Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ

ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ

ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರವಾಸೋದ್ಯಮದಿಂದ ಉದ್ಯೋಗಾವಕಾಶ ಸೃಷ್ಟಿ :ಎಡಿಜಿಪಿ ಆರ್.ಹಿತೇಂದ್ರ
(ರಾಜ್ಯ ) ಜಿಲ್ಲೆ

ಪ್ರವಾಸೋದ್ಯಮದಿಂದ ಉದ್ಯೋಗಾವಕಾಶ ಸೃಷ್ಟಿ :ಎಡಿಜಿಪಿ ಆರ್.ಹಿತೇಂದ್ರ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ | ಐತಿಹಾಸಿಕ ಸ್ಮಾರಕಗಳ ಸ್ವಚ್ಛತೆಗೆ ಸ್ವಚ್ಛತಾ ಹೀ ಸೇವಾ ಆಂದೋಲನ | ಕಲಾವಿದರಿಗೆ ಚಿತ್ರಕಲಾ ಶಿಬಿರ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಐತಿಹಾಸಿಕ ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸುವುದರಿಂದ ಜಿಲ್ಲೆಯ ಆರ್ಥಿಕತೆಗೆ ಬಲ ಬರುವುದಲ್ಲದೇ, ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಆರ್. ಹಿತೇಂದ್ರ ಹೇಳಿದರು.
ವಿಶ್ವ ಪ್ರವಾಸೋದ್ಯಮ ದಿನಾಚರಣೆ-೨೦೨೬ರ ಅಂಗವಾಗಿ ಡಿಜಿಟಲ್ ಕಾರ್ಯಸೂಚಿ ಮತ್ತು ಕೃತಕ ಬುದ್ಧಿಮತ್ತೆ ಬಳಸಿ ಪ್ರವಾಸೋದ್ಯಮದ ಮರುಸೃಷ್ಟಿ ಎಂಬ ಧ್ಯೇಯಯವಾಕ್ಯದೊಂದಿಗೆ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ, ಪುರಾತತ್ವ, ವಸ್ತುಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ, ಕೂಡಗಿ ಎನ್.ಟಿ.ಪಿ.ಸಿ ಕೂಡಗಿ, ಹೋಟೆಲ್ ಅಸೋಸಿಯೇಷನ್ ವಿಜಯಪುರ ಹಾಗೂ ಬಿ.ಎಲ್.ಡಿ.ಇ ಶಿಕ್ಷಣ ಸಂಸ್ಥೆಯ ಶ್ರೀಮತಿ ಬಂಗಾರಮ್ಮ ಸಜ್ಜನ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಿಳಾ ವಿಶ್ವವಿದ್ಯಾಲಯದ ಸಹಯೋಗದಲ್ಲಿ ನಗರದ ಐತಿಹಾಸಿಕ ಆನಂದ ಮಹಲ್ ಸ್ಮಾರಕದ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಗರದಲ್ಲಿರುವ ಸ್ಮಾರಕಗಳಿಂದಾಗಿ ವಿಜಯಪುರ ವಿಶ್ವ ಪ್ರಸಿದ್ಧಿ ಪಡೆದಿದೆ. ಪ್ರವಾಸಿಗರನ್ನು ಆಕರ್ಷಿಸಿ, ಈ ಕ್ಷೇತ್ರದಲ್ಲಿ ವಿಪುಲ ಉದ್ಯೋಗಾವಕಾಶಗಳು ತೆರೆದುಕೊಳ್ಳಲಿವೆ ಎಂದರು.
ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಮಾತನಾಡಿ, ವಿಜಯಪುರ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳನ್ನು ಅಭಿವೃದ್ಧಿಪಡಿಸುವುದರ ಜೊತೆಗೆ ಪ್ರವಾಸಿಗರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಸ್ಮಾರಕಗಳ ಸಂರಕ್ಷಣೆ, ಸೌಂದರ್ಯೀಕರಣ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗೆ ವಿವಿಧ ಯೋಜನೆಗಳ ಮೂಲಕ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಸ್ವದೇಶ ದರ್ಶನ ಯೋಜನೆ-೨.