Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ

ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ

ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ
(ರಾಜ್ಯ ) ಜಿಲ್ಲೆ

ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಲೋಕ್ ಅದಾಲತ್ ನಲ್ಲಿ ೬೦೫ ಪ್ರಕರಣಗಳ ಇತ್ಯರ್ಥ | ಹಿರಿಯ ಸಿವಿಲ್ ನ್ಯಾಯಾಧೀಶ ರವೀಂದ್ರಕುಮಾರ ಕಟ್ಟಿಮನಿ ಪಕ್ಷಗಾರರಿಗೆ ಕರೆ

ಉದಯರಶ್ಮಿ ದಿನಪತ್ರಿಕೆ

​ಮುದ್ದೇಬಿಹಾಳ: ವರ್ಷಗಟ್ಟಲೆ ನ್ಯಾಯಾಲಯಕ್ಕೆ ಅಲೆದಾಡಿ ಹಣ, ಸಮಯ ಮತ್ತು ಮಾನಸಿಕ ನೆಮ್ಮದಿ ಹಾಳುಮಾಡಿಕೊಳ್ಳುವ ಬದಲು, ಲೋಕ್ ಅದಾಲತ್ ಮೂಲಕ ಸೌಹಾರ್ದಯುತವಾಗಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಹಿರಿಯ ಸಿವಿಲ್ ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟಿಮನಿ ಅವರು ಪಕ್ಷಗಾರರಿಗೆ ಕರೆ ನೀಡಿದರು.
​ ಪಟ್ಟಣದ ನ್ಯಾಯಾಲಯಗಳ ಸಂಕೀರ್ಣದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ ಪಡಿಸಿ ಅವರು ಮಾತನಾಡಿದರು.
ಸಾಮಾನ್ಯ ನ್ಯಾಯಾಲಯಗಳಲ್ಲಿ ವಾದ-ಪ್ರತಿವಾದ ನಡೆದು ಒಬ್ಬರಿಗೆ ಗೆಲುವಾದರೆ ಮತ್ತೊಬ್ಬರಿಗೆ ಸೋಲಾಗುತ್ತದೆ. ಇದರಿಂದ ದ್ವೇಷ ಮತ್ತಷ್ಟು ಬೆಳೆಯುತ್ತದೆ. ಆದರೆ ಲೋಕ್ ಅದಾಲತ್ ರಾಜಿ-ಸಂಧಾನದ ವೇದಿಕೆಯಾಗಿದ್ದು, ಇಲ್ಲಿ ಯಾರೂ ಸೋಲುವುದಿಲ್ಲ. ಉಭಯ ಪಕ್ಷಕಾರರಿಗೂ ಜಯ ಸಿಗುತ್ತದೆ, ಮತ್ತು ಸಂಬಂಧಗಳು ಇನ್ನಷ್ಟು ಗಟ್ಟಿಯಾಗುತ್ತವೆ. ಹಾಗಾಗಿ ಲೋಕ್ ಅದಾಲತ್ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡು ನೆಮ್ಮದಿಯ ಜೀವನ ಸಾಗಿಸುವತ್ತ ಪಕ್ಷಗಾರರು ಮುಂದಾಗಬೇಕು ಎಂದರು.
​ ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳೂ ಹಾಗೂ ಸಿವಿಲ್ ನ್ಯಾಯಾಧೀಶರಾದ ರಾಮಮೂರ್ತಿ ಎನ್ ಅವರು ಮಾತನಾಡಿ, ಸಣ್ಣಪುಟ್ಟ ಆಸ್ತಿ ತಕರಾರು, ಕೌಟುಂಬಿಕ ಮನಸ್ತಾಪ ಅಥವಾ ಹಣಕಾಸಿನ ವಿವಾದಗಳಿಗೆ ಹಠ ಹಿಡಿದು ವರ್ಷಗಟ್ಟಲೆ ಕೋರ್ಟ್ ಮೆಟ್ಟಿಲು ಹತ್ತಿ ಇಳಿಯುವುದು ಜಾಣತನವಲ್ಲ. ತೀರ್ಪು ಬರುವ ಹೊತ್ತಿಗೆ ಇಡೀ ಜೀವನವೇ ಮುಗಿದುಹೋಗಿರುತ್ತದೆ. ಅಹಂಕಾರ ಮತ್ತು ಪ್ರತಿಷ್ಠೆಯನ್ನು ಬದಿಗಿಟ್ಟು ಮುಕ್ತ ಮನಸ್ಸಿನಿಂದ ಲೋಕ್ ಅದಾಲತ್‌ಗೆ ಬನ್ನಿ. ಇಲ್ಲಿ ನೀಡುವ ತೀರ್ಪಿಗೆ ಯಾವುದೇ ಮೇಲ್ಮನವಿ ಇರುವುದಿಲ್ಲವಾದ್ದರಿಂದ ನಿಮ್ಮ ವ್ಯಾಜ್ಯಕ್ಕೆ ಶಾಶ್ವತ ಪೂರ್ಣವಿರಾಮ ಬೀಳುತ್ತದೆ. ಸಾರ್ವಜನಿಕರು ಹಾಗೂ ವಕೀಲ ಮಿತ್ರರು ಈ ಜನಸ್ನೇಹಿ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಲೋಕ ಅದಾಲತ್ ನಲ್ಲಿ ಎರಡು ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ ಒಟ್ಟು ೭೦೪೫ ಬಾಕಿ ಇರುವ ಪ್ರಕರಣಗಳ ಪೈಕಿ ೧೩೦೦ ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಅವುಗಳಲ್ಲಿ ಒಟ್ಟು ೬೦೫ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ. ಸಂಧಾನಕಾರರಾಗಿ ಆರ್.ಬಿ.ಕುಲಕರ್ಣಿ ಮತ್ತು ಎನ್.ಬಿ.ಮುದ್ನಾಳ ವಕೀಲರುಗಳು ಭಾಗಿಯಾದರೆ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ, ಹಿರಿಯ ನ್ಯಾಯವಾದಿಗಳಾದ ವಿ.ಎಂ.ನಾಗಠಾಣ, ಜೆ.ಎ.ಚಿನಿವಾರ, ಎಂ.ಎ.ಮುದ್ದೇಬಿಹಾಳ, ಎಸ್.ಎಂ.ಗುಡದಿನ್ನಿ, ಎಂ.ಎಚ್.ಕ್ವಾರಿ, ಎನ್.ಜಿ.ಕುಲಕರ್ಣಿ, ಎಸ್.ಆರ್.ಸಜ್ಜನ, ನ್ಯಾಯವಾದಿಗಳಾದ ಎಸ್.ಎಂ.ಕಿಣಗಿ, ಎನ್.ಐ.ಕೇಸಾಪೂರ, ಚೇತನ ಶಿವಶಿಂಪಿ ಸೇರಿದಂತೆ ಎಲ್ಲ ನ್ಯಾಯವಾದಿಗಳು ಲೋಕ್ ಅದಾಲತ್ ಯಶಸ್ವಿಗೆ ಶ್ರಮಿಸಿದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ

ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ

ಕುಸ್ತಿ ಅಖಾಡದಲ್ಲಿ ಚಿಕ್ಕಪಡಸಲಗಿ ಶಾಲೆ ವಿದ್ಯಾರ್ಥಿಗಳ ಸಾಧನೆ

ಕೇಂದ್ರ ಸಚಿವರ ಮನೆ ಎದುರು ಪ್ರತಿಭಟನೆ :ಪೂಜಾರಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ
    In (ರಾಜ್ಯ ) ಜಿಲ್ಲೆ
  • ಕುಸ್ತಿ ಅಖಾಡದಲ್ಲಿ ಚಿಕ್ಕಪಡಸಲಗಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೇಂದ್ರ ಸಚಿವರ ಮನೆ ಎದುರು ಪ್ರತಿಭಟನೆ :ಪೂಜಾರಿ
    In (ರಾಜ್ಯ ) ಜಿಲ್ಲೆ
  • ಚಿಮ್ಮಲಗಿ ಪಶ್ಚಿಮ ಕಾಲುವೆಯಲ್ಲಿ ಅಕ್ರಮ ಪಂಪ್‌ಸೆಟ್ ಹಾವಳಿ
    In (ರಾಜ್ಯ ) ಜಿಲ್ಲೆ
  • ಸೆ.೨೯ ರಂದು ಕೇಂದ್ರ ಸಚಿವ ಜೋಶಿ ಮನೆಗೆ ಮುತ್ತಿಗೆ
    In (ರಾಜ್ಯ ) ಜಿಲ್ಲೆ
  • ಚಡಚಣವನ್ನು ತೀವ್ರ ಬರವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪ್ರತಿಯೊಬ್ಬರು ಒಂದು ಗಿಡ ನೆಟ್ಟು ಪೋಷಿಸಿ :ಕರ್ನಲ್ ವಂಶಿ
    In (ರಾಜ್ಯ ) ಜಿಲ್ಲೆ
  • ಪ್ರವಾಸೋದ್ಯಮದಿಂದ ಉದ್ಯೋಗಾವಕಾಶ ಸೃಷ್ಟಿ :ಎಡಿಜಿಪಿ ಆರ್.ಹಿತೇಂದ್ರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.