೃಷ್ಟಿ ಮೊದಲಾದವುಗಳನ್ನು ಸಮರ್ಥವಾಗಿ ಸರ್ಕಾರಗಳು ಎದುರಿಸಿದರೂ ಸಹ ಪ್ರಾಕೃತಿಕ ವಿಕೋಪಗಳಿಂದ ಆಗುವ ಹಾನಿಯನ್ನು ಯಾರೂ ಭರಿಸಲು ಸಾಧ್ಯವಿಲ್ಲ ಎಂದರು.
ಬರ ಪರಿಸ್ಥಿತಿ ಕೇಂದ್ರ ಸರ್ಕಾರಕ್ಕೆ ವಾಸ್ತವಿಕ ವರದಿ ನೀಡಬೇಕಾಗಿರುವುದರಿಂದ ಹಂತ ಹಂತವಾಗಿ ಬರ ಘೋಷಣೆ ಮಾಡಲಾಗುತ್ತಿದೆ, ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಮೂರು ವಾರಗಳ ಮಳೆ ಕೊರತೆ, ತೇವಾಂಶ ಕೊರತೆ, ಬೆಳೆ ಹಾನಿ ಎಲ್ಲ ಆಯಾಮಗಳಲ್ಲಿಯೂ ಅವಲೋಕಿಸಿ ಬರ ಘೋಷಣೆ ಮಾಡಲಾಗುತ್ತಿದೆ, ಯಾವ ವಿಷಯದಲ್ಲಿಯೂ ಹಿನ್ನೆಡೆಯಾಗಬಾರದು ಎಂದು ಅತ್ಯಂತ ಅವೈಜ್ಞಾನಿಕವಾಗಿ, ನಿಖರವಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಪಾಲಿಸಲಾಗುತ್ತಿದೆ ಎಂದರು.

ಬಾಕ್ಸ್ ೧

ಹೊಸ ಸಕ್ಕರೆ ಕಾರ್ಖಾನೆಗಳಿಗೆ ಅನುಮತಿ ಬೇಡ

ರಾಜಕೀಯ ಕಾರಣಕ್ಕೆ ಅನೇಕ ಸಕ್ಕರೆ ಕಾರ್ಖಾನೆಗಳಿಗೆ ಅನುಮತಿಯನ್ನು ಬೇಕಾಬಿಟ್ಟಿಯಾಗಿ ನೀಡಲಾಗಿದೆ, ಹೊಸ ೮ ಸಕ್ಕರೆ ಕಾರ್ಖಾನೆಗಳಿಗೆ ಅನುಮತಿ ನೀಡಲಾಗುತ್ತಿದೆ, ಇತ್ತ ಕಬ್ಬಿನ ಕ್ಷೇತ್ರ ಹೆಚ್ಚುತ್ತಿಲ್ಲ, ಆದರೂ ಸಕ್ಕರೆ ಕಾರ್ಖಾನೆಗಳಿಗೆ ಅನುಮತಿ ನೀಡಲಾಗುತ್ತದೆ, ಕಬ್ಬಿನ ಕ್ಷೇತ್ರ ಹೆಚ್ಚಾಗದೇ ವಿನಾಕಾರಣ ಒತ್ತಡಕ್ಕೆ ಮಣಿದು ಕಾರ್ಖಾನೆಗಳಿಗೆ ಅನುಮತಿ ನೀಡುತ್ತಿರುವುದು ಸರಿಯಲ್ಲ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ನೆರೆ & ಬರ ನಿರ್ವಹಣೆಗೆ ಪ್ರತ್ಯೇಕ ಇಲಾಖೆ ಸ್ಥಾಪಿಸಿ