೦ರಡಿ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಸ್ಮಾರಕ ದತ್ತು ಯೋಜನೆಯಡಿ ಐತಿಹಾಸಿಕ ತಾಜಬಾವಡಿ ಸ್ಮಾರಕವನ್ನು ಟಾಟಾ ಕನ್ಸಲ್ಟೆನ್ಸಿ ಫೌಂಡೇಷನ್ ಹಾಗೂ ವರ್ಲ್ಡ್ ಮಾನ್ಯುಮೆಂಟ್ ಫಂಡ್ಸ್ ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದ ಅವರು, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯಿಂದಲೂ ಜಿಲ್ಲೆಯ ವಿವಿಧ ಸ್ಮಾರಕಗಳ ಸಂರಕ್ಷಣಾ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಎನ್‌ಟಿಪಿಸಿ ಕೂಡಗಿ ಸಂಸ್ಥೆಯ ಸಂತೋಷ್ ತಿವಾರಿ ಮಾತನಾಡಿದರು.
ಈ ಸಂದರ್ಭದಲ್ಲಿ ಎನ್‌ಟಿಪಿಸಿ ಕಾರ್ಪೊರೇಟ್ ಸಂಪರ್ಕಾಧಿಕಾರಿ ಪೂಜಾ ಪಾಂಡೆ, ಡಿಜಿಎಂ ಜಯದೀಪ ತುಶಾರ, ಎಎಸ್‍ಐ ಸಹಾಯಕ ಸಂರಕ್ಷಣಾಧಿಕಾರಿ ವಿಜಯಕುಮಾರ, ಎಚ್.ಆರ್. ಮುಖ್ಯಸ್ಥ ಎಸ್.ವಿ.ಡಿ. ರವಿಕುಮಾರ, ಹೋಟೆಲ್ ಅಸೋಸಿಯೇಷನ್ ಕಾರ್ಯದರ್ಶಿ ವಿಜಯಕುಮಾರ ದೋಣಿ, ಡಿ.ಪಿ. ಜಾಧವ್, ಪೀಟರ್ ಅಲೆಕ್ಸಾಂಡರ್, ಅಮೀನ ಹುಲ್ಲೂರ, ಬಿ.ಎಲ್.ಡಿ.ಇ ಸಂಸ್ಥೆಯ ಪ್ರೊ. ವೈ. ತಮ್ಮಣ್ಣ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಸಹಾಯಕ ಸಂರಕ್ಷಣಾಧಿಕಾರಿ ಲಾರೆನ್ಸ್, ಮಹಾನಗರ ಪಾಲಿಕೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಿಬ್ಬಂದಿ, ಪ್ರವಾಸಿ ಮಾರ್ಗದರ್ಶಿಗಳು, ಇಲಾಖೆಯ ಅಧಿಕಾರಿಗಳು, ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಅರವಿಂದ ಹೂಗಾರ ಸ್ವಾಗತಿಸಿದರು. ಕಲಾವಿದ ರಮೇಶ ಚವ್ಹಾಣ ನಿರೂಪಿಸಿದರು.
ಚಿತ್ರಕಲಾ ಶಿಬಿರದಲ್ಲಿ ಕಲಾವಿದರಾದ ಪಿ.ಎಸ್. ಕಡೇಮನಿ, ವಿದ್ಯಾಧರ ಸಾಲಿ, ಬಿ.ಎಸ್. ಪಾಟೀಲ, ವಿ.ವಿ. ಹಿರೇಮಠ, ರಮೇಶ ಚವ್ಹಾಣ, ಶಿವಣ್ಣ ಗೊಳಸಂಗಿ, ಎ.ಎಸ್. ಕಾಖಂಡಕಿ, ಜಿ.ಎಸ್. ಭೂಸಗೊಂಡ, ಶಿವು ಹೂಗಾರ, ಸವಿತಾ ಮಾನೆ, ವಿಶ್ವನಾಥ್ ಹಂಡಿ, ಶಿವಾನಂದ ಅಥಣಿ, ಸಿದ್ದು ಬಳೂಲಗಿಡದ, ಮಲ್ಲಿಕಾರ್ಜುನ್ ಚಿಂಚೋಳಿ, ರಾಘವೇಂದ್ರ ಪಾಟೀಲ, ಕೃಷ್ಣ ಬಡಿಗೇರ, ಗಂಗಾಧರ ಮಾಯಾಚಾರಿ, ಅಮಿತ ಕಮ್ಮಾರ, ವಿಶ್ವನಾಥ್ ಎಚ್.ಎಂ., ಶ್ರೀಶೈಲ ಹೂಗಾರ, ಗಿರಿಜಾ ಬಿರಾದಾರ, ಆನಂದ್ ಹೂಗಾರ, ಅಶೋಕ ನೆಲ್ಲಗಿ, ಜಿ.ವಿ. ಹಂಪಣ್ಣವರ ಹಾಗೂ ವೈಷ್ಣವಿ ಚವ್ಹಾಣ ಸೇರಿದಂತೆ ೨೫ಕ್ಕೂ ಹೆಚ್ಚು ಕಲಾವಿದರು ಭಾಗವಹಿಸಿದ್ದರು.

