ಉದಯರಶ್ಮಿ ದಿನಪತ್ರಿಕೆ
ಇಂಡಿ: ರೈತರ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಸೆ. ೨೯ರಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಹುಬ್ಬಳ್ಳಿ ನಿವಾಸದ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕಾಧ್ಯಕ್ಷ ಮಾಳಪ್ಪ ಪೂಜಾರಿ ಹೇಳಿದರು.
ಶನಿವಾರ ನಗರದ ಖಾಸಗಿ ಹೋಟೆಲಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಎಂ.ಎಸ್.ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು, ಕೃಷಿ ಉತ್ಪನ್ನಗಳಿಗೆ ಕಾನೂನಬದ್ಧ ಕನಿಷ್ಠ ಬೆಂಬಲ ಬೆಲೆ ಖಾತ್ರಿಪಡಿಸಬೇಕು, ಸಕ್ಕರೆಗೆ ಸಾರ್ವಜನಿಕರಿಗೆ ಒಂದು ದರ, ವ್ಯಾಪರಸ್ಥರಾದ ಕೋಕೋ ಕೊಲಾಗಳಂತವರಿಗೆ ಕನಿಷ್ಠ ಪ್ರತಿ ಕೆ.ಜಿ.ಗೆ ೧೦೦ ಬೆಲೆ ನಿಗದಿ ಮಾಡಬೇಕು, ರೈತರ ಕೃಷಿ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ದೊರೆಯುವಂತೆ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ರಾಜ್ಯದ ವಿವಿಧ ಜಿಲ್ಲೆಗಳಿಂದ ರೈತರು ಹೋರಾಟದಲ್ಲಿ ಭಾಗಿಯಾಗಲಿದ್ದು, ಇಂಡಿ ತಾಲೂಕಿಯಿಂದಲೂ ಸಾವಿರಾರು ಜನ ಪಾಲ್ಗೊಳ್ಳುವರು ಎಂದು ತಿಳಿಸಿದರು.
ಎಸ್.ಟಿ.ಪಾಟೀಲ, ವಿವೇಕಾನಂದ ಪೂಜಾರಿ, ಬಸವರಾಜ ಬಪಾಟೀಲ ಮಾತನಾಡಿದರು.
ರೈತ ಮುಖಂಡರಾದ ದತ್ತಾತ್ರೆಯ ಡೋಣಿ, ಸಿದ್ರಾಮಪ್ಪ ವಳಸಂಗ, ಆನಂದಗೌಡ ಬಿರಾದಾರ, ಮಾಂತೇಶ ಬಡಿಗೇರ ಇದ್ದರು.