ನೆರೆ ಹಾಗೂ ಬರ ನಿರ್ವಹಣೆ ಹಿನ್ನೆಲೆಯಲ್ಲಿ ಪ್ರತ್ಯೇಕವಾದ ಇಲಾಖೆಯನ್ನೇ ಸ್ಥಾಪಿಸಿ ಈ ಪರಿಸ್ಥಿತಿ ನಿಭಾಯಿಸುವ ಹೊಣೆಗಾರಿಕೆ ವಹಿಸಬೇಕಿದೆ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಸಲಹೆ ನೀಡಿದರು.
ನೆರೆ ಹಾಗೂ ಬರ ಅನೇಕ ಬಾರಿ ನಮ್ಮ ರಾಜ್ಯ ಎದುರಿಸುತ್ತಿದೆ, ಒಮ್ಮೆ ಬರ ಬಂದರೆ, ಇನ್ನೊಮ್ಮೆ ನೆರೆ, ಹೀಗಾಗಿ ಪ್ರಾಕೃತಿಕ ವಿಕೋಪಗಳು ಕಾಡುವುದು ಸಹಜ, ಈ ಎಲ್ಲ ವಿಕೋಪಗಳು ಬಂದಾಗ ಅದರ ನಿರ್ವಹಣೆಗೆ ಎಲ್ಲ ಇಲಾಖೆಗಳು ಸಮನ್ವಯ ಸಾಧಿಸುವುದು ಕರ್ತವ್ಯ, ಇದಕ್ಕಾಗಿಯೇ ಪ್ರತ್ಯೇಕ ಇಲಾಖೆ ಇದ್ದರೆ ಸೂಕ್ತ, ಮಹಾರಾಷ್ಟ್ರ, ರಾಜಸ್ತಾನ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈ ಬರ ಹಾಗೂ ನೆರೆ ನಿರ್ವಹಣೆಯ ಪ್ರತ್ಯೇಕ ಇಲಾಖೆ ರೂಪಿಸಲಾಗಿದೆ, ಇದೇ ಮಾದರಿಯಲ್ಲಿ ನಮ್ಮ ರಾಜ್ಯದಲ್ಲಿಯೂ ಪ್ರತ್ಯೇಕ ಇಲಾಖೆ ಸ್ಥಾಪನೆಯಾಗಬೇಕಾಗಿರುವುದು ಅಗತ್ಯವಾಗಿದೆ ಎಂದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ

ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ

ಉಪ ವಿಭಾಗಾಧಿಕಾರಿ ಹುದ್ದೆಗೆ ಬಡ್ತಿ ಪಡೆದ ಸಿದ್ಧರಾಯಗೆ ಸನ್ಮಾನ

ವಿಜಯಪುರ ಜಿಲ್ಲೆ ಅಭಿವೃದ್ಧಿಗೆ ೩೭೧(ಜೆ) ಸೌಲಭ್ಯ ಕಲ್ಪಿಸಲು ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ
    In (ರಾಜ್ಯ ) ಜಿಲ್ಲೆ
  • ಉಪ ವಿಭಾಗಾಧಿಕಾರಿ ಹುದ್ದೆಗೆ ಬಡ್ತಿ ಪಡೆದ ಸಿದ್ಧರಾಯಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಅಭಿವೃದ್ಧಿಗೆ ೩೭೧(ಜೆ) ಸೌಲಭ್ಯ ಕಲ್ಪಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಅಗತ್ಯ ಬಿದ್ದರೆ ಕಬ್ಬು ಬೆಳೆಗಾರರ ಪರ ಹೋರಾಟಕ್ಕೂ ಸಿದ್ಧ
    In (ರಾಜ್ಯ ) ಜಿಲ್ಲೆ
  • ಶಾಸಕರಿಂದ ನನಗೆ ಬಹಿರಂಗವಾಗಿ ಜೀವಬೆದರಿಕೆ :ರಜಪೂತ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಹೆದ್ದಾರಿ ತಡೆ – ಪಟ್ಟು ಬಿಡದ ರೈತ ಸಮೂಹ
    In (ರಾಜ್ಯ ) ಜಿಲ್ಲೆ
  • ಅಲ್ಪಸಂಖ್ಯಾತರ ಸರಳ ವಿವಾಹ ಸಹಾಯಧನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅಂಗನವಾಡಿ ಕಂ-ಕ್ರಷ್ ಕೇಂದ್ರಗಳ ಕಾರ್ಯಕರ್ತೆ-ಸಹಾಯಕಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕಿತ್ತೂರು ಚೆನ್ನಮ್ಮ ವಿಜಯ ಜ್ಯೋತಿ ಯಾತ್ರೆಗೆ ಸ್ವಾಗತ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.