ಚಿತ್ರಕಲಾ ಶಿಬಿರಕ್ಕೆ ಡಿಸಿ ಚಾಲನೆ

ಇದಕ್ಕೂ ಮುನ್ನ ಆನಂದ ಮಹಲ್ ಸ್ಮಾರಕದ ಆವರಣದಲ್ಲಿ ಸ್ವಚ್ಛತಾ ಹೀ ಸೇವಾ ಆಂದೋಲನದಡಿ ಸ್ಮಾರಕ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಅರವಿಂದ ಹೂಗಾರ ಅವರು ಚಾಲನೆ ನೀಡಿದರು.
ಜೊತೆಗೆ ಎನ್.ಟಿ.ಪಿ.ಸಿ ಕೂಡಗಿ ಮತ್ತು ಕ್ಯಾನವಾಸ್ ಆರ್ಟ್ ಫೌಂಡೇಶನ್ ಸಹಯೋಗದಲ್ಲಿ ಐತಿಹಾಸಿಕ ಇಬ್ರಾಹಿಂ ರೋಜಾ ಸ್ಮಾರಕದ ಆವರಣದಲ್ಲಿ ಹಿರಿಯ ಹಾಗೂ ಉದಯೋನ್ಮುಖ ಕಲಾವಿದರಿಗಾಗಿ ಆಕರ್ಷಕ ಚಿತ್ರಕಲಾ ಶಿಬಿರ ಆಯೋಜಿಸಲಾಗಿತ್ತು. ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಸ್ವತಃ ಕಲಾಕೃತಿ ಬಿಡಿಸುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ

ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ

ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ

ಕುಸ್ತಿ ಅಖಾಡದಲ್ಲಿ ಚಿಕ್ಕಪಡಸಲಗಿ ಶಾಲೆ ವಿದ್ಯಾರ್ಥಿಗಳ ಸಾಧನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ
    In (ರಾಜ್ಯ ) ಜಿಲ್ಲೆ
  • ಕುಸ್ತಿ ಅಖಾಡದಲ್ಲಿ ಚಿಕ್ಕಪಡಸಲಗಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೇಂದ್ರ ಸಚಿವರ ಮನೆ ಎದುರು ಪ್ರತಿಭಟನೆ :ಪೂಜಾರಿ
    In (ರಾಜ್ಯ ) ಜಿಲ್ಲೆ
  • ಚಿಮ್ಮಲಗಿ ಪಶ್ಚಿಮ ಕಾಲುವೆಯಲ್ಲಿ ಅಕ್ರಮ ಪಂಪ್‌ಸೆಟ್ ಹಾವಳಿ
    In (ರಾಜ್ಯ ) ಜಿಲ್ಲೆ
  • ಸೆ.೨೯ ರಂದು ಕೇಂದ್ರ ಸಚಿವ ಜೋಶಿ ಮನೆಗೆ ಮುತ್ತಿಗೆ
    In (ರಾಜ್ಯ ) ಜಿಲ್ಲೆ
  • ಚಡಚಣವನ್ನು ತೀವ್ರ ಬರವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪ್ರತಿಯೊಬ್ಬರು ಒಂದು ಗಿಡ ನೆಟ್ಟು ಪೋಷಿಸಿ :ಕರ್ನಲ್ ವಂಶಿ
    In (ರಾಜ್ಯ ) ಜಿಲ್ಲೆ
  • ಪ್ರವಾಸೋದ್ಯಮದಿಂದ ಉದ್ಯೋಗಾವಕಾಶ ಸೃಷ್ಟಿ :ಎಡಿಜಿಪಿ ಆರ್.ಹಿತೇಂದ್ರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.